Mysore
24
overcast clouds

Social Media

ಮಂಗಳವಾರ, 24 ಜೂನ್ 2025
Light
Dark

ಸಲಾರ್‌ ಚಿತ್ರ ಬಿಡುಗಡೆ: ಕನ್ನಡಕ್ಕೆ ಅವಮಾನ!

ಬೆಂಗಳೂರು: ಕನ್ನಡದ ನಿರ್ಮಾಣ ಸಂಸ್ಥೆ ಹೊಂಬಾಳೆ ಫಿಲಂಸ್ ನಿರ್ಮಾಣದ ಸಲಾರ್ ಸಿನಿಮಾದಿಂದ ಕನ್ನಡಕ್ಕೇ ಅನ್ಯಾಯವಾಗುತ್ತಿದೆ ಎಂಬ ಕೂಗು ಕೇಳಿ ಬರುತ್ತಿದೆ.

ಪ್ರಶಾಂತ್ ನೀಲ್ ನಿರ್ದೇಶನದ ಪ್ರಭಾಸ್ ನಾಯಕರಾಗಿರುವ ಸಲಾರ್ ಸಿನಿಮಾ ಬಹುಭಾಷೆಗಳಲ್ಲಿ ಬಿಡುಗಡೆಯಾಗುತ್ತಿದೆ. ಎಲ್ಲಾ ರಾಜ್ಯಗಳಲ್ಲೂ ಆಯಾ ರಾಜ್ಯದ ಭಾಷೆಗೇ ಹೆಚ್ಚು ಪ್ರಾಮುಖ್ಯತೆ ನೀಡಲಾಗಿದೆ.

ಆದರೆ ನಮ್ಮ ರಾಜ್ಯದಲ್ಲಿ ಮಾತ್ರ ಕನ್ನಡಕ್ಕಿಂತ ಬೇರೆ ಭಾಷೆಗಳ ಶೋಗೇ ಹೆಚ್ಚು ಆದ್ಯತೆ ನೀಡಲಾಗಿದೆ ಎಂದು ಆರೋಪ ಕೇಳಿಬಂದಿದೆ. ಸಲಾರ್ ಕನ್ನಡ ಆವೃತ್ತಿಗೆ ಕೇವಲ 10 ಶೋ ನೀಡಲಾಗಿದೆ. ಉಳಿದಂತೆ ತೆಲುಗು, ತಮಿಳು ಭಾಷೆಗಳ ಶೋಗೇ ಹೆಚ್ಚು ಆದ್ಯತೆ ನೀಡಲಾಗಿದೆ.

ಇದು ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿದೆ. ಕನ್ನಡದ ನಿರ್ಮಾಣ ಸಂಸ್ಥೆ ನಿರ್ಮಿಸಿರುವ ಕನ್ನಡಿಗನೇ ನಿರ್ದೇಶಿಸಿರುವ ಸಿನಿಮಾಗೆ ಕನ್ನಡದಲ್ಲಿ ಹೆಚ್ಚು ಶೋ ನೀಡದೇ ಇರುವುದರ ಹಿಂದಿನ ಉದ್ದೇಶವೇನು ಎಂದು ಆಕ್ರೋಶ ವ್ಯಕ್ತವಾಗಿದೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!