ಬೆಂಗಳೂರು: ನಗರದ ರಾಜ್‌ಕುಮಾರ್ ರಸ್ತೆಯಲ್ಲಿರುವ ಮೈ ಇವಿ ಎಲೆಕ್ಟ್ರಿಕ್ ಸ್ಕೂಟರ್ ಶೋ ರೂನಲ್ಲಿ ಅಗ್ನಿ ದುರಂತ ಸಂಭವಿಸಿದ್ದು, ಓರ್ವ ಯುವತಿ ಅಗ್ನಿ ಅವಘಡದಲ್ಲಿ ಸಜೀವ ದಹನವಾಗಿದ್ದಾರೆ.
ನಗರದ ಸ್ಕೂಟರ್ ಶೋ ರೂಂನಲ್ಲಿ ಇಂದು(ನ.19) ಸುಮಾರು ಸಂಜೆ 5.30 ಗಂಟೆಯ ವೇಳೆಗೆ ಶಾರ್ಟ್ ಸರ್ಕ್ಯೂಟ್ ಉಂಟಾಗಿ ಅಗ್ನಿ ದುರಂತ ಸಂಭವಿಸಿದ್ದು, ನೋಡು ನೋಡುತ್ತಿದ್ದಂತೆಯೇ ಇಡೀ ಶೋ ರೂಂಗೆ ಬೆಂಕಿ ಆವರಿಸಿ ಧಗಧಗನೆ ಉರಿದಿದೆ. ಈ ಘಟನೆಯಲ್ಲಿ ಸೇಲ್ಸ್ ಗರ್ಲ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಯುವತಿ ಪ್ರಿಯಾ(20) ಎಂಬುವವರು ಶೋ ರೂಂ ಒಳಗೆಯೇ ಸಿಲುಕಿಕೊಂಡಿದ್ದು, ಹೊರ ಬರಲು ಆಗದೇ ಭೀಕರ ಅಗ್ನಿ ಜ್ವಾಲೆಗೆ ಬಲಿಯಾಗಿ ಸಜೀವ ದಹನವಾಗಿದ್ದಾರೆ.
ಇನ್ನು ಸುಟ್ಟು ಕರಕಲಾಗಿದ್ದ ಮೃತದೇಹವನ್ನು ಅಗ್ನಿಶಾಮಕ ಸಿಬ್ಬಂದಿಯವರು ಹೊರತೆಗೆದಿದ್ದು, ಬೆಂಕಿಯನ್ನು ಆರಿಸಲು ಹರಸಾಹಸ ಮಾಡಿದ್ದಾರೆ. ಅಲ್ಲದೇ ಈ ಶೋ ರೂಂನಲ್ಲಿದ್ದ 45 ಎಲೆಕ್ಟ್ರಿಕ್ ಸ್ಕೂಟರ್‌ಗಳು ಬೆಂಕಿಗೆ ಆಹುತಿಯಾಗಿವೆ. ಬಳಿಕ ಘಟನೆ ನಡೆದ ಸ್ಥಳಕ್ಕೆ ರಾಜಾಜಿನಗರ ಠಾಣೆ ಪೊಲೀಸರು ಭೇಟಿ ನೀಡಿ ಸ್ಥಳವನ್ನು ಪರಿಶೀಲಿಸಿದ್ದಾರೆ.
ಬೆಂಗಳೂರು : ಬೆಂಗಳೂರಿನಲ್ಲಿ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಟ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ…
ಬೆಳಗಾವಿ : ಸರ್ಕಾರದಿಂದ ಪಡೆದ ಸಿಎ ನಿವೇಶನಗಳಲ್ಲಿ ಕಟ್ಟಡ ನಿರ್ಮಾಣ ಮಾಡಲು ಈಗಿರುವ ಮೂರು ವರ್ಷಗಳ ಮಿತಿಯನ್ನು ಐದು ವರ್ಷಗಳಿಗೆ…
ಮೈಸೂರು : ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಹಾಗೂ ಮುಂಬೈನ ಬಾಂಧ್ರಾ ಪೊಲೀಸ್ ಅಧಿಕಾರಿ ಸೋಗಿನಲ್ಲಿ ನಗರದ ವೈದ್ಯರೊಬ್ಬರಿಗೆ…
ಮೈಸೂರು : ಜಾತಿ ನಿಂದನೆ, ಅಸ್ಪೃಶ್ಯತೆ ಆಚರಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ದೂರು ದಾಖಲು ಹಾಗೂ ತನಿಖೆ ನಡೆಸುವ ಉದ್ದೇಶದಿಂದ ಆರಂಭಗೊಂಡಿರುವ…
ಮೈಸೂರು : ಕರ್ನಾಟಕ ಪೊಲೀಸ್ ಅಕಾಡೆಮಿ ಮತ್ತು ಸಾವಿತ್ರಿಬಾಯಿ ಫುಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆಯ ನಡುವೆ ಒಡಂಬಡಿಕೆಗೆ…
ಬೆಳಗಾವಿ (ಸುವರ್ಣಸೌಧ) : ಇತ್ತೀಚೆಗೆ ನಿಧನರಾದ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…