ಬೆಂಗಳೂರು: ಭಾರತ-ಪಾಕ್ ಮಧ್ಯೆ ಕದನ ವಿರಾಮ ಘೋಷಣೆಯಾದ ಬಳಿಕ ಪ್ರಧಾನಿ ನರೇಂದ್ರ ಸರ್ವಪಕ್ಷ ಸಭೆ ಕರೆಯದೇ ಸರ್ವಾಧಿಕಾರಿಯಂತೆ ವರ್ತಿಸುತ್ತಿದ್ದಾರೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಕಿಡಿಕಾರಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು, ಮೋದಿ ಬಿಹಾರಕ್ಕೆ ಹೋಗಿ ಭಾಷಣ ಮಾಡಿದ್ರು. ಪಾಕ್ ಬೇಡಿಕೆಯಿಂದ ಕದನ ವಿರಾಮ ಅಂತಾರೆ. ಅತ್ತ ಅಮೇರಿಕಾ ಅಧ್ಯಕ್ಷ ಟ್ರಂಪ್ ನನ್ನಿಂದಲೇ ಕದನ ವಿರಾಮ ಘೋಷಣೆಯಾಗಿದ್ದು ಅಂತಾರೆ. ಯುದ್ಧ ನಡೆದರೂ ಯಾರೂ ಮಧ್ಯ ಪ್ರವೇಶಿಸಲ್ಲ ಎಂದರು.
ಇದನ್ನೂ ಓದಿ:- ಸಿಎಂ ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದಿದ್ದ ಆರೋಪಿ ಶವವಾಗಿ ಪತ್ತೆ
ಇನ್ನು ಮುಂದುವರಿದು ಮಾತನಾಡಿದ ಅವರು, ಪ್ರಧಾನಿ ಮೋದಿ ಮೊದಲು ಸೈನ್ಯಕ್ಕೆ ಫ್ರೀ ಹ್ಯಾಂಡ್ ಅಂದರು. ಈಗ ಕದನ ವಿರಾಮ ಘೋಷಿಸಿದ್ದಾರೆ. ಇದಕ್ಕೆ ಕಾರಣ ಏನು ಎಂದು ಪ್ರಶ್ನೆ ಮಾಡಿದರು.
ಪ್ರಧಾನಿ ಮೋದಿ ಸರ್ವಪಕ್ಷ ಸಭೆ ಕರೆಯದೇ ಸರ್ವಾಧಿಕಾರಿಯಂತೆ ವರ್ತನೆ ಮಾಡುತ್ತಿದ್ದಾರೆ. ಕದನ ವಿರಾಮ ಘೋಷಣೆ ಬಳಿಕ ಜನರ ಅಭಿಪ್ರಾಯ ಕೇಳಬೇಕು ಎಂದು ಹೇಳಿದರು





