ಬೆಳಗಾವಿ: ಅದಾನಿ ಕೇಸ್ ಮುಚ್ಚಿ ಹಾಕಲು ಒಂದು ರಾಷ್ಟ್ರ, ಒಂದು ಚುನಾವಣೆಯನ್ನು ಕೇಂದ್ರ ಸರ್ಕಾರ ಜಾರಿಗೆ ತಂದಿದೆ ಎಂದು ಸಚಿವ ಸಂತೋಷ್ ಲಾಡ್ ವಾಗ್ದಾಳಿ ನಡೆಸಿದ್ದಾರೆ.
ಬೆಳಗಾವಿಯಲ್ಲಿ ಇಂದು(ಡಿಸೆಂಬರ್.18) ಚಳಿಗಾಲದ ಅಧಿವೇಶನ ತೃಪ್ತಿ ತಂದಿಲ್ಲ ಎಂಬ ವಿರೋಧ ಪಕ್ಷಗಳ ಹೇಳಿಕೆಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಬಿಜೆಪಿ ಸರ್ಕಾರ ಅಧಿಕಾರದಲಿದ್ದಾಗ ಉತ್ತರ ಕರ್ನಾಟಕಕ್ಕೆ ಎಷ್ಟು ಹಣ ನೀಡಿದ್ದರು. ಕೇಂದ್ರ ಸರ್ಕಾರ ಕೇವಲ ಗೌತಮ ಅದಾನಿ ಅವರ ವಂಚನೆ ಪ್ರಕರಣವನ್ನು ಮುಚ್ಚಿ ಹಾಕಲು ಒಂದು ರಾಷ್ಟ್ರ, ಒಂದು ಚುನಾವಣೆಯನ್ನು ಸಂಸತ್‌ನಲ್ಲಿ ವಿಧೇಯಕ ಮಂಡನೆ ಮಾಡಿದ್ದಾರೆ ಎಂದು ಹೇಳಿದ್ದಾರೆ.
ಅದಾನಿ ಬಗ್ಗೆ ಅಮೆರಿಕಾ ಕೋರ್ಟ್ ಹೇಳಿದ್ದೇನು? ಅದಾನಿ ಭ್ರಷ್ಟಾಚಾರ ಮಾಡಿದ್ದು ಎಲ್ಲಿ? ದೇಶದಲ್ಲಿ ಅದಾನಿ ಸಂಸ್ಥೆಗೆ ಏನೆಲ್ಲಾ ಕೊಡಲಾಗಿದೆ? ಭಾರತದಲ್ಲಿ ಭ್ರಷ್ಟಾಚಾರ ಆಗಿದೆ ಎಂದು ಅಮೆರಿಕಾ ಕೋರ್ಟ್ ತಿಳಿಸಿದೆ. ಆದರೆ ಈ ಬಗ್ಗೆ ಕೇಂದ್ರ ಸರ್ಕಾರ ಯಾವುದೇ ಕ್ರಮ ಕೈಗೊಳ್ಳದೆ ಒಂದು ರಾಷ್ಟ್ರ, ಒಂದು ಚುನಾವಣೆಯನ್ನು ಜಾರಿಗೆ ತರಲು ವಿಧೇಯಕ ಮಂಡಿಸಿದ್ದಾರೆ ಎಂದು ಕಿಡಿಕಾರಿದ್ದಾರೆ.