ರಾಜ್ಯ

ಸಚಿನ್‌ ಸಾವು | ಖರ್ಗೆ ಕುಟುಂಬಕ್ಕೆ ಸಂವಿಧಾನ ಅನ್ವಯ ಆಗುವುದಿಲ್ಲವೇ?; ಆರ್.ಅಶೋಕ

ಬೆಂಗಳೂರು: ಗುತ್ತಿಗೆದಾರ ಸಚಿನ್ ಪಾಂಚಾಳ ಆತ್ಮಹತ್ಯೆಗೆ ಸಚಿವ ಪ್ರಿಯಾಂಕ್ ಖರ್ಗೆ ಕೂಡ ಕಾರಣ. ಊರಿಗೆಲ್ಲಾ ಉಪದೇಶ ಮಾಡುವ ಪ್ರಿಯಾಂಕ್ ಖರ್ಗೆ ಮೊದಲು ರಾಜೀನಾಮೆ ಕೊಟ್ಟು ನೈತಿಕತೆ ಪ್ರದರ್ಶನ ಮಾಡಲಿ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಗ್ರಹಿಸಿದ್ದಾರೆ.

ಈ ಕುರಿತು ಅವರು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದಾರೆ.

ಖರ್ಗೆ ಕುಟುಂಬಕ್ಕೆ ಅಂಬೇಡ್ಕರ್ ಸಂವಿಧಾನ ಅನ್ವಯ ಆಗುವುದಿಲ್ಲವೇ? ಊರಿಗೆಲ್ಲಾ ಉಪದೇಶ ಮಾಡುವ ಪ್ರಿಯಾಂಕ್ ಖರ್ಗೆ ಅವರು ರಾಜೀನಾಮೆ ಕೊಟ್ಟು ನೈತಿಕತೆ ಪ್ರದರ್ಶನ ಮಾಡಲಿ. ಪ್ರಿಯಾಂಕ್ ಖರ್ಗೆ ಕಲಬುರ್ಗಿ ನಿಜಾಮನೂ ಅಲ್ಲ, ಅವರ ಅನುಯಾಯಿಗಳು ರಜಾಕಾರರೂ ಅಲ್ಲ. ಗುತ್ತಿಗೆದಾರ ಸಚಿನ್ ಸಾವಿನಲ್ಲಿ ಸಚಿವ ಪ್ರಿಯಾಂಕ್ ಖರ್ಗೆಯವರ ಆಪ್ತರ ಪಾತ್ರವಿರುವುದು ಸ್ಪಷ್ಟವಾಗಿದೆ. ಆದ್ದರಿಂದ ಅವರು ಕೂಡಲೇ ರಾಜೀನಾಮೆ ನೀಡಲಿ ಎಂದು ಒತ್ತಾಯಿಸಿದ್ದಾರೆ.

ಈ ಹಿಂದೆ ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಮಾಡಿಕೊಂಡಾಗ, ಸಚಿವ ಈಶ್ವರಪ್ಪನವರ ರಾಜೀನಾಮೆ ಕೇಳಲಾಗಿತ್ತು. ಈಗ ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆ ನೀಡಲಿ. ಸಚಿನ್ ಪಾಂಚಾಳ ಅವರು ಡೆತ್ನೋಟ್ನಲ್ಲಿ ರಾಜು ಕಪನೂರು ಹೆಸರು ಬರೆದಿಟ್ಟು, ಬಳಿಕ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಂಚನೆ ಹಾಗೂ ಹಣಕ್ಕಾಗಿ ಕೊಲೆ ಬೆದರಿಕೆ ಆರೋಪ ಮಾಡಲಾಗಿದೆ ಎಂದು ಹೇಳಿದ್ದಾರೆ.

ಸಚಿನ್ ಆತ್ಮಹತ್ಯೆಗೂ ಮುನ್ನ ಡೆತ್‌ನೋಟ್ ಬರೆದು ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿದ್ದರು. ಇದನ್ನು ಗಮನಿಸಿದ ಕುಟುಂಬಸ್ಥರು ಆತಂಕಗೊಂಡು, ಕೂಡಲೇ ಹುಡುಕಿ‌ ಕೊಡುವಂತೆ ಬೀದರ್ ನ ಗಾಂಧಿಗಂಜ್ ಪೊಲೀಸ್ ಠಾಣೆಗೆ ಮನವಿ ಮಾಡಿದ್ದರು. ಆದರೆ ದೂರು ದಾಖಲಿಸುವಲ್ಲಿ ಪೊಲೀಸರು ನಿರ್ಲಕ್ಷ್ಯ ಮಾಡಿದ್ದಾರೆ ಎಂದು ಅವರು ದೂರಿದ್ದಾರೆ.

ಗೂಂಡಾಗಿರಿಗೆ ಸಚಿವರೆ ಹೊಣೆ…

ಸಚಿವ ಪ್ರಿಯಾಂಕ್ ಖರ್ಗೆ ಆಪ್ತ ರಾಜು ಕಪನೂರು 15 ಲಕ್ಷಕ್ಕೂ ಅಧಿಕ ಹಣ ತೆಗೆದುಕೊಂಡು ಟೆಂಡರ್‌ ನೀಡದೆ ವಂಚನೆ ಮಾಡಿದ್ದು, ಮಾತ್ರವಲ್ಲದೆ 1 ಕೋಟಿ ಹಣ ನೀಡುವಂತೆ ಒತ್ತಡ, ಕೊಲೆ ಬೆದರಿಕೆ ಹಾಕಲಾಗಿದೆ ಎಂದು ಡೆತ್ನೋಟ್ನಲ್ಲಿ ಉಲ್ಲೇಖವಾಗಿದೆ. ಡೆತ್ ನೋಟ್ನಲ್ಲಿ ಕಲಬುರಗಿಯ ಮಾಜಿ ಕಾರ್ಪೊರೇಟ್ ರವಿ ಕಪನೂರು, ನಂದಕುಮಾರ್ ನಾಗಭುಜಂಗೆ, ಗೋರಖನಾಥ್ ಸೇರಿ 6 ಜನರ ವಿರುದ್ಧ ಜೀವ ಬೆದರಿಕೆ ಆರೋಪ ಮಾಡಲಾಗಿದೆ. ಇಂತಹ ಗೂಂಡಾಗಳನ್ನು ಆಪ್ತರಾಗಿ ಇಟ್ಟುಕೊಂಡ ಸಚಿವರು ಕೂಡ ಇಲ್ಲಿ ಹೊಣೆಗಾರರು ಎಂದು ಅವರು ಹೇಳಿದ್ದಾರೆ.

ರಾಜು ಕಪನೂರ್, ಖರ್ಗೆ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದಾನೆ. ಕಲಬುರಗಿ ಮಹಾನಗರ ಪಾಲಿಕೆ ಸದಸ್ಯನೂ ಆಗಿದ್ದ ರಾಜು ಕಪನೂರ್, ಈ ಹಿಂದೆ ಅಕ್ರಮ ಪಿಸ್ತೂಲ್ ಹೊಂದಿರುವ ಆರೋಪದಲ್ಲಿ ಬಂಧಿತನಾಗಿದ್ದ. ಇವೆಲ್ಲ ಗೊತ್ತಿದ್ದರೂ ಸಚಿವ ಪ್ರಿಯಾಂಕ್ ಖರ್ಗೆ ಆಪ್ತರಿಂದ ದೂರವಾಗಿಲ್ಲ. ಇಂತಹ ಗೂಂಡಾ, ಸಚಿವರ ಆಪ್ತ ಎಂದರೆ ನಮ್ಮ ರಾಜ್ಯದಲ್ಲಿ ಗೂಂಡಾಗಳ, ರೌಡಿಗಳ ಸರ್ಕಾರ ನಡೆಯುತ್ತಿದೆ ಎಂದರ್ಥ ಎಂದು ಆರ್.ಅಶೋಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ದಲಿತ ಹೋರಾಟಗಾರ ಲಕ್ಷ್ಮೀ ನಾರಾಯಣ ನಾಗವಾರಗೆ ಅಂತಿಮ ನಮನ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

ಮೈಸೂರು: ದಲಿತ ಸಂಘರ್ಷ ಸಮಿತಿ ಹೋರಾಟಗಾರ ಲಕ್ಷ್ಮೀ ನಾರಾಯಣ ನಾಗವಾರ ನಿಧನರಾಗಿದ್ದು, ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಅಂತಿಮ…

18 mins ago

ಆತ್ಮವಿಶ್ವಾಸ ಕಳೆದುಕೊಳ್ಳದೆ ಧೈರ್ಯದಿಂದ ಸಂದರ್ಭಗಳನ್ನು ಎದುರಿಸಿ ತಮ್ಮ ಕಾರ್ಯ ನಿರ್ವಹಿಸಿ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಬದುಕಿನಲ್ಲಿ ಏಳು ಬೀಳು ಸಹಜ ಮತ್ತು ನಿರಂತರ. ಪರಿಸ್ಥಿತಿಗಳು ಸದಾ ನಮ್ಮ ಪರವಾಗಿ ಇರುವುದಿಲ್ಲ. ಆದರೆ ಆತ್ಮವಿಶ್ವಾಸ ಕಳೆದುಕೊಳ್ಳದೆ…

30 mins ago

ಪ್ರಿಯಾಂಕ್‌ ಖರ್ಗೆ ಯಾವುದೇ ಕಾರಣಕ್ಕೂ ರಾಜೀನಾಮೆ ನೀಡುವ ಅಗತ್ಯವಿಲ್ಲ, ನೀಡಲ್ಲ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಪ್ರಿಯಾಂಕ ಖರ್ಗೆಯವರು ರಾಜೀನಾಮೆ ನೀಡುವ ಪ್ರಶ್ನೆ ಉದ್ಭವಿಸುವುದಿಲ್ಲ. ಇದು ರಾಜಕೀಯ…

1 hour ago

ಕೆಆರ್‌ಎಸ್‌ ರಸ್ತೆಗೆ ಪ್ರಿನ್ಸೆಸ್‌ ರಸ್ತೆಯೆಂದು ನಾಮಕರಣವಾಗಿದ್ದರೇ ಸಂಸದ ಯದುವೀರ್‌ ದಾಖಲೆ ನೀಡಲಿ: ಎಂ.ಲಕ್ಷ್ಮಣ್‌

ಮೈಸೂರು: ನಗರದ ಕೆಆರ್‌ಎಸ್‌ ರಸ್ತೆಗೆ ಪ್ರಿನ್ಸೆಸ್‌ ರಸ್ತೆಯೆಂದು ನಾಮಕರಣ ಮಾಡಿರುವುದಕ್ಕೆ ಸಂಸದ ಯದುವೀರ್‌ ದಾಖಲೆಗಳಿದ್ದರೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌…

1 hour ago

ಹುತಾತ್ಮ ಯೋಧ ದಿವಿನ್‌ ಅವರ ಅಂತಿಮ ನಮನ ಸಲ್ಲಿಸಿದ ಕುಟುಂಬಸ್ಥರು, ಗ್ರಾಮಸ್ಥರು, ವಿದ್ಯಾರ್ಥಿಗಳು

ಕೊಡಗು: ಜಮ್ಮು ಮತ್ತು ಕಾಶ್ಮೀರದ ಪೂಂಛ್‌ ಜಿಲ್ಲೆಯಲ್ಲಿ ಕೊಡಗಿನ ಯೋಧ ದಿವಿನ್‌ ಎಂಬುವವರು ಮೃತ ಪಟ್ಟಿದ್ದು, ಇಂದು ಅವರ ಪಾರ್ಥಿವ…

3 hours ago

‘ಸಂಜು ವೆಡ್ಸ್ ಗೀತಾ 2’ಗೆ ಕಥೆ ಕೊಟ್ಟಿದ್ದು ಯಾರು?

ನಾಗಶೇಖರ್‍ ನಿರ್ದೇಶನದ ‘ಸಂಜು ವೆಡ್ಸ್ ಗೀತಾ 2’ ಚಿತ್ರವು ಜನವರಿ 10ರಂದು ಬಿಡುಗಡೆಯಾಗುತ್ತಿದೆ. ಈ ಮಧ್ಯೆ, ಚಿತ್ರಕ್ಕಾಗಿ ಕವಿರಾಜ್ ಬರೆದ…

3 hours ago