ನವದೆಹಲಿ: ಸಿಎಂ ಸಿದ್ದರಾಮಯ್ಯ ಅವರು ಸೋಮವಾರ ಸದನದಲ್ಲಿ ಆರ್‌ಎಸ್‌ಎಸ್ ಬಗ್ಗೆ ವ್ಯಂಗ್ಯ ಮಾಡಿದ್ದಕ್ಕೆ ಸಂಸದ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ.
ನವದೆಹಲಿಯಲ್ಲಿ ಇಂದು(ಮಾರ್ಚ್.18) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಮಾಜಿ ಪ್ರಧಾನಿ ಮತ್ತು ಕಾಂಗ್ರೆಸ್ ನಾಯಕಿ ಇಂದಿರಾ ಗಾಂಧಿ ಅವರೇ ಆರ್‌ಎಸ್‌ಎಸ್ ಅವರನ್ನು ಹೊಗಳಿದ್ದಾರೆ. ಅಲ್ಲದೇ ಆರ್‌ಎಸ್‌ಎಸ್ ಬಗ್ಗೆ ಇಡೀ ನಾಡಿಗೆ ಗೊತ್ತು. ನಿಜ ಹೇಳಬೇಕೆಂದರೆ ಸಿಎಂ ಸಿದ್ದರಾಮಯ್ಯ ಅವರು ಮೂಲತಃ ಕಾಂಗ್ರೆಸ್‌ನವರೇ ಅಲ್ಲ. ಅಲ್ಲದೇ ಸಿದ್ದರಾಮಯ್ಯ ಅವರು ಕಾಂಗ್ರೆಸ್ ವಿರೋಧಿ ಬಣದಲ್ಲಿದ್ದವರು, ಈಗ ಅವರೇ ಕಾಂಗ್ರೆಸ್ ಪಕ್ಷನ್ನು ಆರ್‌ಎಸ್‌ಎಸ್ ವಿರುದ್ಧ ಹೇಳಿಕೆಗಳನ್ನು ನೀಡುತ್ತಿದ್ದಾರೆ.
ರಾಜ್ಯ ಸರ್ಕಾರದಿಂದ ಹಿಂದುಳಿದ ವರ್ಗಕ್ಕೆ ಮೋಸ
ಇದೇ ಸಂದರ್ಭದಲ್ಲಿ ಕಾಂಗ್ರೆಸ್ ಸರ್ಕಾರ ವತಿಯಿಂದ ಮುಸಲ್ಮಾನರಿಗೆ ಗುತ್ತಿಗೆಯಲ್ಲಿ ಶೇ.4% ಮೀಸಲಾತಿ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಈ ರಾಜ್ಯ ಸರ್ಕಾರದಿಂದ ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮೋಸವಾಗುತ್ತಿದೆ. ಅಲ್ಪ ಸಂಖ್ಯಾತರ ಗುತ್ತಿಗೆ ಮೀಸಲಾತಿ 2ಎ ಪಟ್ಟಿಯಲ್ಲಿದೆ. ಹಾಗಾಗಿ ಮುಂಬರುವ ಚುನಾವಣೆಗಾಗಿ ಕಾಂಗ್ರೆಸ್ ಸರ್ಕಾರದವರು ಮತ ಬ್ಯಾಂಕ್ ಗಟ್ಟಿ ಮಾಡಿಕೊಳ್ಳಲು ಈ ತೀರ್ಮಾನ ಕೈಗೊಂಡಿದ್ದಾರೆ ಟೀಕಿಸಿದರು.
ಏನೇ ಆಗಲಿ ರಾಜ್ಯ ಸರ್ಕಾರದ ಈ ತೀರ್ಮಾನದಿಂದ ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷ ಬೆಲೆ ತೆರೆ ಬೇಕಾಗುತ್ತದೆ. ಇನ್ನು ಸರ್ಕಾರದ ಈ ನಡೆ ಕರ್ನಾಟಕದಲ್ಲಿ ಕಾನೂನು ಬಾಹಿರವಾಗಿದೆ. ಧರ್ಮದ ಆಧಾರದ ಮೇಲೆ ಮೀಸಲಾತಿ ನೀಡಿ ಸಮಾಜವನ್ನು ಹದಗೆಡಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.





