ಚಿತ್ರದುರ್ಗ: ಸುಡುಗಾಡಿಗೆ ಹೋಗಿ ತೆಂಗಿನಕಾಯಿ ಒಡೆದರೂ ಜಿಎಸ್‌ಟಿ ಅನ್ವಯಿಸುತ್ತದೆ ಎಂದು ಕಾರ್ಮಿಕ ಇಲಾಖೆ ಸಚಿವ ಸಂತೋಷ್ ಲಾಡ್ ಕಿಡಿಕಾರಿದ್ದಾರೆ.
ಈ ಕುರಿತು ಚಿತ್ರದುರ್ಗದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಗ್ರಾಹಕರು ಸಣ್ಣ ವ್ಯಾಪಾರ ವಹಿವಾಟಿಗೆ ಬಳಸಿದ ಗೂಗಲ್ ಪೇ ಹಾಗೂ ಫೋನ್ ಪೇ ಆಧರಿಸಿ ಜಿಎಸ್‌ಟಿ ಕಟ್ಟುವಂತಿರುವ ನಿಯಮದ ಬಗ್ಗೆ ಕಿಡಿಕಾರಿದರು.
ಈಗ ಹಾಲು, ಮೊಸರು, ಅರಿಶಿಣ ಸೇರಿದಂತೆ ಎಲ್ಲದರ ಮೇಲೂ ಜಿಎಸ್‌ಟಿ ಇದೆ. ಶೇಕಡಾ.60% ನಿಂದ 70% ಜನರು ಜಿಎಸ್‌ಟಿ ಭರಿಸಬೇಕಾಗಿದೆ. ಈ ಜಿಎಸ್‌ಟಿಯಿಂದ ದೇಶದಲ್ಲಿ ಸಾಹುಕಾರರಿಗೆ ಅನುಕೂಲವಾಗಿದೆ ಎಂದು ವಾಗ್ದಾಳಿ ನಡೆಸಿದರು.





