Mysore
22
overcast clouds

Social Media

ಭಾನುವಾರ, 22 ಡಿಸೆಂಬರ್ 2024
Light
Dark

ಸಕಲೇಶಪುರ: ಪತ್ನಿಯನ್ನು ಕೊಲೆಗೈದು ನಾಪತ್ತೆ ದೂರು ದಾಖಲಿಸಿದ್ದ ಪತಿಯ ಬಂಧನ

ಸಕಲೇಶಪುರ : ಪತ್ನಿಯನ್ನು ಕೊಲೆಗೈದು ನಾಪತ್ತೆಯಾಗಿದ್ದಾಳೆ ಎಂದು ದೂರು ದಾಖಲಿಸಿದ್ದ ಪತಿಯನ್ನು ಪೊಲೀಸರು ಬಂಧಿಸಿರುವುದು ವರದಿಯಾಗಿದೆ.

ಸಕಲೇಶಪುರ ತಾಲೂಕಿನ ಬಾಗೆ ಗ್ರಾಮದ ಬಳಿ ಪತ್ತೆಯಾಗಿದ್ದ ಮಹಿಳೆಯ ಅಸ್ಥಿಪಂಜರ ಪ್ರಕರಣವನ್ನು ಭೇದಿಸಿರುವ ಪೊಲೀಸರು, ಮೂರು ತಿಂಗಳ ಹಿಂದೆ ಪತಿಯೇ ತನ್ನ ಪತ್ನಿಯನ್ನು ಕೊಂದು ಹೂತು ಹಾಕಿರುವುದನ್ನು ಪತ್ತೆ ಮಾಡಿದ್ದಾರೆ.

ಮೂರು ತಿಂಗಳ ಹಿಂದೆ ಶಾಂತಿವಾಸು (29) ಎಂಬ ಮಹಿಳೆ ದಿಢೀರ್ ನಾಪತ್ತೆಯಾಗಿದ್ದಳು. ಗುರುವಾರ ಮನೆಯ ಪಕ್ಕದ ಗುಂಡಿಯಲ್ಲಿ ಆಕೆಯ ಮೃತದೇಹ ಪತ್ತೆಯಾಗಿದೆ. ನಾಯಿಗಳು ಮೃತದೇಹದ ಮೂಳೆಗಳನ್ನು ಎಳೆದು ತಂದಿದ್ದು, ಆಕೆಯ ಪತಿ ಪವನ್ ಕುಮಾರನೇ ಪತ್ನಿಯನ್ನು ಕೊಲೆ ಮಾಡಿರುವುದು ಬೆಳಕಿಗೆ ಬಂದಿದೆ.

ಪವನ್ ಕುಮಾರ್ ಹಾಗೂ ಶಾಂತಿವಾಸು ನಡುವೆ ಆಗಾಗ ಜಗಳ ನಡೆಯುತ್ತಿತ್ತು. ಇದೇ ಜಗಳ ವಿಕೋಪಕ್ಕೆ ತಿರುಗಿ ಪತ್ನಿಯ ಮೇಲೆ ಪವನ್ ಹಲ್ಲೆ ಮಾಡಿದ್ದಾನೆ ಎನ್ನಲಾಗಿದೆ. ಈ ವೇಳೆ ಪತ್ನಿ ಸಾವಿಗೀಡಾಗಿದ್ದಾಳೆ. ಬಳಿಕ ಆಕೆಯನ್ನು ಮನೆಯ ಪಕ್ಕದಲ್ಲಿ ಗುಂಡಿ ತೆಗೆದು ಹೂತು ಹಾಕಿದ ನಂತರ ಇಬ್ಬರು ಮಕ್ಕಳೊಂದಿಗೆ ಬೆಂಗಳೂರಿಗೆ ತೆರಳಿದ್ದ. ಆ ಬಳಿಕ ತನ್ನ ಪತ್ನಿ ಕಳೆದು ಹೋಗಿದ್ದಾಳೆ ಎಂದು ಪವನ್ ಹಾಗೂ ಶಾಂತಿವಾಸು ಪೋಷಕರು ಪೊಲೀಸರಿಗೆ ದೂರು ನೀಡಿದ್ದರು.

ಘಟನಾ ಸ್ಥಳಕ್ಕೆ ಸಕಲೇಶಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪೊಲೀಸರು ಈ ಬಗ್ಗೆ ಹೆಚ್ಚಿನ ತನಿಖೆಯನ್ನು ಮುಂದುವರಿಸಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ