Mysore
32
few clouds

Social Media

ಸೋಮವಾರ, 20 ಏಪ್ರಿಲ 2026
Light
Dark

ಶಬರಿಮಲೆ ದೇವಸ್ಥಾನದ ಚಿನ್ನ ನಾಪತ್ತೆ ಪ್ರಕರಣ: ಸಿಎಂ ಪಿಣರಾಯಿ ವಿಜಯನ್‌ ಹೇಳಿದ್ದಿಷ್ಟು.!

ತಿರುವನಂತಪುರಂ: ಶಬರಿಮಲೆ ದೇವಸ್ಥಾನದ ಚಿನ್ನ ನಾಪತ್ತೆ ಪ್ರಕರಣದ ಆರೋಪಿಗಳ ಜೊತೆಗೆ ಸೋನಿಯಾ ಗಾಂಧಿ ನಂಟಿದೆ ಎಂದು ಸಿಎಂ ಪಿಣರಾಯಿ ವಿಜಯನ್‌ ಗಂಭೀರ ಆರೋಪ ಮಾಡಿದ್ದಾರೆ.

ಸೋನಿಯಾ ಗಾಂಧಿ ಅವರು ಉನ್ನಿಕೃಷ್ಣನ್‌ ಪೊಟ್ಟಿ ಹಾಗೂ ಗೋವರ್ಧನ್‌ರಿಂದ ಉಡುಗೊರೆ ಸ್ವೀಕರಿಸುತ್ತಿರುವ ಫೋಟೋವೊಂದನ್ನು ಹಂಚಿಕೊಂಡಿರುವ ಕೇರಳ ಸಿಎಂ ಪಿಣರಾಯಿ ವಿಜಯನ್‌ ಅವರು, ಸೋನಿಯಾ ಗಾಂಧಿ ಹೆಚ್ಚಿನ ಭದ್ರತೆ ಇರುವ ನಾಯಕಿ. ಹೀಗಿರುವಾಗ ಆರೋಪಿ ಉನ್ನಿಕೃಷ್ಣನ್‌ ಹಾಗೂ ಗೋವರ್ಧನ್‌ಗೆ ಹೇಗೆ ಅಪಾಯಿಟ್ಮೆಂಟ್‌ ಸಿಕ್ಕಿತು? ಎಂದು ಪ್ರಶ್ನೆ ಮಾಡಿದ್ದಾರೆ.

ಈ ಮೂಲಕ ಶಬರಿಮಲೆ ಚಿನ್ನದ ಅವ್ಯವಹಾರದ ತನಿಖೆಯನ್ನು ರಾಜ್ಯ ಸರ್ಕಾರ ಸರಿಯಾಗಿ ನಿರ್ವಹಿಸುತ್ತಿಲ್ಲ ಎಂದು ಆರೋಪಿಸಿದ್ದ ಕಾಂಗ್ರೆಸ್‌ ಹಾಗೂ ಯುಡಿಎಫ್‌ಗೆ ಸಿಎಂ ಪಿಣರಾಯಿ ವಿಜಯನ್‌ ತಿರುಗೇಟು ನೀಡಿದ್ದಾರೆ.

Tags:
error: Content is protected !!