ಬೆಂಗಳೂರು: ಕೊಪ್ಪಳ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ಸಂಗಣ್ಣ ಕರಡಿ ಬಿಜೆಪಿಗೆ ರಾಜೀನಾಮೆ ನೀಡಿದ್ದಾರೆ. ಈ ಬಾರಿಯ ಲೋಕಸಭಾ ಚುನಾವಣೆಗೆ ಟಿಕೆಟ್ ಕೈತಪ್ಪಿದ ಬೆನ್ನಲ್ಲೇ ಅಸಮಾಧಾನ ಹೋರಹಾಕಿದ್ದ ಕರಡಿ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ತಿಲಾಂಜಲಿ ಬಿಟ್ಟಿದ್ದಾರೆ.
ಈ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರಿಗೆ ರಾಜೀನಾಮೆ ಪತ್ರ ನೀಡಿದ್ದಾರೆ. ಹಾಗೂ ಸ್ಪೀಕರ್ ಓಂ ಬಿರ್ಲಾ ಅವರಿಗೆ ಮೇಲ್ ಮೂಲಕ ರಾಜೀನಾಮೆ ನೀಡಿದ್ದಾರೆ.
ಕರಡಿ ಬದಲಾಗಿ ಈ ಬಾರಿ ಕೊಪ್ಪಳ ಲೋಕಸಭಾ ಕ್ಷೇತ್ರಕ್ಕೆ ಹೊಸ ಅಭ್ಯರ್ಥಿ ಡಾ.ಬಸವರಾಜ್ ಕ್ಯಾವಟರ್ ಅವರಿಗೆ ಬಿಜೆಪಿ ಮಣೆ ಹಾಕಿತ್ತು. ಇದರಿಂದ ಬೇಸರಗೊಂಡಿದ್ದ ಕರಡಿ ಬಿಜೆಪಿಗೆ ಗುಡ್ ಬೈ ಹೇಳಿದ್ದಾರೆ.
ಇನ್ನು ಬಿಜೆಪಿ ತೊರೆದಿರುವ ಸಂಗಣ್ಣ ಕರಡಿ ನಾಳೆ (ಏ.೧೭) ಬೆಳಿಗ್ಗೆ ೧೦.೩೦ಕ್ಕೆ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಸೇರಲಿದ್ದಾರೆ ಎಂದು ಹೇಳಲಾಗಿದೆ.





