ಹುಬ್ಬಳ್ಳಿ: ರಾಜ್ಯ ಸರ್ಕಾರ ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ. ಅವುಗಳು ನಿರಂತರವಾಗಿ ಕಾರ್ಯ ನಿರ್ವಹಿಸುತ್ತವೆ ಎಂದು ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.
ನಗರದಲ್ಲಿ ಇಂದು(ಫೆಬ್ರವರಿ.22) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳಿಗೆ ಹಣ ನೀಡುವುದು ಒಂದೆಡು ತಿಂಗಳು ವಿಳಂಬವಾಗಿರಬಹುದು ಅಷ್ಟೇ. ಆ ಹಣವನ್ನು ಮುಂದಿನ ದಿನಗಳಲ್ಲಿ ಸೇರಿಸಿ ಒಟ್ಟಿಗೆಯೇ ಗೃಹಲಕ್ಷ್ಮೀಯರ ಖಾತೆಗೆ ಹಣವನು ಜಮಾ ಮಾಡಲಾಗುತ್ತದೆ. ಸರ್ಕಾರದ ಮಟ್ಟದಲ್ಲಿ ಹಣ ನೀಡುವುದು ವಿಳಂಬವಾಗುವುದು ಸಹಜ. ವಿಳಂಬವಾದರೂ ಹಣ ನೀಡುವುದನ್ನು ನಿಲ್ಲಿಸುವುದಿಲ್ಲ ಎಂದು ಹೇಳಿದರು.
ಇದೇ ವೇಳೆ ಮುಡಾ ಪ್ರಕರಣದಲ್ಲಿ ಇ.ಡಿ.ತನಿಖೆಯ ಬಗ್ಗೆ ಮಾತನಾಡಿದ ಅವರು, ಮುಡಾ ಪ್ರಕರಣದಲ್ಲಿ ಕೇಂದ್ರ ಬಿಜೆಪಿ ಸರ್ಕಾರ ಇ.ಡಿ.ಸಂಸ್ಥೆಯನ್ನು ದುರುಪಯೋಗ ಮಾಡಿಕೊಳ್ಳುತ್ತಿದೆ ಎಂದು ಹೇಳಲು ಸಾಧ್ಯವಿಲ್ಲ. ಆದರೆ ಅದನ್ನು ಸಾಬೀತು ಪಡಿಸಲು ಸಾಕ್ಷ್ಯಾಧಾರಗಳು ಇಲ್ಲ. ಇನ್ನು ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ 14 ನಿವೇಶನಗಳ ಬಗ್ಗೆ ಅಧಿಕ ವಿಚಾರವನ್ನು ಪ್ರಸ್ತಾಪ ಮಾಡುತ್ತಿರುವುದೇ ರಾಜಕೀಯವಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಮೈಸೂರು : ‘ಹಳೆಯ ಮೈಸೂರು ರಕ್ಷಣೆಯ ನಿಟ್ಟಿನಲ್ಲಿ ಕಾಲಕಾಲಕ್ಕೆ ಸೂಕ್ತ ಕ್ರಮ ವಹಿಸಬೇಕು. ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗೂ ಆದ್ಯತೆ ನೀಡಬೇಕು.…
ಬೆಳಗಾವಿ : ಕರ್ನಾಟಕ ಬಾಲವಿಕಾಸ ಅಕಾಡೆಮಿಯಿಂದ ಇದೇ ಪ್ರಥಮಬಾರಿಗೆ ಬೆಳಗಾವಿ ಸುವರ್ಣ ವಿಧಾನಸೌಧದ ಉತ್ತರ ಪ್ರವೇಶ ದ್ವಾರದ ಬಳಿ ಇರುವ…
ಹನೂರು : ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ಮಹಿಳೆಯೋರ್ವಳನ್ನು ಮಲೆ ಮಹದೇಶ್ವರ ಬೆಟ್ಟ ಪೊಲೀಸರು ಬಂಧಿಸಿರುವ ಘಟನೆ ಜರುಗಿದೆ. ಹನೂರು…
ಹೊಸದಿಲ್ಲಿ : ದೇಶದ 140 ಕೋಟಿ ಜನರ ಮತದಾನದ ಹಕ್ಕು ಉಳಿಸಲು ನಾವು ಮತಕಳ್ಳತನದ ವಿರುದ್ಧ ಹೋರಾಟ ಮಾಡುತ್ತಿದ್ದೇವೆ. ಇದರಲ್ಲಿ…
ಚಿಕ್ಕಮಗಳೂರು : ಅದೊಂದು ಬಹುಕಾಲದ ಪ್ರೀತಿ, ಪ್ರೀತಿ ಮಾಡಿ, ಪ್ರೇಯಸಿಯಿಂದ ಹಣ ಪಡೆದು, ಇದೀಗ ಬೇರೊಂದು ಮದುವೆಗೆ ಸಿದ್ಧವಾಗಿದ್ದ ಹುಡಗ…
ಬಂಡೀಪುರ, ನಾಗರಹೊಳೆಯಲ್ಲಿ ಹೊಸ ವರ್ಷ ಆಚರಿಸಲು ಬಯಸಿದವರಿಗೆ ನಿರಾಸೆ ರೆಸಾರ್ಟ್, ಹೋಟೆಲ್ ಮಾಲೀಕರಿಂದ ಸಫಾರಿ ಪುನಾರಂಭಕ್ಕೆ ಒತ್ತಡ? ಮೈಸೂರು :…