ರಾಜ್ಯ

ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ನಾನು ಆಕಾಂಕ್ಷಿ ಅಲ್ಲ: ಸತೀಶ್‌ ಜಾರಕಿಹೊಳಿ

ಹುಬ್ಬಳ್ಳಿ: ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ನಾನು ಆಕಾಂಕ್ಷಿ ಅಲ್ಲ, ಆದರೆ ಸಮಯ ಬಂದಾಗ ನೋಡೋಣ ಎಂದು ಸಚಿವ ಸತೀ ಜಾರಕಿಹೊಳಿ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಇಂದು(ಫೆಬ್ರವರಿ.22) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ‌ನಮ್ಮ ಪಕ್ಷದ ಹೈಕಮಾಂಡ್‌ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಯ ಬಗ್ಗೆ ಸಮಯ ಬಂದಾಗ ನಿರ್ಧಾರ ಮಾಡುತ್ತದೆ. ಆದರೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಹೇಳಿದ ಮೇಲೆ ಸಮಯ ತೆಗೆದುಕೊಳ್ಳಬಹುದು. ಕೂಡಲೇ ಬದಲಾಗುವುದಿಲ್ಲ, ಸಮಯ ತೆಗೆದುಕೊಳ್ಳಬಹುದು ಎಂದು ಹೇಳಿದರು.

ಸ್ವಾಭಾವಿಕವಾಗಿ ಅಭಿಮಾನಿಗಳು ನಾನು ಸಿಎಂ ಮತ್ತು ಕೆಪಿಸಿಸಿ ಅಧ್ಯಕ್ಷರಾಗಬೇಕೆಂದು ಆಸೆ ಪಡುತ್ತಾರೆ. ಆದಎ ನಾನು ಆಕಾಂಕ್ಷಿ ಅಲ್ಲ, ಒಂದು ವೇಳೆ ಸಮಯ ಕೂಡಿ ಬಂದಾಗ ನೋಡೋಣ. ಅಲ್ಲದೇ ಈ ವಿಚಾರಗಳು ನಮ್ಮ ವ್ಯಾಪ್ತಿಗೆ ಬರಲ್ಲ ನಾವು ಕೇವಲ ಮಂತ್ರಿ ಅಷ್ಟೆ ಏನಿದ್ರೂ ಹೈಕಮಾಂಡ್ ತೀರ್ಮಾನಿಸುತ್ತದೆ ಎಂದರು.

ಇದೇ ಸಂದರ್ಭದಲ್ಲಿ ಸಿಎಂ ಸ್ಥಾನಕೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ರೇಸ್‌ನಲ್ಲಿರುವ ಬಗ್ಗೆ ಮಾತನಾಡಿದ ಅವರು, ಡಿ.ಕೆ.ಶಿವಕುಮಾರ್‌ ಅವರು ಈಗಿನಿಂದಲ್ಲ ಅವರು ಮೊದಲಿನಿಂದಲೂ ರೇಸ್‌ನಲ್ಲಿದ್ದಾರೆ. ಆದರೆ ನಾವೆಲ್ಲಾ ಸಮಯಕ್ಕಾಗಿ ಕಾಯಬೇಕು. ಕಾದು ನೋಡೋಣ ಎಂದು ತಿಳಿಸಿದರು.

ಅರ್ಚನ ಎಸ್‌ ಎಸ್

Recent Posts

ಅನಿಲ ಬಿಕ್ಕಟ್ಟು: ಕೃಷಿ, ಪ್ರವಾಸೋದ್ಯಮಕ್ಕೆ ಇಕ್ಕಟ್ಟು

ಕೆ.ಬಿ.ರಮೇಶನಾಯಕ ಮೈಸೂರು: ಮಧ್ಯಪ್ರಾಚ್ಯ ದೇಶಗಳಲ್ಲಿ ನಡೆಯುತ್ತಿರುವ ಯುದ್ಧದಿಂದಾಗಿ ಭಾರತದ ಮೇಲೆ ದಿನದಿಂದ ದಿನಕ್ಕೆ ಅನಿಲ ಬಿಕ್ಕಟ್ಟು ಬಿಗಡಾಯಿಸುತ್ತಿದ್ದು, ವಾಣಿಜ್ಯ ಬಳಕೆಯ…

13 mins ago

ಕಾವೇರಿ ನದಿ ದಂಡೆಯಲ್ಲಿ ಹೆಚ್ಚುತ್ತಿರುವ ವಾಮಾಚಾರ

ಭೇರ್ಯ ಮಹೇಶ್ ಮಡಕೆ, ಕುಡಿಕೆ, ನಿಂಬೆಹಣ್ಣು, ಕುಂಕುಮ, ರಾಶಿ ಹೂಗಳನ್ನು ಬಿಸಾಡುತ್ತಿರುವುದರಿಂದ ನದಿ ಕಲುಷಿತ ಆರೋಪ  ಕೆ.ಆರ್.ನಗರ: ನದಿಗಳ ಸಂರಕ್ಷಣೆಗಾಗಿ…

20 mins ago

ಕೊಡಗು ; ವ್ಯಕ್ತಿ ಬಲಿ ಪಡೆದಿದ್ದ ರೌಡಿ ಆನೆ ಕೊನೆಗೂ ಸೆರೆ

ಕೊಡಗು : ಕಳೆದ ಕೆಲ ದಿನಗಳಿಂದ ಉಪಟಳ ನೀಡುವ ಜತೆಗೆ ವ್ಯಕ್ತಿಯ ಮೇಲೆ ದಾಳಿ ಮಾಡಿ ಬಲಿ ಪಡೆದಿದ್ದ ಕಾಡಾನೆಯನ್ನು…

8 hours ago

ಸೋಮವಾರದಿಂದಲೇ ತಂಬಾಕು ಖರೀದಿ : ಗೋಯಲ್‌ ಭರವಸೆ

ಬೆಂಗಳೂರು : ಕರ್ನಾಟಕವೂ ಸೇರಿದಂತೆ ದೇಶಾದ್ಯಂತ ತಂಬಾಕು ಬೆಳೆಗಾರರ ಸಮಸ್ಯೆಗಳ ಬಗ್ಗೆ ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ…

9 hours ago

ಸೃಜನಶೀಲತೆಗೆ  ʻಎಐʼ ಕುತ್ತು : ಲೇಖಕ ನಾಗಭೂಷಣ ಸ್ವಾಮಿ

ಬೆಂಗಳೂರು : ಸಾಹಿತ್ಯದಲ್ಲಿ ಕೃತಕ ಬುದ್ಧಿಮತ್ತೆಯ ಬಳಕೆಯಿಂದ ಸಾಕಷ್ಟು ಅಪಾಯಗಳು ಎದುರಾಗುತ್ತವೆ, ಮನುಷ್ಯನ ಸೃಜನಶೀಲ ಚಿಂತನೆಗೆ ಎಐ ತಂತ್ರಜ್ಞಾನ ಮಾರಕವಾಗಲಿದೆ…

9 hours ago

ಊಹಾ ಪತ್ರಿಕೋದ್ಯಮ ಬಿಟ್ಟು, ಸತ್ಯವನ್ನೇ ಬರೆಯಿರಿ : ಪತ್ರಕರ್ತರಿಗೆ ಮುಖ್ಯಮಂತ್ರಿ ಸಲಹೆ

ಬೆಂಗಳೂರು : ನಾವು ಯಾರ ಪರವಾಗಿ ಇದ್ದೇವೆ ಎನ್ನುವ ಸ್ಪಷ್ಟ ಅರಿವು ಮಾಧ್ಯಮದವರಿಗೆ ಇರಬೇಕು. ಸರ್ಕಾರ ಕಟ್ಟ ಕಡೆಯ ಮನುಷ್ಯರ…

9 hours ago