ರಾಜ್ಯ

ಸುಡುಗಾಡಿಗೆ ಹೋಗಿ ತೆಂಗಿನಕಾಯಿ ಒಡೆದರೂ ಜಿಎಸ್‌ಟಿ ಅನ್ವಯಿಸುತ್ತೆ: ಸಚಿವ ಸಂತೋಷ್‌ ಲಾಡ್‌ ಆಕ್ರೋಶ

ಚಿತ್ರದುರ್ಗ: ಸುಡುಗಾಡಿಗೆ ಹೋಗಿ ತೆಂಗಿನಕಾಯಿ ಒಡೆದರೂ ಜಿಎಸ್‌ಟಿ ಅನ್ವಯಿಸುತ್ತದೆ ಎಂದು ಕಾರ್ಮಿಕ ಇಲಾಖೆ ಸಚಿವ ಸಂತೋಷ್‌ ಲಾಡ್‌ ಕಿಡಿಕಾರಿದ್ದಾರೆ.

ಈ ಕುರಿತು ಚಿತ್ರದುರ್ಗದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಗ್ರಾಹಕರು ಸಣ್ಣ ವ್ಯಾಪಾರ ವಹಿವಾಟಿಗೆ ಬಳಸಿದ ಗೂಗಲ್‌ ಪೇ ಹಾಗೂ ಫೋನ್‌ ಪೇ ಆಧರಿಸಿ ಜಿಎಸ್‌ಟಿ ಕಟ್ಟುವಂತಿರುವ ನಿಯಮದ ಬಗ್ಗೆ ಕಿಡಿಕಾರಿದರು.

ಈಗ ಹಾಲು, ಮೊಸರು, ಅರಿಶಿಣ ಸೇರಿದಂತೆ ಎಲ್ಲದರ ಮೇಲೂ ಜಿಎಸ್‌ಟಿ ಇದೆ. ಶೇಕಡಾ.60% ನಿಂದ 70% ಜನರು ಜಿಎಸ್‌ಟಿ ಭರಿಸಬೇಕಾಗಿದೆ. ಈ ಜಿಎಸ್‌ಟಿಯಿಂದ ದೇಶದಲ್ಲಿ ಸಾಹುಕಾರರಿಗೆ ಅನುಕೂಲವಾಗಿದೆ ಎಂದು ವಾಗ್ದಾಳಿ ನಡೆಸಿದರು.

ಆಂದೋಲನ ಡೆಸ್ಕ್

Recent Posts

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ: ಉಪಚುನಾವಣೆ: ಗಂಭೀರವಾಗಿ ಪರಿಗಣಿಸಿರುವ ಬಿಜೆಪಿ ವರಿಷ್ಠರು

ಪಕ್ಷದ ಗೆಲುವಿಗೆ ಶ್ರಮಿಸಲು ರಾಜ್ಯದ ನಾಯಕರಿಗೆ ಹೈಕಮಾಂಡ್ ಸೂಚನೆ ಕಳೆದ ವಾರ ಬಿಜೆಪಿ ಪಾಳೆಯದಲ್ಲಿ ಹರಿದಾಡಿದ ಒಂದು ಸುದ್ದಿ ಕುತೂಹಲಕ್ಕೆ ಕಾರಣವಾಯಿತು.…

40 mins ago

‘ವಿದ್ಯಾರ್ಥಿ ಸ್ನೇಹಿ ಸಾರಿಗೆʼ

ಮಕ್ಕಳ ಸುರಕ್ಷತೆ ಮತ್ತು ಶಾಲಾ ಪ್ರಯಾಣ ಸುಗಮಗೊಳಿಸುವ ಉದ್ದೇಶ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಶಿಫಾರಸು ೧೨…

44 mins ago

ಫುಟ್‌ಪಾತ್ ಏರಿದ ವಾಹನಗಳು; ಜನರಿಗೆ ಗೋಳು

ಪ್ರಶಾಂತ್ ಎಸ್. ಮೈಸೂರು: ವಾಹನಗಳು ರಸ್ತೆಯಲ್ಲಿ ಸಂಚರಿಸಿದರೆ, ಪಾದಚಾರಿಗಳು ಫುಟ್‌ಪಾತ್‌ನಲ್ಲಿ ಓಡಾಡ ಬೇಕು ಎನ್ನುವುದು ಸಾಮಾನ್ಯ ಸಂಗತಿ. ಆದರೆ, ಕುವೆಂಪುನಗರದ…

51 mins ago

ಶತಕದ ಗಡಿ ದಾಟಿದ ಬನ್ನಂಗಾಡಿ ಶಾಲೆ

ಎಸ್.ನಾಗಸುಂದರ್ ಪಾಂಡವಪುರ ಪಾಂಡವಪುರ: ದಾನಿಗಳ ನೆರವು, ಸ್ಥಳೀಯರ ಸಹಕಾರದಿಂದ ಆರಂಭಗೊಂಡ ಶಾಲೆಯು ನೂರು ವರ್ಷಗಳ ಗಡಿ ದಾಟಿ ಹೆಜ್ಜೆ ಮುಂದಿರಿಸಿದೆ.…

59 mins ago

ಕಾಡಿನಲ್ಲಿ ಶರಣ್ಯಳನ್ನು ಹುಡುಕಿದ್ದು ಯಾರು?

ಅಬ್ದುಲ್ ರಶೀದ್ ಕೊಡಗಿನ ಪರಿಶಿಷ್ಟ ಅಡಿಯ ಜನಾಂಗದ ಕೂಲಿ ಕಾರ್ಮಿಕ ಯುವಕರಾದ ಸುಬ್ರಮಣಿ, ರಾಜು, ಅಯ್ಯಪ್ಪ, ಮಣಿಕಂಠ, ಮಣಿ ಸಾಹಸಗಾಥೆ…

1 hour ago