Mysore
31
clear sky

Social Media

ಮಂಗಳವಾರ, 11 ಫೆಬ್ರವರಿ 2025
Light
Dark

ಬೆಳಗಾವಿ| ಸದ್ಯಕ್ಕೆ ಕಾಂಗ್ರೆಸ್‌ ಸೇರ್ಪಡೆಯಾಗುವ ಆಲೋಚನೆ ಇಲ್ಲ: ಎಸ್.ಟಿ.ಸೋಮಶೇಖರ್‌

ಬೆಳಗಾವಿ: ಸದ್ಯಕ್ಕೆ ಕಾಂಗ್ರೆಸ್ ಸೇರ್ಪಡೆಯಾಗುವ ಆಲೋಚನೆ ಇಲ್ಲ. ಆದರೆ ಮುಂದಿನ ದಿನಗಳಲ್ಲಿ ಈ ಬಗ್ಗೆ ಪರಿಶೀಲನೆ ನಡೆಸುವುದಾಗಿ ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್ ತಿಳಿಸಿದ್ದಾರೆ.

ಬೆಳಗಾವಿಯ ಸುವರ್ಣಸೌಧದಲ್ಲಿ ಇಂದು(ಜನವರಿ.21) ಮಹಾತ್ಮ ಗಾಂಧೀಜಿ ಅವರ ಪ್ರತಿಮೆ ಅನಾವರಣ ಕಾರ್ಯಕ್ರಮದ ವೇಳೆ ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಕಾಂಗ್ರೆಸ್‌ನ ನಾಯಕರೆಲ್ಲರೂ ನೀವು ಮರಳಿ ಕಾಂಗ್ರೆಸ್‍ಗೆ ಬಂದರೆ ಸಂತೋಷ ಎಂದು ಹೇಳುತ್ತಿದ್ದಾರೆ. ಆದರೆ ನಾನು ಆ ಬಗ್ಗೆ ಇನ್ನೂ ಆಲೋಚಿಸಿಲ್ಲ ಎಂದರು.

ಇನ್ನೂ ಈ ಕಾರ್ಯಕ್ರಮ ಸರ್ಕಾರಿ ಕಾರ್ಯಕ್ರಮವಾಗಿದ್ದು, ಇಲ್ಲಿ ಬಿಜೆಪಿ, ಕಾಂಗ್ರೆಸ್‌ ಹಾಗೂ ಜೆಡಿಎಸ್‌ನ ಹಳೆಯ ಸ್ನೇಹಿತರು ಸಿಕ್ಕಿದ್ದು, ತುಂಬಾ ಖುಷಿಯಾಗಿದೆ.  ಬಿಜೆಪಿಯ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸೇರಿದಂತೆ ಎಲ್ಲಾ ಶಾಸಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಬೇಕಿತ್ತು. ಆದರೆ ಅವರು ರಾಜಕೀಯ ಮಾಡುತ್ತಿದ್ದು, ನಾವು ರಾಜಕಾರಣ ಮಾಡುತ್ತಿಲ್ಲ. ಹೀಗಾಗಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದೇನೆ ಎಂದು ಹೇಳಿದರು.

Tags: