ಬೆಂಗಳೂರು: ಶಬರಿಮಲೆ ಅಯ್ಯಪ್ಪಸ್ವಾಮಿ ದೇವಸ್ಥಾನದ 4 ಕೆಜಿ ಚಿನ್ನಾಭರಣ ಕಳುವು ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳ ಎಸ್‌ಐಟಿ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದಾರೆ.
ಪ್ರಕರಣ ಸಂಬಂಧ ತಿರುವಾಂಕೂರು ದೇವಸ್ವಂ ಮಂಡಳಿ ಮಾಜಿ ಆಡಳಿತಾಧಿಕಾರಿ ಬಿ.ಮುರಾರಿ ಬಾಬು ಅವರನ್ನು ಎಸ್‌ಐಟಿ ಬಂಧಿಸಿತ್ತು.
ಶಬರಿಮಲೆ ದೇವಸ್ಥಾನದ ಚಿನ್ನ ದುರುಪಯೋಗ ಪ್ರಕರಣದಲ್ಲಿ ಆರೋಪಿ ಪೊಟ್ಟಿ ಉನ್ನಿಕೃಷ್ಣನನ್ನು ಎಸ್‌ಐಟಿ ಬಂಧಿಸಿದೆ. ಇದೇ ವೇಳೆ ಬೆಂಗಳೂರಿನ ಅವರ ನಿವಾಸದ ಮೇಲೆ ಮತ್ತೊಮ್ಮೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಬೆಂಗಳೂರಿನ ಶ್ರೀರಾಮ್ ಪುರ ಪೊಲೀಸರ ಸಹಕಾರದಿಂದ ಕೇರಳ ಎಸ್‌ಐಟಿ ಅಧಿಕಾರಿಗಳು ಪೊಟ್ಟಿ ಉನ್ನಿಕೃಷ್ಣನ್ ನಿವಾಸದ ಮೇಲೆ ದಾಳಿ ನಡೆಸಿದ್ದು, ದಾಖಲೆಗಳನ್ನು ಪರಿಶೀಲನೆ ನಡೆಸಿದೆ ಎಂಬ ಮಾಹಿತಿ ಲಭ್ಯವಾಗಿದೆ.





