ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಬದಲಿ ನಿವೇಶನ ಹಂಚಿಕೆ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದು ಚರ್ಚೆಯ ವಿಚಾರವಾಗಿದೆ. ಈ ವಿಚಾರದಲ್ಲಿ ಸಾಹಿತಿ ಎಸ್.ಎಸ್.ಭೈರಪ್ಪ ನೀಡಿರುವ ಹೇಳಿಕೆ ಕಾಂಗ್ರೆಸ್ ನಾಯಕರ ಆಕ್ರೋಶಕ್ಕೆ ಕಾರಣವಾಗಿದೆ.
ಭೈರಪ್ಪ ಅವರು ರಾಜ್ಯ ಸರ್ಕಾರವನ್ನು ಟೀಕಿಸಿ ರಾಜ್ಯಪಾಲರನ್ನು ಸಮರ್ಥಿಸಿ ಅರೆ ಸಂವಿಧಾನ ತಜ್ಞರಾಗಲು ಹೊರಟಿದ್ದಾರೆ ಎಂದು ಕಾಂಗ್ರೆಸ್ ಟೀಕೆ ಮಾಡಿದೆ.
ಈ ಬಗ್ಗೆ ಕಿಡಿಕಾರಿರುವ ರಮೇಶ್ ಬಾಬು ಎಂಬುವವರು, ರಾಜ್ಯಪಾಲರು ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ಪ್ರಕರಣ ನ್ಯಾಯಾಂಗದ ಅಂಗಳದಲ್ಲಿ ಇದೆ. ಸಾಹಿತಿ ಭೈರಪ್ಪ ಅವರು ತಮ್ಮ ಎಂದಿನ ಚಾಳಿಯಂತೆ ರಾಜ್ಯಪಾಲರ ಕ್ರಮವನ್ನು ಸಮರ್ಥಿಸಲು ಹೊರಟಿರುವುದು ಅವರ ಮನಸ್ಥಿತಿಗೆ ಹಿಡಿದ ಕನ್ನಡಿ ಆಗಿರುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕೇಂದ್ರ ಸರ್ಕಾರದಿಂದ ಅವರು ಪಡೆದಿರುವ 6 ಪ್ರಶಸ್ತಿಗಳಲ್ಲಿ 5 ಪ್ರಶಸ್ತಿಗಳು ಬಿಜೆಪಿ ಕಾರಣದಿಂದಲೇ ದೊರಕಿರುತ್ತದೆ. ಋಣ ಸಂದಾಯದ ಕಾರಣಕ್ಕಾಗಿ ರಾಜ್ಯ ಸರ್ಕಾರವನ್ನು ಟೀಕಿಸಿ ರಾಜ್ಯಪಾಲರನ್ನು ಸಮರ್ಥಿಸಿ ಸಂವಿಧಾನ ತಜ್ಞರಾಗಲು ಹೊರಟಿದ್ದಾರೆ ಎಂದು ಗಂಭೀರ ಆರೋಪ ಮಾಡಿ ಸಾಹಿತಿ ಭೈರಪ್ಪ ವಿರುದ್ಧ ಕಿಡಿಕಾರಿದ್ದಾರೆ.
‘ಸರಿಯಾಗಿ ಕೆಲಸ ಮಾಡದಿದ್ದರೆ ಜನರಿಂದ ಚಪ್ಪಲಿಯಲ್ಲಿ ಹೊಡೆಸುತ್ತೇನೆ. ನಾಚಿಕೆ ಆಗಲ್ವ ನಿಮಗೆ.. ಜನರನ್ನು ಯಾಕೆ ಹೀಗೆ ಸಾಯಿಸುತ್ತೀರಿ. ಯುವ ಅಧಿಕಾರಿಗಳಾದ…
ಮಹಿಳೆಯರು, ಮಕ್ಕಳ ಸಬಲೀಕರಣವೇ ಸಂಸ್ಥೆಯ ಧ್ಯೇಯ ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೇ ಸೇವೆ ಮಾಡುವ ಸಂಸ್ಥೆಗಳು ವಿರಳ. ಅಂತಹ ವಿರಳಾತೀತ ವಿರಳ…
ಮಡಿಕೇರಿ: ಪಾಂಡಂಡ ಕುಟ್ಟಪ್ಪ ಅವರ ಕನಸಿನ ಕೂಸಾದ ಕೊಡವ ಕೌಟುಂಬಿಕ ಹಾಕಿ ಉತ್ಸವದ ಬೆಳ್ಳಿ ಮಹೋತ್ಸವವನ್ನು ಆಚರಿಸಿಕೊಂಡ ಹಿನ್ನೆಲೆಯಲ್ಲಿ ಕೊಡವ…
ಗಿರೀಶ್ ಹುಣಸೂರು ೨೦೨೫ನೇ ಸಾಲಿನಲ್ಲಿ ದೇಶ, ರಾಜ್ಯದಲ್ಲಿ ಹಲವು ದಾಖಲೆಗಳಿಗೆ ಸಾಕ್ಷಿಯಾಗಿದೆ. ಭಾರತ ಮೂಲದ ಶುಭಾಂಶು ಶುಕ್ಲಾ ಬಾಹ್ಯಾಕಾಶದಲ್ಲಿ ೧೮…
ಕೆ.ಬಿ.ರಮೇಶನಾಯಕ ಮೈಸೂರು: ಮಾನವ-ವನ್ಯಜೀವಿಗಳ ಸಂಘರ್ಷವನ್ನು ತಡೆಯಲು ಬಂಡೀಪುರ, ನಾಗರ ಹೊಳೆ ಅಭಯಾರಣ್ಯ ಪ್ರದೇಶದಲ್ಲಿ ಸಫಾರಿಗೆ ನಿರ್ಬಂಧ ವಿಧಿಸಿರುವುದರ ನಡುವೆಯೂ ಕ್ರಿಸ್ಮಸ್,…
ಮೈಸೂರು : ಮೈಸೂರು ಅರಮನೆ ಮುಂಭಾಗ ನಿನ್ನೆ ಸಂಜೆ ನಡೆದಿದ್ದ ಹೀಲಿಯಂ ಸ್ಫೋಟ ಪ್ರಕರಣದಲ್ಲಿ ಸಾವಿನ ಸಂಖ್ಯೆ ಇದೀಗ ಮೂರಕ್ಕೆ…