ರಾಜ್ಯ

ಬಿಜೆಪಿಯ ಒಂದಷ್ಟು ನಾಯಕರು ರಾತ್ರಿ ವೇಳೆ ಡಿಸಿಎಂ ಡಿ.ಕೆ.ಶಿವಕುಮಾರ್‌ರನ್ನು ಭೇಟಿಯಾಗುತ್ತಾರೆ: ಎಸ್‌.ಟಿ.ಸೋಮಶೇಖರ್‌

ಬೆಳಗಾವಿ: ಬಿಜೆಪಿಯ ಒಂದಷ್ಟು ನಾಯಕರು ರಾತ್ರಿ ವೇಳೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರನ್ನು ಭೇಟಿಯಾಗುತ್ತಾರೆ. ಆದರೆ ನಾನು ಮಾತ್ರ ಬೆಳಿಗ್ಗೆ ವೇಳೆ ಭೇಟಿಯಾಗುತ್ತೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರಿಗೆ ಯಶವಂತಪುರದ ಶಾಸಕ ಎಸ್‌.ಟಿ.ಸೋಮಶೇಖರ್‌ ಟಾಂಗ್‌ ನೀಡಿದ್ದಾರೆ.

ಬೆಳಗಾವಿಯಲ್ಲಿ ಇಂದು(ಡಿ.9) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಜಯೇಂದ್ರ ಅವರು ನೇರವಾಗಿ ನನ್ನ ಹೆಸರು ಹೇಳದೆ ಆ ರೀತಿಯ ಹೇಳಿಕೆಗಳನ್ನು ನೀಡಿದ್ದಾರೆ. ಆದರೆ ನಾನು ಡಿ.ಕೆ.ಶಿವಕುಮಾರ್‌ ಅವರನ್ನು ರಾತ್ರಿ ವೇಳೆ ಭೇಟಿಯಾಗಿಲ್ಲ. ಬೆಳಿಗ್ಗಿನ ವೇಳೆಯೇ ಭೇಟಿ ಮಾಡುತ್ತೇನೆ ಎಂದು ತಿರುಗೇಟು ನೀಡಿದ್ದಾರೆ.

ನಾನು ನನ್ನ ವಿಧಾನಸಭಾ ಕ್ಷೇತ್ರದ ಸಲುವಾಗಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರನ್ನು ಭೇಟಿ ಮಾಡಿದ್ದೇನೆ. ಈ ವಿಚಾರವಾಗಿ ನನ್ನ ಬಗ್ಗೆ ಕೋರ್‌ ಕಮಿಟಿ ಸಭೆಯಲ್ಲಿ ಕ್ರಮ ಕೈಗೊಳ್ಳುವಂತೆ ಹೇಳಿದವರಿಗೆ ತಾಯಿ ಚಾಮುಂಡೇಶ್ವರಿ ಒಳ್ಳೆಯದು ಮಾಡಲಿ. ಈ ಬಗ್ಗೆ ಕೋರ್‌ ಕಮಿಟಿ ನನ್ನ ವಿರುದ್ಧ ಯಾವುದೇ ಕ್ರಮ ಜರುಗಿಸಿದರು ನಾನು ಸ್ವಾಗತಿಸುತ್ತೇನೆ ಎಂದು ಹೇಳಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಹನೂರು: ತಾಲ್ಲೂಕಿನ ಪ್ರತಿ ಗ್ರಾಮಗಳಿಗೂ ಬಸ್‌ ಸೌಲಭ್ಯ ಕಲ್ಪಿಸಲು ಡಿಪೋ ನಿರ್ಮಾಣ: ಶಾಸಕ ಎಂ.ಆರ್.‌ಮಂಜುನಾಥ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಪ್ರತಿ ಗ್ರಾಮಗಳಿಗೂ ಕೆಎಸ್‌ಆರ್‌ಟಿಸಿ ಸೌಲಭ್ಯ ಕಲ್ಪಿಸಲು ತಾಲೂಕು ಕೇಂದ್ರದಲ್ಲಿ…

2 hours ago

ಶ್ರೀರಂಗಪಟ್ಟಣ: ವಿದ್ಯುತ್ ಸ್ಪರ್ಶದಿಂದ ಕರ್ತವ್ಯ ನಿರತ ಲೈನ್‌ಮ್ಯಾನ್ ಸಾವು

‌ಶ್ರೀರಂಗಪಟ್ಟಣ: ವಿದ್ಯುತ್‌ ಸ್ಪರ್ಶದಿಂದ ಕರ್ತವ್ಯ ನಿರತ ಲೈನ್‌ಮ್ಯಾನ್‌ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಹೆಬ್ಬಾಡಿ ಗ್ರಾಮದಲ್ಲಿ ನಡೆದಿದೆ.…

2 hours ago

ರಾಜ್ಯದ ಹಲವೆಡೆ ಭಾರೀ ಗಾಳಿ ಮಳೆ: ಜನಜೀವನ ಅಸ್ತವ್ಯಸ್ತ

ಬೆಂಗಳೂರು: ರಾಜ್ಯದ ಹಲವೆಡೆ ಇಂದು ಧಾರಾಕಾರ ಮಳೆಯಾಗಿದ್ದು, ಭಾರೀ ಅವಾಂತರ ಸೃಷ್ಟಿ ಮಾಡಿದೆ. ಚಿಕ್ಕಮಗಳೂರು, ಶಿವಮೊಗ್ಗ ಸೇರಿದಂತೆ ರಾಜ್ಯದ ಹಲವೆಡೆ…

2 hours ago

ಹನೂರು: 153 ದಿನಗಳಿಂದ ರೈತರು ನಡೆಸುತ್ತಿದ್ದ ಅಹೋರಾತ್ರಿ ಧರಣಿ ಅಂತ್ಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಾರ್ಟಳ್ಳಿ, ಕೌದಳ್ಳಿ, ಶೆಟ್ಟಳ್ಳಿ, ಕುರಟ್ಟಿ ಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ…

2 hours ago

ಮೈಸೂರಿನಲ್ಲಿ ಅವೈಜ್ಞಾನಿಕ ಟ್ರಾಫಿಕ್‌ ಸಿಗ್ನಲ್‌ ಆರೋಪ: ಸಚಿವ ಮಹದೇವಪ್ಪ ಪ್ರತಿಕ್ರಿಯೆ

ಮೈಸೂರು: ಅರಮನೆಗಳ ನಗರಿ ಮೈಸೂರಿನಲ್ಲಿ ಅವೈಜ್ಞಾನಿಕವಾಗಿ ಟ್ರಾಫಿಕ್‌ ಸಿಗ್ನಲ್‌ ಅಳವಡಿಸಲಾಗಿದೆ ಎಂದು ಸಾರ್ವಜನಿಕರು ಕಿಡಿಕಾರುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಮಹದೇವಪ್ಪ…

3 hours ago

ದೀದಿ ಸರ್ಕಾರದ ವಿರುದ್ಧ ಅಮಿತ್‌ ಶಾ ಚಾರ್ಜ್‌ಶೀಟ್‌ ರಿಲೀಸ್‌

ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ದಿನಗಣನೆ ಶುರುವಾಗಿರುವ ಹಿನ್ನೆಲೆಯಲ್ಲಿ ಸಿಎಂ ಮಮತಾ ಬ್ಯಾನರ್ಜಿ ವಿರುದ್ಧ ಕೇಂದ್ರ ಗೃಹ ಸಚಿವ…

3 hours ago