Mysore
19
clear sky

Social Media

ಬುಧವಾರ, 14 ಜನವರಿ 2026
Light
Dark

ಸಿಎಂ ಸಿದ್ದರಾಮಯ್ಯ ರಾಜಕೀಯದಲ್ಲಿದ್ದರೆ ಮುಂದಿನ ಚುನಾವಣೆ ಗೆಲ್ಲಬಹುದು: ಸತೀಶ್‌ ಜಾರಕಿಹೊಳಿ

ಬೆಳಗಾವಿ: ಸಿಎಂ ಸಿದ್ದರಾಮಯ್ಯ ರಾಜಕೀಯದಲ್ಲಿದ್ದರೆ ಮಾತ್ರ ಮುಂದಿನ ಚುನಾವಣೆ ಗೆಲ್ಲಬಹುದು ಎಂದು ಸಚಿವ ಸತೀಶ್‌ ಜಾರಕಿಹೊಳಿ ತಿಳಿಸಿದ್ದಾರೆ.

ಬೆಳಗಾವಿಯಲ್ಲಿ ಇಂದು(ಫೆಬ್ರವರಿ.15) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್‌ ಗೆಲ್ಲಬೇಕು ಅಂದರೆ ಸಿಎಂ ಸಿದ್ದರಾಮಯ್ಯ ಇನ್ನೊಂದು ಅವಧಿಗೆ ರಾಜಕೀಯದಲ್ಲಿ ಇರಬೇಕು. ಸಿದ್ದರಾಮಯ್ಯ ಅವರು ನಿವೃತ್ತಿ ಆದರೂ ಪಕ್ಷದ ಪರ ಕೆಲಸ ಮಾಡಬೇಕು. ಅಧಿಕಾರದ ಸ್ಥಾನದಲ್ಲಿ ಅವರು ಇಲ್ಲವಾದರೂ ಪಕ್ಷದಲ್ಲಿ ಇರಬೇಕು ಎಂದರು.

ಕಾಂಗ್ರೆಸ್‌ ಪಕ್ಷದಲ್ಲಿ ಹೊಸ ನಾಯಕತ್ವ ತಯಾರಾಗುವವರೆಗೂ ಸಿಎಂ ಸಿದ್ದರಾಮಯ್ಯ ಅವರು ರಾಜಕೀಯದಲ್ಲಿರಬೇಕು. ಮುಂದಿನ ಚುನಾವಣೆ ಗೆಲ್ಲಬೇಕು ಎಂದರೆ ಅವರು ರಾಜಕೀಯದಲ್ಲಿದ್ದರೆ ಮಾತ್ರ ಸಾಧ್ಯವಾಗುತ್ತದೆ ಎಂದು ಹೇಳಿದರು.

Tags:
error: Content is protected !!