ವಿಜಯಪುರ: ಗುಮ್ಮಟ ನಗರಿ ವಿಜಯಪುರ ಜಿಲ್ಲೆಯ ಯುವತಿಯೊಬ್ಬರು ದೇಶದ ಅತ್ಯಂತ ಕಿರಿಯ ಪೈಲಟ್ ಆಗುವ ಮೂಲಕ ರಾಜ್ಯಕ್ಕೆ ಹೆಮ್ಮೆ ತಂದಿದ್ದಾರೆ.
18 ವರ್ಷದ ಸಮೈರಾ ಹುಲ್ಲೂರು ಕಮರ್ಷಿಯಲ್ ಪೈಲೆಟ್ ಲೈಸೆನ್ಸ್ ಪಡೆಯುವ ಮೂಲಜ ಅಭೂತಪೂರ್ವ ಸಾಧನೆ ಗೈದಿದ್ದಾರೆ.
ಈ ಮೂಲಕ ಐತಿಹಾಸಿಕ ಜಿಲ್ಲೆಯಾಗಿ ವಿಜಯಪುರ ಜಗತ್ ವಿಖ್ಯಾತಿ ಪಡೆದಿದೆ. ಜೊತೆಗೆ ಜಿಲ್ಲೆಯ ಅನೇಕರು ರಾಜ್ಯ ಹಾಗೂ ದೇಶಕ್ಕೆ ಕೀರ್ತಿ ತಂದಿದ್ದಾರೆ.
ಸಮೈರಾ ಅವರ ಸಾಧನೆಯಿಂದ ಕುಟುಂಬದಲ್ಲಿ ಸಂತಸ ಮನೆಮಾಡಿದ್ದು, ಸಮೈರಾಗೆ ಶುಭಾಶಯಗಳ ಮಹಾಪೂರವೇ ಹರಿದುಬರುತ್ತಿವೆ.
ಆರು ತಿಂಗಳ ಕಾಲ ದೆಹಲಿಯಲ್ಲಿ ಪೈಲಟ್ ಟ್ರೇನಿಂಗ್ ಮುಗಿಸಿ 18ನೇ ವಯಸ್ಸಿಗೆ ಪೈಲಟ್ ಆಗಿ ಹೊರಹೊಮ್ಮಿದ್ದಾರೆ. 25ನೇ ವಯಸ್ಸಿಗೆ ಪೈಲಟ್ ಆಗಿರುವ ಕ್ಯಾಪ್ಟನ್ ತಪೇಶ್ ಕುಮಾರ್ ಇವರ ಈ ಸಾಧನೆಗೆ ಪ್ರೇರಣೆಯಾಗಿದ್ದಾರೆ.