Mysore
21
broken clouds

Social Media

ಶುಕ್ರವಾರ, 21 ಆಗಸ್ಟ್ 2026
Light
Dark

ದುಬಾರೆ ದುರಂತ ಬೆನ್ನಲ್ಲೇ ಸಕ್ರೆಬೈಲು ಆನೆ ಬಿಡಾರ ತಾತ್ಕಾಲಿಕ ಬಂದ್‌

ಶಿವಮೊಗ್ಗ: ಕೊಡಗಿನ ದುಬಾರೆ ಆನೆ ಬಿಡಾರದಲಲಿ ನಡೆದ ಸಾಕಾನೆಗಳ ಕಾಳಗದಲ್ಲಿ ಮಹಿಳೆ ಮೃತಪಟ್ಟ ಘಟನೆ ಬಳಿಕ ಮುನ್ನೆಚ್ಚರಿಕಾ ಕ್ರಮವಾಗಿ ಸಕ್ರೆಬೈಲು ಬಿಡಾರವನ್ನು ತಾತ್ಕಾಲಿಕವಾಗಿ ಬಂದ್‌ ಮಾಡಲಾಗಿದೆ.

ಆರಂಭದಲ್ಲಿ ಸಕ್ರೆಬೈಲು ಆನೆ ಬಿಡಾರದಲ್ಲಿ ಆನೆಗಳ ಸ್ನಾನ ಹಾಗೂ ಮೈ ಮುಟ್ಟುವುದನ್ನು ಮಾತ್ರ ನಿಷೇಧಿಸಲಾಗಿತ್ತು. ಪ್ರವಾಸಿಗರಿಗೆ ದೂರದಿಂದ ಆನೆಗಳನ್ನು ವೀಕ್ಷಿಸಲು ಅವಕಾಶ ನೀಡಲಾಗಿತ್ತು.

ಆದರೆ ಯಾವುದೇ ಅಹಿತಕರ ಘಟನೆ ನಡೆಯದಂತೆ ತಡೆಯಲು ಇದೀಗ ಪ್ರವಾಸಿಗರ ಪ್ರವೇಶವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

ಶಿವಮೊಗ್ಗ ತಾಲ್ಲೂಕಿನ ಗಾಜನೂರು ಸಮೀಪ, ತುಂಗಾ ಜಲಾಶಯದ ಹಿನ್ನೀರಿನಲ್ಲಿ ಇರುವ ಸಕ್ರೆಬೈಲು ಆನೆ ಬಿಡಾರಕ್ಕೆ ರಾಜ್ಯದ ವಿವಿಧ ಭಾಗಗಳಿಂದ ಪ್ರವಾಸಿಗರು ಭೇಟಿ ನೀಡುತ್ತಿದ್ದರು.

 

Tags:
error: Content is protected !!