sameer
ಬೆಳ್ತಂಗಡಿ : ಧರ್ಮಸ್ಥಳದ ಧರ್ಮಾಧಿಕಾರಿಗಳ ಕುಟುಂಬದ ವಿರುದ್ದ ಯೂಟ್ಯೂಬ್ ಮೂಲಕ ಅಪಪ್ರಚಾರ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಯೂಟ್ಯೂಬರ್ ಸಮೀರ್ ಎಂ.ಡಿ. ಕೊನೆಗೂ ಪೊಲೀಸರ ವಿಚಾರಣೆಗೆ ಹಾಜರಾಗಿದ್ದಾರೆ.
ಬೆಳ್ತಂಗಡಿ ಠಾಣೆ ಪೊಲೀಸರ ಮುಂದೆ ಭಾನುವಾರ ಎಂ.ಡಿ.ಸಮೀರ್, ತಮ್ಮ ಮೂವರು ವಕೀಲರೊಂದಿಗೆ ವಿಚಾರಣೆಗೆ ಹಾಜರಾದರು. ಸಮೀರ್ ವಿರುದ್ದ ಬೆಳ್ತಗಂಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಆದರೆ ಬಂಧನಕ್ಕೂ ಮೊದಲು ನಿರೀಕ್ಷಣಾ ಜಾಮೀನು ಪಡೆದಿದ್ದ ಸಮೀರ್‌ಗೆ ಎರಡು ದಿನದಲ್ಲಿ ವಿಚಾರಣೆಗೆ ಹಾಜರಾಗಲು ನ್ಯಾಯಾಲಯ ಸೂಚಿಸಿತ್ತು. ಹೀಗಾಗಿ ಸಮೀರ್ ಪೊಲೀಸರ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ.
ಬೆಳ್ತಗಂಡಿ ಪೊಲೀಸರು ಸಮೀರ್‌ಗೆ ಮೂರು ಬಾರಿ ನೋಟಿಸ್ ನೀಡಿದ್ದರು. ಬಂಧನ ಭೀತಿಯಲ್ಲಿದ್ದ ಸಮೀರ್ ಮಂಗಳೂರು ನ್ಯಾಯಾಲಯದ ಮೂಲಕ ನಿರೀಕ್ಷಣಾ ಜಾಮೀನು ಪಡೆದಿದ್ದರು. ಹೀಗಾಗಿ ಪೊಲೀಸರು ಬಂಧನ ಕಾರ್ಯಾಚರಣೆ ನಿಲ್ಲಿಸಿದ್ದರು. ನ್ಯಾಯಾಲಯ ನೀಡಿದ ಗಡುವು ಭಾನುವಾರ ಅಂತ್ಯಗೊಳ್ಳುತ್ತಿದ್ದಂತೆ ಸಮೀರ್ ಬೆಳ್ತಂಗಡಿ ಪೊಲೀಸರ ಮುಂದೆ ಹಾಜರಾದರು.
ತನಿಖಾಧಿಕಾರಿ ಕೆ.ನಾಗೇಶ್ ವಿಚಾರಣೆ
ತನಿಖಾಧಿಕಾರಿ ಕೆ.ನಾಗೇಶ್ ವಿಚಾರಣೆ ನಡೆಸುತ್ತಿದ್ದು, ಸಮೀರ್ ಬೆಳ್ತಂಗಡಿ ಠಾಣೆಯಲ್ಲೇ ವಿಚಾರಣೆ ನಡೆದಿದೆ ಎನ್ನಲಾಗಿದೆ. ಧರ್ಮಸ್ಥಳದಲ್ಲಿ ಭದ್ರತೆ ಸಮಸ್ಯೆ ಕಾಡಲಿದೆ ಎಂದು ನಿರೀಕ್ಷಣಾ ಜಾಮೀನು ಅರ್ಜಿಯಲ್ಲಿ ಉಲ್ಲೇಖಿಸಿದ್ದರು. ಹೀಗಾಗಿ ಧರ್ಮಸ್ಥಳ ಠಾಣೆ ಬದಲು ಬೆಳ್ತಂಗಡಿ ಠಾಣೆಯಲ್ಲಿ ವಿಚಾರಣೆ ನಡೆಯುತ್ತಿದೆ.
ಬೆಳಿಗ್ಗೆ ೧೦.೩೦ರ ವೇಳೆಗೆ ವಿಚಾರಣೆಗೆ ಬರುವುದಾಗಿ ಹೇಳಿದ್ದ ಸಮೀರ್ ವಕೀಲರೊಂದಿಗೆ ಮಧ್ಯಾಹ್ನ ೧ ಗಂಟೆ ಹೊತ್ತಿಗೆ ಕೆಲ ದಾಖಲೆ ಪತ್ರಗಳನ್ನು ಹಿಡಿದು ಬೆಳ್ತಗಂಡಿ ಪೊಲೀಸ್ ಠಾಣೆಗೆ ಹಾಜರಾದರು.
ಏನಿದು ಪ್ರಕರಣ?
ಧರ್ಮಸ್ಥಳ ದೇಗುಲ ವಿರುದ್ಧ ಅಪಪ್ರಚಾರ ಆರೋಪದಲ್ಲಿ ‘ದೂತ’ ಸಮೀರ್ ಯೂಟ್ಯೂಬ್ ವಾಹಿನಿಯ ಸಮೀರ್ ತಮ್ಮ ವಿಡಿಯೋದಲ್ಲಿ ದಂಗೆ ಏಳುವಂತೆ ಜನರಿಗೆ ಪ್ರಚೋದಿಸಿದ್ದರು. ಈ ಹಿನ್ನೆಲೆಯಲ್ಲಿ ಧರ್ಮಸ್ಥಳ ಠಾಣೆಯಲ್ಲಿ ದೊಂಬಿ, ಪ್ರಚೋದನೆ ಸೇರಿದಂತೆ ಹಲವು ಪ್ರಕರಣಗಳ ಅಡಿಯಲ್ಲಿ ಕೇಸ್‌ಗಳು ದಾಖಲಾಗಿತ್ತು. ಈ ಪ್ರಕರಣದಲ್ಲಿ ಜಾಮೀನು ನೀಡಿದ್ದ ನ್ಯಾಯಾಲಯ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿತ್ತು.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…