ಬೆಂಗಳೂರು : ಮಾಜಿ ಮುಖ್ಯಮಂತ್ರಿ ಎಸ್.ನಿಜಲಿಂಗಪ್ಪ ಅವರು ದೇಶಕ್ಕೆ ಮಾಡಿದ ಸೇವೆ ನಮಗೆ ಆದರ್. ಅವರ ಆದರ್ಶಗಳನ್ನು ನಾವು ಮೈಗೂಡಿಸಿಕೊಂಡು ರಾಜ್ಯದ ಸೇವೆಯನ್ನು ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ವಿಧಾನಸೌಧದ ಪಶ್ಚಿಮ ದಿಕ್ಕಿನಲ್ಲಿರುವ ಮಾಜಿ ಮುಖ್ಯಮಂತ್ರಿಯವರಾದ ದಿ. ಎಸ್ ನಿಜಲಿಂಗಪ್ಪ ರವರ ಪುಣ್ಯತಿಥಿ ಅಂಗವಾಗಿ ಅವರ ಪ್ರತಿಮೆ ಗೆ ಮಾಲಾರ್ಪಣೆ ಮಾಡಿ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.
ಮಾಜಿ ಮುಖ್ಯಮಂತ್ರಿ ಎಸ್. ನಿಜಲಿಂಗಪ್ಪನವರು ಅವಿಭಜಿತ ಕಾಂಗ್ರೆಸ್ ನ ಎಐಸಿಸಿ ಅಧ್ಯಕ್ಷರಾಗಿದ್ದವರು. ಪ್ರತಿ ವರ್ಷ ಅವರ ಜನ್ಮದಿನ ಹಾಗೂ ಪುಣ್ಯತಿಥಿಯಂದು ಅವರ ಪ್ರತಿಮೆಗೆ ಪುಷ್ಪಾರ್ಚನೆ ಮಾಡಿ ಗೌರವವನ್ನು ಸರ್ಕಾರ ಸಲ್ಲಿಸುತ್ತಾ ಬಂದಿದೆ ಎಂದರು.
ದೇಶ ಕಂಡ ಅಪ್ರತಿಮ ನಾಯಕರು
ನಿಜಲಿಂಗಪ್ಪನವರು ಸ್ವಾತಂತ್ರ್ಯ ಹೋರಾಟಗಾರರು ಹಾಗೂ ದೇಶ ಕಂಡ ಅಪ್ರತಿಮ ನಾಯಕರು. ಎರಡು ಬಾರಿ ರಾಜ್ಯದ ಮುಖ್ಯಮಂತ್ರಿಗಳಾದರು. ಏಕೀಕರಣದ ಹೋರಾಟದಲ್ಲಿ ಭಾಗವಹಿಸಿ, ಕರ್ನಾಟಕದ ಏಕೀಕರಣದ ನಂತರ ಮೊದಲನೇ ಮುಖ್ಯ ಮಂತ್ರಿಗಳಾದರು. ಜನಪರ ಕಾಳಜಿಯಿದ್ದ ಮುಖ್ಯಮಂತ್ರಿಗಳು. ನೀರಾವರಿಗೆ ಹೆಚ್ಚಿನ ಆದ್ಯತೆ ನೀಡಿದರು. ಎಲ್ಲಕ್ಕಿಂತ ಮುಖ್ಯವಾಗಿ ಪ್ರಾಮಾಣಿಕ ರಾಜಕಾರಣಿ ಎಂದು ಮುಖ್ಯಮಂತ್ರಿಗಳು ಬಣ್ಣಿಸಿದರು.
ಉಡುಪಿ: ಇಲ್ಲಿನ ಮಲ್ಪೆ ಕೋಡಿಬೆಂಗ್ರೆ ಬೀಷಚ್ ಸಮೀಪ ಪ್ರವಾಸಿ ದೋಣಿ ಮುಗುಚಿದ ಪರಿಣಾಮ ತೀವ್ರ ಅಸ್ವಸ್ಥಗೊಂಡಿದ್ದ ಮೈಸೂರಿನ ಇಬ್ಬರು ಮೃತಪಟ್ಟಿರುವ…
ಹಾಸನ: ನಾನು ಜೆಡಿಎಸ್ ಬಿಟ್ಟು ಹೋದರೆ ದ್ರೋಹ ಹೇಗಾಗುತ್ತದೆ? ನಾನು ಅಲ್ಲಿದ್ದರೆ ಇನ್ನೊಂದು ಸೀಟ್ ಜಾಸ್ತಿ ಆಗೋದು ಅಷ್ಟೇ. ಏನು…
ಬೆಂಗಳೂರು: ವಿಧಾನಮಂಡಲ ವಿಶೇಷ ಜಂಟಿ ಅಧಿವೇಶನದಲ್ಲಿ ಭಾಷಣ ಮಾಡದೇ ತೆರಳುತ್ತಿದ್ದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಕಾಂಗ್ರೆಸ್ ಸದಸ್ಯರು…
ಮಳವಳ್ಳಿ: ಮಳವಳ್ಳಿ ತಾಲ್ಲೂಕಿನ ಹಲಗೂರು ಸಮೀಪದ ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದಾಗ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತಪಟ್ಟ ಘಟನೆ…
ಮಂಡ್ಯ: ಮಹಾತ್ಮ ಗಾಂಧೀಜಿ ಅವರ ವಿಚಾರಧಾರೆಗಳನ್ನು ಯುವ ಪೀಳಿಗೆಗೆ ತಲುಪಿಸುವ ಕೆಲಸವನ್ನು ಗಾಂಧಿ ಭವನದಲ್ಲಿ ಮಾಡಲಾಗುವುದು ಎಂದು ಮಂಡ್ಯ ಜಿಲ್ಲಾ…
ಮಂಡ್ಯ: ಮಂಡ್ಯ ಜಿಲ್ಲೆಯ ವ್ಯಾಪ್ತಿಯ ಗ್ರಾಮ ಪಂಚಾಯತ್‌ಗಳಲ್ಲಿ ದಿನಾಂಕ:31-10-2017ಕ್ಕೂ ಪೂರ್ವದಲ್ಲಿ ಗ್ರಾಮ ಪಂಚಾಯತ್ ನಿಂದ ನೇಮಕಗೊಂಡು ನೀರುಗಂಟಿ, ಸ್ವಚ್ಛತಗಾರ, ಅಟೆಂಡರ್…