ರಾಜ್ಯ

ಕೆಲ ಪ್ರಭಾವಿ, ರಾಜಕಾರಣಿಗಳು ಅಕ್ರಮವಾಗಿ ಬಗರ್‌ಹುಕುಂ ಹೆಸರಿನಲ್ಲಿ ಸರ್ಕಾರಿ ಭೂಮಿ ಕಬಳಿಸಿದ್ದಾರೆ: ಎಸ್‌.ಟಿ.ಸೋಮಶೇಖರ್‌

ಬೆಂಗಳೂರು: ಬೆಂಗಳೂರು ನಗರ ವ್ಯಾಪ್ತಿಗೆ ಬರುವ ಬಗರ್‌ಹುಕುಂ ಭೂಮಿಯನ್ನು ಕೆಲ ಪ್ರಭಾವ ವ್ಯಕ್ತಿಗಳು ಮತ್ತು ರಾಜಕಾರಣಿಗಳು ಅಕ್ರಮವಾಗಿ ಸರ್ಕಾರಿ ಭೂಮಿಯನ್ನು ಕಬಳಿಸಿದ್ದಾರೆ ಎಂದು ಶಾಸಕ ಎಸ್‌.ಟಿ.ಸೋಮಶೇಖರ್‌ ಆರೋಪಿಸಿದ್ದಾರೆ.

ಬೆಂಗಳೂರು ನಗರ ಜಿಲ್ಲಾಡಳಿತದಿಂದ ಯಶವಂತಪುರ ವಿಧಾನಸಭಾ ಕ್ಷೇತ್ರದ ಚಿಕ್ಕನಹಳ್ಳಿ ಗ್ರಾಮದಲ್ಲಿ ಇಂದು(ಫೆಬ್ರವರಿ.16) ಆಯೋಜಿಸಲಾಗಿದ್ದ ಜನಸ್ಪಂದನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಯಶವಂತಪುರ ಕ್ಷೇತ್ರ ವ್ಯಾಪ್ತಿಯಲ್ಲಿ ಸುಮಾರು 1,600 ಎಕರೆ ಸರ್ಕಾರಿ ಭೂಮಿಯನ್ನು ಅನೇಕ ವರ್ಷಗಳಿಂದ ಸಾವಿರಾರು ರೈತರು ಸಾಗುವಳಿ ಮಾಡಿಕೊಂಡು ಬರುತ್ತಿದ್ದಾರೆ. ಅವರು ಅದಕ್ಕೆ ಸಂಬಂಧಿಸಿದ ಸಾಗುವಳಿ ಚೀಟಿ ನೀಡುವಂತೆ ಸರ್ಕಾರಕ್ಕೆ ಮನವಿ ಮಾಡುತ್ತಿದ್ದಾರೆ. ಆದರೆ, ಬಗರ್‌ಹುಕುಂ ಭೂಮಿಯು ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಇದೆ. ಹಾಗೆಯೇ, ಕೆಲ ಪ್ರಭಾವಿಗಳು, ರಾಜಕಾರಣಿಗಳು ಅಕ್ರಮವಾಗಿ ಬಗರ್‌ಹುಕುಂ ಹೆಸರಿನಲ್ಲಿ ಸರ್ಕಾರಿ ಭೂಮಿ ಕಬಳಿಸಿದ್ದಾರೆ. ಹೀಗಾಗಿ ರೈತರಿಗೆ ಸಾಗುವಳಿ ಚೀಟಿ ನೀಡುವಲ್ಲಿ ತೊಡಕಾಗುತ್ತಿದೆ ಎಂದು ಹೇಳಿದರು.

ಸಚಿವ ಕೃಷ್ಣ ಬೈರೇಗೌಡ ಅವರ ನೇತೃತ್ವದಲ್ಲಿ ನೈಜ ರೈತರಿಗೆ ಸಾಗುವಳಿ ಚೀಟಿ ನೀಡುವ ವಿಚಾರವಾಗಿ ಸಂಬಂಧಪಟ್ಟ ಕಾಯ್ದೆಗೆ ಕೆಲವು ತಿದ್ದುಪಡಿ ಮಾಡುವಂತೆ ಸಭೆ ನಡೆಸಲಾಗಿದೆ. ಅಲ್ಲದೇ ಸಚಿವರು ಸಿಎಂ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಿ ಈ ಬಗ್ಗೆ ಭರವಸೆ ನೀಡಿದ್ದಾರೆ. ಇನ್ನು ಸರ್ಕಾರವು ಬೆಂಗಳೂರು ನಗರ ಜಿಲ್ಲೆ ವ್ಯಾಪ್ತಿಯ ಬಗರ್‌ಹುಕುಂ ಭೂಮಿಗೆ ಸಾಗುವಳಿ ಚೀಟಿ ನೀಡುವ ಮತ್ತು ಸಕ್ರಮಗೊಳಿಸುವ ವಿಶ್ವಾಸವಿದೆ. ಹಾಗಾಗಿ ಅಲ್ಲಿಯವರೆಗೂ ಬಗರ್‌ಹುಕುಂ ಭೂಮಿಯ ರೈತರನ್ನು ಒಕ್ಕಲೆಬ್ಬಿಸಲು ಬಿಡುವುದಿಲ್ಲ ಎಂದು ತಿಳಿಸಿದರು.

ಅರ್ಚನ ಎಸ್‌ ಎಸ್

Recent Posts

ಮಧ್ಯ ಪ್ರಾಚ್ಯ ಬಿಕ್ಕಟ್ಟು | ವಿದೇಶಾಂಗ ನೀತಿ ಬದಲಿಸಲು ಖರ್ಗೆ ಆಗ್ರಹ

ಬೆಂಗಳೂರು : ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮವಾಗಿ ಉಂಟಾಗಿರುವ ಎಲ್‌ಪಿಜಿ ಸಂಕಷ್ಟವನ್ನು ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು. ತಕ್ಷಣವೇ ವಿದೇಶಾಂಗ…

4 mins ago

ಚಾರಣಕ್ಕೆ ಬಂದಿದ್ದ ಶರಣ್ಯ ಪತ್ತೆಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ: ಸಚಿವ ಈಶ್ವರ್‌ ಖಂಡ್ರೆ

ದಾವಣಗೆರೆ: ಕೊಡಗಿನ ತಡಿಯಾಂಡಮೋಳ್‌ಗೆ ಚಾರಣಕ್ಕೆ ಬಂದಿದ್ದ ಕೇರಳದ ಯುವತಿ ಜಿ.ಎಸ್.ಶರಣ್ಯ (36) ಪತ್ತೆಗೆ ಮುಖ್ಯಮಂತ್ರಿಗಳು ಸೂಚಿಸಿದ್ದು, ಹೆಚ್ಚುವರಿಯಾಗಿ 40 ಸಿಬ್ಬಂದಿಯ…

1 hour ago

ಗೌರವ ಡಾಕ್ಟರೇಟ್ ಪದವಿ ತಿರಸ್ಕರಿಸಿದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ರಾಜಕೀಯ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆಯನ್ನು ಪರಿಗಣಿಸಿ ಹಾವೇರಿ ವಿಶ್ವವಿದ್ಯಾನಿಲಯವು ನೀಡಲು ತೀರ್ಮಾನಿಸಿದ್ದ ಗೌರವ ಡಾಕ್ಟರೇಟ್ ಪದವಿಯನ್ನು ಮಾಜಿ ಮುಖ್ಯಮಂತ್ರಿ…

1 hour ago

ಟಿ.ನರಸೀಪುರ: ಜೂಜಾಟದಲ್ಲಿ ಭಾಗಿಯಾಗಿದ್ದ ಐವರ ಬಂಧನ

ಟಿ.ನರಸೀಪುರ: ಜೂಜಾಟದಲ್ಲಿ ಭಾಗಿಯಾಗಿದ್ದ ಐವರನ್ನು ಬಂಧಿಸುವಲ್ಲಿ ಟಿ.ನರಸೀಪುರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಟಿ.ನರಸೀಪುರ ತಾಲ್ಲೂಕಿನ ವಾಟಾಳು ಗ್ರಾಮದಲ್ಲಿ ಘಟನೆ ನಡೆದಿದ್ದು,…

2 hours ago

ಇರಾನ್‌ನಲ್ಲಿ ಕಾಣೆಯಾಗಿದ್ದ US ವಾಯುಪಡೆಯ ಮತ್ತೋರ್ವ ಪೈಲಟ್‌ ರಕ್ಷಣೆ

ವಾಷಿಂಗ್ಟನ್:‌ ಮಧ್ಯಪ್ರಾಚ್ಯದಲ್ಲಿನ ಯುದ್ಧದ ಭೀಕರತೆ 37ನೇ ದಿನವೂ ಮುಂದುವರಿದಿದೆ. ಯುದ್ಧದ ಮಧ್ಯೆಯೂ ಅಮೇರಿಕಾ ಸೇನೆಯಿಂದ ಸುದ್ದಿಯೊಂದು ಹೊರಬಿದ್ದಿದ್ದು, ಇರಾನ್‌ನಲ್ಲಿ ಕಾಣೆಯಾಗಿದ್ದ…

3 hours ago

ಎಚ್‌ಎಸ್‌ಆರ್‌ಪಿ ಅಳವಡಿಕೆ ಕಡ್ಡಾಯ: ಸಾರಿಗೆ ಇಲಾಖೆ ಸ್ಪಷ್ಟನೆ

ಬೆಂಗಳೂರು: ಹಳೆಯ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ಕಡ್ಡಾಯವಾಗಿ ಅಳವಡಿಸಬೇಕು ಎಂಬ ನಿಯಮದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಸಾರಿಗೆ ಇಲಾಖೆ ಸ್ಪಷ್ಟನೆ…

4 hours ago