ಬೆಂಗಳೂರು: ಕರ್ನಾಟಕ ಸರ್ಕಾರ ಸುತ್ತೋಲೆಯೊಂದನ್ನು ಹೊರಡಿಸಿದೆ. ಸರ್ಕಾರಿ ಕಾರ್ಯಕ್ರಮ, ರಾಷ್ಟ್ರೀಯ ಹಬ್ಬಗಳು, ಶಾಲಾ-ಕಾಲೇಜುಗಳ ಕಾರ್ಯಕ್ರಮಗಳಲ್ಲಿ ಜನರ ಹಾಗೂ ಮಕ್ಕಳ ಸುರಕ್ಷತೆಗೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಸೂಚನೆ ನೀಡಲಾಗಿದೆ.
ಶುಭಮಂಗಳ ಆರ್.ವಿ.ವಿಶೇಷಾಧಿಕಾರಿ ಮತ್ತು ಪದನಿಮಿತ್ತ ಸರ್ಕಾರದ ಅಧೀನ ಕಾರ್ಯದರ್ಶಿ(ಯೋಜನೆ) ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಈ ಕುರಿತು ಸುತ್ತೋಲೆಯನ್ನು ಹೊರಡಿಸಿದ್ದಾರೆ.
ಶಾಲಾ-ಕಾಲೇಜುಗಳಲ್ಲಿ ಮಕ್ಕಳ ಸುರಕ್ಷತೆಗೆ ಸಂಬಂಧಿಸಿದಂತೆ ಮಕ್ಕಳ ರಕ್ಷಣಾ ನೀತಿ, ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಮಾರ್ಗಸೂಚಿಯನ್ವಯ ಮಕ್ಕಳ ಹಕ್ಕುಗಳು ಮತ್ತು ಮಕ್ಕಳ ಸುರಕ್ಷತೆಯ ಬಗ್ಗೆ ಅಗತ್ಯ ಕ್ರಮ ವಹಿಸಲು ಎಲ್ಲಾ ಶಾಲೆಗಳ ಮುಖ್ಯ ಶಿಕ್ಷಕರು ಮತ್ತು ಶಿಕ್ಷಕರಿಗೆ ಸೂಚನೆಗಳನ್ನು ನೀಡಲಾಗಿದೆ.
ಸೂಚನೆಗಳು ಈ ಕೆಳಕಂಡಂತಿದೆ:
* ಧ್ವಜಾರೋಹಣ ಕಂಬಕ್ಕೆ ಧ್ವಜವನ್ನು ಏರಿಸುವ ಅಥವಾ ಇಳಿಸುವ ಕಾರ್ಯಗಳಿಗೆ ಮಕ್ಕಳನ್ನು ಬಳಸಿಕೊಳ್ಳಬಾರದು.
* ಮಕ್ಕಳ ಕವಾಯತು, ಪಥಸಂಚಲನ, ಸಾಂಸ್ಕೃತಿಕ ಕಾರ್ಯಕ್ರಮದ ವೇದಿಕೆ, ಮಕ್ಕಳು ಕುಳಿತುಕೊಳ್ಳುವ ಸ್ಥಳಗಳು ಸುರಕ್ಷಿತವಾಗಿರುವ ಬಗ್ಗೆ ಕಾರ್ಯಕ್ರಮದ ಮೊದಲು ಹಾಗೂ ಆಗಿಂದಾಗ್ಗೆ ಪರಿಶೀಲಿಸಿಕೊಳ್ಳಬೇಕು
* ಮಕ್ಕಳನ್ನು ಕಾರ್ಯಕ್ರಮ, ಸ್ಪರ್ಧೆಗಳಿಗೆ ಕರೆದುಕೊಂಡು ಹೋಗುವ ಮತ್ತು ಹಿಂದಿರುಗಿ ಕರೆತರುವ ವಾಹನಗಳು ಸಮರ್ಪಕವಾಗಿರುವ ಬಗ್ಗೆ ಪರಿಶೀಲಿಸಿಕೊಳ್ಳುವುದು.
* ಕಾರ್ಯಕ್ರಮ ನಡೆಸುವ ಎಲ್ಲಾ ಸ್ಥಳಗಳಲ್ಲಿ ಅಳವಡಿಸಿರುವ ವಿದ್ಯುತ್ ತಂತಿಯಿಂದ ವಿದ್ಯುತ್ ಪ್ರವಹಿಸದಿರುವ ಬಗ್ಗೆ ಖಚಿತಪಡಿಸಿಕೊಳ್ಳುವ ಜೊತೆಗೆ ಮಕ್ಕಳು ಸೇರಿದಂತೆ ಸಾರ್ವಜನಿಕರ ಸಂಪರ್ಕಕ್ಕೆ ಬರದಂತೆ ಸೂಚನೆ ನೀಡುವುದು
* ಎಲ್ಲಾ ಕಾರ್ಯಕ್ರಮಗಳ ಆಯೋಜಕರು, ಸ್ಥಳೀಯ ಪೊಲೀಸ್, ವೈದ್ಯಕೀಯ ವ್ಯವಸ್ಥೆ, ಅಗ್ನಿಶಾಮಕ ದಳ ಹಾಗೂ ಸ್ಥಳೀಯ ಆಡಳಿತಕ್ಕೆ ಮಕ್ಕಳ ಕಾರ್ಯಕ್ರಮದ ಕುರಿತು ಕಡ್ಡಾಯವಾಗಿ ಮಾಹಿತಿ ಒದಗಿಸಿ, ಯಾವುದೇ ತುರ್ತು ಸಂದರ್ಭದಲ್ಲಿ ಪ್ರತಿಕ್ರಿಯೆ ನೀಡಲು ಸದಾ ಸನ್ನದ್ಧ ಸ್ಥಿತಿಯಲ್ಲಿರುವಂತೆ ತಿಳಿಸತಕ್ಕದ್ದು.
ಅಕ್ಷತಾ ಹೆಣ್ಣಿನ ತಾಯ್ತನ ಆಕೆ ಗರ್ಭವತಿಯೆಂದು ತಿಳಿದಾಗಿನಿಂದಲೇ ಜಾಗೃತವಾಗುತ್ತದೆ. ತನಗೆ ಹುಟ್ಟಲಿರುವ ಮಗುವಿನ ಬಗ್ಗೆ ಅಂದಿನಿಂದಲೇ ಬಣ್ಣಬಣ್ಣದ ಕನಸುಗಳನ್ನು ಕಾಣಲಾರಂಭಿಸುತ್ತಾಳೆ.…
ಸಿರಿ ಮೈಸೂರು ಮುಖಕ್ಕೆ ಪ್ರಸಾದನ ಮಾಡಿಕೊಂಡು, ಭಾರೀ ವಸ್ತ್ರ ಧರಿಸಿ, ಕತ್ತಿ ಹಿಡಿದು, ವೀರಭದ್ರನ ಧ್ಯಾನ ಮಾಡಿ ವೇದಿಕೆ ಏರಿ…
ಸ್ವಾಮಿ ಪೊನ್ನಾಚಿ ಮಹದೇಶ್ವರನ ಬೆಟ್ಟದ ಪೋಡಿನಿಂದ ಬಂದು ನಮ್ಮ ಮನೆಯಲ್ಲಿ ದನ ಮೇಯಿಸುತ್ತಿದ್ದ ಬೊಮ್ಮ ನನ್ನು ಕಂಡರೆ ನನಗೆ ಅಸಾಧ್ಯ…
ಸಿದ್ದೇಗೌಡ ಕೊಡಿಯಾಲ ಸಮಯಕ್ಕೆ ಬಾರದ ಅಧಿಕಾರಿ-ಸಿಬ್ಬಂದಿ:ಜನತೆ ಹೈರಾಣ ಶ್ರೀರಂಗಪಟ್ಟಣ: ತಾಲ್ಲೂಕಿನ ಅರಕೆರೆ ನಾಡಕಚೇರಿಯು ಅವ್ಯವಸ್ಥೆಯ ಗೂಡಾಗಿ ಮಾರ್ಪಟ್ಟಿದೆ. ಈ ನಾಡಕಚೇರಿಯಲ್ಲಿ…
ಲಕ್ಷ್ಮೀಕಾಂತ್ ಕೋಮಾರಪ್ಪ ಫಸಲು ನಾಶ, ಕಂಗಾಲಾದ ಕೃಷಿಕರು; ಸೂಕ್ತ ಕ್ರಮಕ್ಕೆ ಬೆಳೆಗಾರರ ಒತ್ತಾಯ ಸೋಮವಾರಪೇಟೆ: ತಾಲ್ಲೂಕಿನ ಗಣಗೂರು ಗ್ರಾಮ ಪಂಚಾಯಿತಿ…
ಎಚ್.ಎಸ್.ದಿನೇಶ್ ಕುಮಾರ್ ಕಟ್ಟುನಿಟ್ಟಿನ ಕ್ರಮಗಳ ನಡುವೆಯೂ ನಿಲ್ಲದ ದಂಧೆ; ಪ್ರತಿ ಬಾರಿಯೂ ದಂಧೆಗೆ ಹೊಸ ದಾರಿ ಹುಡುಕುವ ದುರುಳರು ಮೈಸೂರು:…