ಬೆಂಗಳೂರು : ಶಾಲಾ ವಿದ್ಯಾರ್ಥಿಗಳನ್ನು ಪ್ರವಾಸಕ್ಕೆ ಕರೆದೊಯ್ಯುವ ಮುನ್ನ ಸುರಕ್ಷತೆಗೆ ಆದ್ಯತೆ ನೀಡಬೇಕು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಗಳೂರಿನಲ್ಲಿ ಟಿಪ್ಪರ್‍ನಲ್ಲಿ ವಿದ್ಯಾರ್ಥಿಗಳನ್ನು ಕರೆದೊಯ್ದಿರುವುದು ಸರಿಯಲ್ಲ. ಪ್ರವಾಸಕ್ಕೆ ವಿದ್ಯಾರ್ಥಿಗಳನ್ನು ಕರೆದೊಯ್ಯುವ ಮುನ್ನ ಇಲಾಖೆಯ ಉನ್ನತಾಧಿಕಾರಿಗಳ ಅನುಮತಿ ಪಡೆಯಬೇಕು. ಮಕ್ಕಳ ಸುರಕ್ಷತೆಗೆ ಗಮನ ಹರಿಸಬೇಕು ಎಂದರು.
ಟಿಪ್ಪರ್‍ನಲ್ಲಿ ವಿದ್ಯಾರ್ಥಿಗಳನ್ನು ಕರೆದೊಯ್ದಿರುವ ಶಾಲೆಯ ಮುಖ್ಯ ಶಿಕ್ಷಕರನ್ನು ಅಮಾನತು ಮಾಡಬೇಕು. ಆ ಬಗ್ಗೆ ಮಾಹಿತಿ ಪಡೆಯಲಾಗುತ್ತಿದೆ. ತುಮಕೂರಿನಲ್ಲಿ ಶಾಲೆಯ ವಿದ್ಯಾರ್ಥಿಯ ಬೆರಳು ತುಂಡಾಗಿರುವ ವಿಚಾರದ ಬಗ್ಗೆಯೂ ಮಾಹಿತಿ ಪಡೆಯಲಾಗುತ್ತಿದೆ. ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಸೂಚನೆ ನೀಡಲಾಗುವುದು ಎಂದು ತಿಳಿಸಿದರು.
ಶಿಕ್ಷಕರು ಬೇಜವಾಬ್ದಾರಿಯಿಂದ ಮಾತನಾಡಿದರೆ ಕ್ರಮ ತೆಗೆದುಕೊಳ್ಳಲಾಗುವುದು. ಮಕ್ಕಳು ಶಾಲೆಗೆ ಬಂದ ನಂತರ ಮನೆಗೆ ಮರಳುವವರೆಗೂ ನೋಡಿಕೊಳ್ಳುವ ಜವಾಬ್ದಾರಿ ಶಿಕ್ಷಕರದು. ಇನ್ನು ಮುಂದೆ ಘಟನೆಗಳು ಮರುಕಳಿಸದಂತೆ ಎಚ್ಚರಿಕೆ ವಹಿಸಬೇಕಿದೆ. ಪ್ರಸಕ್ತ ಶೈಕ್ಷಣಿಕ ಶಾಲೆಯ ಎಸ್ಎಸ್ಎಲ್‍ಸಿ ಮತ್ತು ಪಿಯುಸಿ ಪರೀಕ್ಷೆಗಳು ಶುರುವಾಗಲಿವೆ. ಪರೀಕ್ಷೆ ಸಿದ್ಧತೆ ಬಗ್ಗೆ ಅಧಿಕಾರಿಗಳ ಜೊತೆ ಚರ್ಚೆ ನಡೆಸಿದ್ದು, ವಿದ್ಯಾರ್ಥಿಗಳ ಓದಿನ ಕಡೆ ಶಿಕ್ಷಕರು ಹೆಚ್ಚಿನ ಗಮನ ಕೊಡಬೇಕು ಎಂದು ಹೇಳಿದರು.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…