Mysore
35
few clouds

Social Media

ಶನಿವಾರ, 11 ಏಪ್ರಿಲ 2026
Light
Dark

ವಿದ್ಯಾರ್ಥಿಗಳ ಶಾಲಾ ಪ್ರವಾಸದಲ್ಲಿ ಸುರಕ್ಷತೆಗೆ ಆದ್ಯತೆ : ಸಚಿವ ಮಧು ಬಂಗಾರಪ್ಪ ಭರವಸೆ

ಬೆಂಗಳೂರು : ಶಾಲಾ ವಿದ್ಯಾರ್ಥಿಗಳನ್ನು ಪ್ರವಾಸಕ್ಕೆ ಕರೆದೊಯ್ಯುವ ಮುನ್ನ ಸುರಕ್ಷತೆಗೆ ಆದ್ಯತೆ ನೀಡಬೇಕು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಗಳೂರಿನಲ್ಲಿ ಟಿಪ್ಪರ್‍ನಲ್ಲಿ ವಿದ್ಯಾರ್ಥಿಗಳನ್ನು ಕರೆದೊಯ್ದಿರುವುದು ಸರಿಯಲ್ಲ. ಪ್ರವಾಸಕ್ಕೆ ವಿದ್ಯಾರ್ಥಿಗಳನ್ನು ಕರೆದೊಯ್ಯುವ ಮುನ್ನ ಇಲಾಖೆಯ ಉನ್ನತಾಧಿಕಾರಿಗಳ ಅನುಮತಿ ಪಡೆಯಬೇಕು. ಮಕ್ಕಳ ಸುರಕ್ಷತೆಗೆ ಗಮನ ಹರಿಸಬೇಕು ಎಂದರು.

ಟಿಪ್ಪರ್‍ನಲ್ಲಿ ವಿದ್ಯಾರ್ಥಿಗಳನ್ನು ಕರೆದೊಯ್ದಿರುವ ಶಾಲೆಯ ಮುಖ್ಯ ಶಿಕ್ಷಕರನ್ನು ಅಮಾನತು ಮಾಡಬೇಕು. ಆ ಬಗ್ಗೆ ಮಾಹಿತಿ ಪಡೆಯಲಾಗುತ್ತಿದೆ. ತುಮಕೂರಿನಲ್ಲಿ ಶಾಲೆಯ ವಿದ್ಯಾರ್ಥಿಯ ಬೆರಳು ತುಂಡಾಗಿರುವ ವಿಚಾರದ ಬಗ್ಗೆಯೂ ಮಾಹಿತಿ ಪಡೆಯಲಾಗುತ್ತಿದೆ. ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಸೂಚನೆ ನೀಡಲಾಗುವುದು ಎಂದು ತಿಳಿಸಿದರು.

ಶಿಕ್ಷಕರು ಬೇಜವಾಬ್ದಾರಿಯಿಂದ ಮಾತನಾಡಿದರೆ ಕ್ರಮ ತೆಗೆದುಕೊಳ್ಳಲಾಗುವುದು. ಮಕ್ಕಳು ಶಾಲೆಗೆ ಬಂದ ನಂತರ ಮನೆಗೆ ಮರಳುವವರೆಗೂ ನೋಡಿಕೊಳ್ಳುವ ಜವಾಬ್ದಾರಿ ಶಿಕ್ಷಕರದು. ಇನ್ನು ಮುಂದೆ ಘಟನೆಗಳು ಮರುಕಳಿಸದಂತೆ ಎಚ್ಚರಿಕೆ ವಹಿಸಬೇಕಿದೆ. ಪ್ರಸಕ್ತ ಶೈಕ್ಷಣಿಕ ಶಾಲೆಯ ಎಸ್ಎಸ್ಎಲ್‍ಸಿ ಮತ್ತು ಪಿಯುಸಿ ಪರೀಕ್ಷೆಗಳು ಶುರುವಾಗಲಿವೆ. ಪರೀಕ್ಷೆ ಸಿದ್ಧತೆ ಬಗ್ಗೆ ಅಧಿಕಾರಿಗಳ ಜೊತೆ ಚರ್ಚೆ ನಡೆಸಿದ್ದು, ವಿದ್ಯಾರ್ಥಿಗಳ ಓದಿನ ಕಡೆ ಶಿಕ್ಷಕರು ಹೆಚ್ಚಿನ ಗಮನ ಕೊಡಬೇಕು ಎಂದು ಹೇಳಿದರು.

 

Tags:
error: Content is protected !!