ಬೆಂಗಳೂರು: ಕನ್ನಡದ ನಿರ್ಮಾಣ ಸಂಸ್ಥೆ ಹೊಂಬಾಳೆ ಫಿಲಂಸ್ ನಿರ್ಮಾಣದ ಸಲಾರ್ ಸಿನಿಮಾದಿಂದ ಕನ್ನಡಕ್ಕೇ ಅನ್ಯಾಯವಾಗುತ್ತಿದೆ ಎಂಬ ಕೂಗು ಕೇಳಿ ಬರುತ್ತಿದೆ.
ಪ್ರಶಾಂತ್ ನೀಲ್ ನಿರ್ದೇಶನದ ಪ್ರಭಾಸ್ ನಾಯಕರಾಗಿರುವ ಸಲಾರ್ ಸಿನಿಮಾ ಬಹುಭಾಷೆಗಳಲ್ಲಿ ಬಿಡುಗಡೆಯಾಗುತ್ತಿದೆ. ಎಲ್ಲಾ ರಾಜ್ಯಗಳಲ್ಲೂ ಆಯಾ ರಾಜ್ಯದ ಭಾಷೆಗೇ ಹೆಚ್ಚು ಪ್ರಾಮುಖ್ಯತೆ ನೀಡಲಾಗಿದೆ.
ಆದರೆ ನಮ್ಮ ರಾಜ್ಯದಲ್ಲಿ ಮಾತ್ರ ಕನ್ನಡಕ್ಕಿಂತ ಬೇರೆ ಭಾಷೆಗಳ ಶೋಗೇ ಹೆಚ್ಚು ಆದ್ಯತೆ ನೀಡಲಾಗಿದೆ ಎಂದು ಆರೋಪ ಕೇಳಿಬಂದಿದೆ. ಸಲಾರ್ ಕನ್ನಡ ಆವೃತ್ತಿಗೆ ಕೇವಲ 10 ಶೋ ನೀಡಲಾಗಿದೆ. ಉಳಿದಂತೆ ತೆಲುಗು, ತಮಿಳು ಭಾಷೆಗಳ ಶೋಗೇ ಹೆಚ್ಚು ಆದ್ಯತೆ ನೀಡಲಾಗಿದೆ.
ಇದು ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿದೆ. ಕನ್ನಡದ ನಿರ್ಮಾಣ ಸಂಸ್ಥೆ ನಿರ್ಮಿಸಿರುವ ಕನ್ನಡಿಗನೇ ನಿರ್ದೇಶಿಸಿರುವ ಸಿನಿಮಾಗೆ ಕನ್ನಡದಲ್ಲಿ ಹೆಚ್ಚು ಶೋ ನೀಡದೇ ಇರುವುದರ ಹಿಂದಿನ ಉದ್ದೇಶವೇನು ಎಂದು ಆಕ್ರೋಶ ವ್ಯಕ್ತವಾಗಿದೆ.
ಕಳೆದ ಮೂರು ವರ್ಷಗಳ ಅವಧಿಯಲ್ಲಿ, ರಾಜ್ಯದಲ್ಲಿ ೨,೮೪೭ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ರಾಷ್ಟ್ರೀಯ ಅಪರಾಧ ದಾಖಲೆಗಳ ವಿಭಾಗ (ಎನ್‌ಸಿಆರ್‌ಬಿ)…
ಭಾರತದ ಶಿಕ್ಷಣ ನೀತಿ ಮಕ್ಕಳ ಆರೋಗ್ಯದ ಕುರಿತು ಸ್ಪಷ್ಟ ಮಾರ್ಗಸೂಚಿ ನೀಡಿದ್ದರೂ, ಬಹುತೇಕ ಶಾಲೆಗಳು ಇದನ್ನು ಪಾಲಿಸುತ್ತಿಲ್ಲ ಎಂಬುದು ವಿಷಾದಕರ…
ಕೇಂದ್ರ ಸರ್ಕಾರದಲ್ಲಿ ಕೃಷಿ, ರೈತ ಕಲ್ಯಾಣ ಮತ್ತು ಗ್ರಾಮೀಣ ಅಭಿವೃದ್ಧಿ ಸಚಿವರಾಗಿರುವ ಶಿವರಾಜ್ ಸಿಂಗ್ ಚೌಹಾಣ್ ಅವರು ಡಿಸೆಂಬರ್ ೧೬ರಂದು…
ಪರಿಸರಕ್ಕೆ ಪೂರಕವಾದ ವಸ್ತುಗಳನ್ನು ನೀಡಲು ಸಲಹೆ; ಸ್ಮರಣಿಕೆ, ಟ್ರೋಫಿ ಬದಲು ಸಸಿ, ಪುಸ್ತಕ ವಿತರಿಸಲು ಸುತ್ತೋಲೆ ಮೈಸೂರು: ರಾಜ್ಯ ಸರ್ಕಾರ…
ಪುನೀತ್ ಕೊಡವ ಹಾಕಿ ಅಕಾಡೆಮಿ ಆಶ್ರಯದಲ್ಲಿ ಆಯೋಜನೆ; ವಿಜೇತ ತಂಡಕ್ಕೆ ೨ ಲಕ್ಷ ರೂ. ಬಹುಮಾನ ಮಡಿಕೇರಿ: ಕೊಡವ ಹಾಕಿ…
ಪ್ರತಿದಿನ ರಾತ್ರಿ ಅರಮನೆಗೆ ದೀಪಾಲಂಕಾರ ಹೂವಿನಿಂದ ಶೃಂಗೇರಿ ದೇವಸ್ಥಾನದ ಮಾದರಿ ನಿರ್ಮಾಣ ಪುಷ್ಪ ಪ್ರಿಯರ ಕಣ್ಮನ ಸೆಳೆಯಲಿರುವ ವಿವಿಧ ಮಾದರಿಗಳು…