ಧಾರವಾಡ: ಕೇಂದ್ರ ಸರ್ಕಾರ, ಭಾರತದೊಳಗೆ ಚೀನಾ ಅತಿಕ್ರಮ ಪ್ರವೇಶ ಮಾಡಿದ್ದು, ಅದನ್ನು ಮುಚ್ಚಿ ಹಾಕಲು ವಕ್ಫ್ ಬಿಲ್ ಮಂಡಿಸಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಕಿಡಿಕಾರಿದ್ದಾರೆ.
ಧಾರವಾಡದಲ್ಲಿ ಇಂದು(ಏಪ್ರಿಲ್.7) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಚೀನಾ 600ಕ್ಕೂ ಹೆಚ್ಚು ಹಳ್ಳಿಗಳನ್ನು ಕಬ್ಜಾ ಮಾಡಿದೆ. ಅಲ್ಲದೇ ಚೀನಾ ನಮ್ಮ ದೇಶದ 176 ಕಿ.ಮೀ ಅತಿಕ್ರಮ ಪ್ರವೇಶಿಸಿದೆ. ಹೀಗಾಗಿ ಕೇಂದ್ರ ಸರ್ಕಾರ ಅದನ್ನು ಮುಚ್ಚಿ ಹಾಕಲು ‘ವಕ್ಫ್’ ಬಿಲ್ ಮಂಡಿಸುವ ನಾಟಕ ಮಾಡಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ಚೀನಾದವರು ಎರಡು ಪೋಸ್ಟ್ ಕ್ರಿಯೇಟ್ ಮಾಡಿದ್ದಾರೆ. ಈ ಕಾರಣಕ್ಕೆ ಈ ವಿಚಾರ ಎಲ್ಲೂ ಚರ್ಚೆಗೆ ಬರಬಾರದೆಂದು ವಕ್ಫ್ ಬಿಲ್ ತಂದಿದ್ದಾರೆ. ಇನ್ನೂ ಬಡತನ, ನಿರುದ್ಯೋಗದ ಬಗ್ಗೆ ಚರ್ಚೆ ಆಗಬಾರದೆಂಬ ಉದ್ದೇಶದಿಂದ ಬಿಜೆಪಿಯವರು ಬಿಲ್ ಮಂಡಿಸಿದ್ದಾರೆ. ಆದರೆ ನಾಳೆ ಇದು ಕೋರ್ಟ್‌ನಲ್ಲಿ ಬೀಳುತ್ತದೆಂದು ತಿಳಿದಿದ್ದರೂ ವಕ್ಫ್ ಬಿಲ್ ಅಂಗೀಕರಿಸಿದ್ದಾರೆ ಎಂದು ಹರಿಹಾಯ್ದರು.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…