Mysore
22
scattered clouds

Social Media

ಶುಕ್ರವಾರ, 14 ಮಾರ್ಚ್ 2025
Light
Dark

ರಾಜ್ಯ ಸರ್ಕಾರದಿಂದ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಲ್ಲ: ಸತೀಶ್‌ ಜಾರಕಿಹೊಳಿ

ಹುಬ್ಬಳ್ಳಿ: ರಾಜ್ಯ ಸರ್ಕಾರ ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ. ಅವುಗಳು ನಿರಂತರವಾಗಿ ಕಾರ್ಯ ನಿರ್ವಹಿಸುತ್ತವೆ ಎಂದು ಸಚಿವ ಸತೀಶ್‌ ಜಾರಕಿಹೊಳಿ ತಿಳಿಸಿದ್ದಾರೆ.

ನಗರದಲ್ಲಿ ಇಂದು(ಫೆಬ್ರವರಿ.22) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳಿಗೆ ಹಣ ನೀಡುವುದು ಒಂದೆಡು ತಿಂಗಳು ವಿಳಂಬವಾಗಿರಬಹುದು ಅಷ್ಟೇ. ಆ ಹಣವನ್ನು ಮುಂದಿನ ದಿನಗಳಲ್ಲಿ ಸೇರಿಸಿ ಒಟ್ಟಿಗೆಯೇ ಗೃಹಲಕ್ಷ್ಮೀಯರ ಖಾತೆಗೆ ಹಣವನು ಜಮಾ ಮಾಡಲಾಗುತ್ತದೆ. ಸರ್ಕಾರದ ಮಟ್ಟದಲ್ಲಿ ಹಣ ನೀಡುವುದು ವಿಳಂಬವಾಗುವುದು ಸಹಜ. ವಿಳಂಬವಾದರೂ ಹಣ ನೀಡುವುದನ್ನು ನಿಲ್ಲಿಸುವುದಿಲ್ಲ ಎಂದು ಹೇಳಿದರು.

ಇದೇ ವೇಳೆ ಮುಡಾ ಪ್ರಕರಣದಲ್ಲಿ ಇ.ಡಿ.ತನಿಖೆಯ ಬಗ್ಗೆ ಮಾತನಾಡಿದ ಅವರು, ಮುಡಾ ಪ್ರಕರಣದಲ್ಲಿ ಕೇಂದ್ರ ಬಿಜೆಪಿ ಸರ್ಕಾರ ಇ.ಡಿ.ಸಂಸ್ಥೆಯನ್ನು ದುರುಪಯೋಗ ಮಾಡಿಕೊಳ್ಳುತ್ತಿದೆ ಎಂದು ಹೇಳಲು ಸಾಧ್ಯವಿಲ್ಲ. ಆದರೆ ಅದನ್ನು ಸಾಬೀತು ಪಡಿಸಲು ಸಾಕ್ಷ್ಯಾಧಾರಗಳು ಇಲ್ಲ. ಇನ್ನು ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ 14 ನಿವೇಶನಗಳ ಬಗ್ಗೆ ಅಧಿಕ ವಿಚಾರವನ್ನು ಪ್ರಸ್ತಾಪ ಮಾಡುತ್ತಿರುವುದೇ ರಾಜಕೀಯವಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

Tags: