ಶಿವಮೊಗ್ಗ : ಇಲ್ಲಿನ ಸಕ್ರಬೈಲು ಆನೆ ಶಿಬಿರದಲ್ಲಿ ಭಾನುಮತಿ ಎಂಬ ಹೆಣ್ಣಾನೆಯ ಬಾಲವನ್ನು ಕತ್ತರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿರಿಯ ಹಾಗೂ ಕಿರಿಯ ಕಾವಾಡಿಗರಾದ ಸುದೀಪ್ ಮತ್ತು ಮೊಹಮ್ಮದ್ ಎಂಬುವವರನ್ನು ಶಿವಮೊಗ್ಗ ವನ್ಯಜೀವಿ ವಿಭಾಗದ ಡಿಎಫ್‌ಓ ಪ್ರಸನ್ನ ಪಟಗಾರ್ ಅಮಾನತುಗೊಳಿಸಿದ್ದಾರೆ.
ಅ.17 ರಂದು ಭಾನುಮತಿ ಎಂಬ ಹೆಣ್ಣಾನೆಯ ಬಾಲವು ಭಾಗಶಃ ತುಂಡಾದ ರೀತಿಯಲ್ಲಿ ಪತ್ತೆಯಾಗಿತ್ತು. ಬಾಲ ತುಂಡಾದ ಬಗ್ಗೆ ಮಾಹಿತಿ ಪಡೆದ ಡಿಎಫ್‌ಓ ಪ್ರಸನ್ನ ಅವರು ಎಸಿಎಫ್ ನೇತೃತ್ವದಲ್ಲಿ ತನಿಖಾ ಸಮಿತಿ ರಚಿಸಿ ವರದಿ ನೀಡುವಂತೆ ಸೂಚಿಸಿದ್ದರು.
ಈ ಸಮಿತಿ ವರದಿಯ ಪ್ರಕಾರ ಆಣೆ ಬಾಲ ಭಾಗಶಃ ತುಂಡಾಗಲು ಹರಿತವಾದ ಆಯುಧಗಳನ್ನು ಬಳಸಲಾಗಿದ್ದು, ಇದರ ಹೊಣೆಗಾರಿಕೆಯನ್ನು ಮಾವುತ ಮತ್ತು ಕಾವಾಡಿಗರೇ ಹೊರಬೇಕು ಎಂದು ವರದಿ ನೀಡಲಾಗಿತ್ತು. ಈ ವರದಿಯ ಆಧಾರ ಕಾವಾಡಿಗಳಿಬ್ಬರನ್ನು ಡಿಎಫ್‌ಓ ಅಮಾನತು ಮಾಡಿದ್ದಾರೆ. ವಿಚಾರಣೆ ಮುಗಿಯುವ ವರೆಗೆ ಭಾನುಮತಿ ಬೇರೆಯವರ ಉಸ್ತುವಾರಿಯಲಿರಲಿದೆ ಎಂದು ತಿಳಿಸಿದರು.
ಭಾನುಮತಿ ಹೆಣ್ಣಾನೆಯು ಗರ್ಭಿಣಿಯಾಗಿದ್ದು, ನವೆಂಬರ್ 04ರಂದು ಹೆಣ್ಣು ಮರಿಗೆ ಜನ್ಮ ನೀಡಿದೆ.
ಎಂ.ಕೇಶವ ಮೈಸೂರು: ನಗರದ ಮಣಿಪಾಲ್ ಆಸ್ಪತ್ರೆಯ ಜಂಕ್ಷನ್ ಬಳಿ ಹಾಗೂ ನಂಜನಗೂಡು ರಸ್ತೆಯ ಎಪಿಎಂಸಿ ಬಳಿ ನಿರ್ಮಾ ಣವಾಗುತ್ತಿರುವ ಫ್ಲೈ…
ಚಿರಂಜೀವಿ ಸಿ ಹುಲ್ಲಹಳ್ಳಿ ಸ್ಥಳೀಯ ಮಾರುಕಟ್ಟೆ ದರ ೭೨ರಿಂದ ೭೫ರೂ. ಒಂದೇ ತಿಂಗಳ ಅಂತರದಲ್ಲಿ ದುಪ್ಪಟ್ಟು ಚಹ- ಕಾಫಿ, ಸಿಹಿ…
ಲಕ್ಷ್ಮೀಕಾಂತ್ ಕೊಮಾರಪ್ಪ ಮಣ್ಣಿನೊಂದಿಗೆ ಯುವಜನರ ನಂಟು ಬೆಸೆಯುವ ಉದ್ದೇಶ ನಾಳೆ ಯಂಗ್ ಇಂಡಿಯನ್ ಫಾರ್ಮರ್ಸ್ ಅಸೋಸಿಯೇಷನ್ ವತಿಯಿಂದ ಗದ್ದೆ ನಾಟಿ…
ಎಂ.ನಾರಾಯಣ ತಿ.ನರಸೀಪುರ: ಹೂ ಕಚ್ಚದ ಕಡಲೆಕಾಯಿ, ಸೂರ್ಯಕಾಂತಿ, ಮುಸುಕಿನ ಜೋಳದ ಬೆಳೆಗಳು ತಿ.ನರಸೀಪುರ: ತಾಲ್ಲೂಕಿನಲ್ಲಿ ಸಮರ್ಪಕ ಮಳೆ ಬಾರದಿರುವುದರಿಂದ ರೈತರು…
ಭೇರ್ಯ ಮಹೇಶ್ ಭೇರ್ಯ: ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಮಳಿಗೆಗಳು ತೆರೆಯದೆ ಪ್ರಯಾಣಿಕರಿಗೆ ಸಮಸ್ಯೆ ಭೇರ್ಯ: ಭೇರ್ಯ ಗ್ರಾಮದ ಬಸ್ ನಿಲ್ದಾಣದಲ್ಲಿ…