ರಾಜ್ಯ

ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರೊಂದಿಗೆ ಯಾವುದೇ ಮುನಿಸಿಲ್ಲ: ಸತೀಶ್‌ ಜಾರಕಿಹೊಳಿ

ಬೆಳಗಾವಿ: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರೊಂದಿಗೆ ಯಾವುದೇ ಮುನಿಸಿಲ್ಲ. ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರವನ್ನು ಅಧಿಕಾರಕ್ಕೆ ತರಲು ಎಲ್ಲರ ಪಾತ್ರ ಇದೆ ಎಂದು ಸಚಿವ ಸತೀಶ್‌ ಜಾರಕಿಹೊಳಿ ಸ್ಪಷ್ಟನೆ ನೀಡಿದ್ದಾರೆ.

ಜಿಲ್ಲೆಯ ಹುಕ್ಕೇರಿ ಪಟ್ಟಣದಲ್ಲಿ ಇಂದು(ಜನವರಿ.25) ಅಂಬೇಡ್ಕರ್‌ ಪ್ರತಿಮೆ ಅನಾವರಣಗೊಳಿಸಿ ಮಾತನಾಡಿದ ಅವರು, ನಾನು ಸಿಎಂ ಆಗುತ್ತೇನೆಂದು ಎಲ್ಲಿಯೂ ಹೇಳಿಲ್ಲ. ಆದರೆ ನಾನು ಸಿಎಂ ಅಭ್ಯರ್ಥಿ ಎಂದು ಹೇಳಿದ್ದೇನೆ ಅಷ್ಟೇ. ರಾಜ್ಯದಲ್ಲಿ ಸಿಎಂ ಅವರನ್ನು ನೇಮಕ ಮಾಡುವುದು, ಬಿಡುವುದು ಹೈಕಮಾಂಡ್‌ ಜವಾಬ್ದಾರಿಯಾಗಿದೆ. ಅಲ್ಲದೇ ಈ ರಾಜ್ಯದಲ್ಲಿ ನಮ್ಮ ಸರ್ಕಾರವನ್ನು ಅಧಿಕಾರಕ್ಕೆ ತರಲು ಎಲ್ಲಾ ಸಚಿವರು ಮತ್ತು ಶಾಸಕರ ಪಾತ್ರವಿದೆ. ಅದರಲ್ಲಿ ನಾನು ಭಾಗೀದಾರ ಎಂದರು.

ಡಿ.ಕೆ.ಶಿವಕುಮಾರ್‌ ಮತ್ತು ನಾನು ಒಗ್ಗಟ್ಟಾಗಿಯೇ ಇದ್ದೇವೆ, ನಮ್ಮ ನಡುವೆ ಯಾವುದೇ ಮುನಿಸಿಲ್ಲ. ನಮ್ಮ ಪಕ್ಷದಿಂದ ಎಲ್ಲರೂ ಸೇರಿಯೇ ಬೆಳಗಾವಿ ಸಮಾವೇಶವನ್ನು ಯಶಸ್ವಿ ಮಾಡಿದ್ದೇವೆ. ಇನ್ನೂ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರವನ್ನು ದೆಹಲಿಯಲ್ಲಿ ಕೇಳಬೇಕು. ನನಗೆ ರಾಜ್ಯಾಧ್ಯಕ್ಷ ಸ್ಥಾನವನ್ನು ಬದಲಾವಣೆ ಮಾಡುವಷ್ಟು ಶಕ್ತಿಯಿಲ್ಲ. ಹೀಗಾಗಿ ಈ ಚರ್ಚೆ ಅನಾವಶ್ಯಕ ಎಂದು ಹೇಳಿದರು.

ಶ್ರೀರಾಮುಲು ನಮ್ಮ ಪಕ್ಷಕ್ಕೆ ಬಂದರೆ ಸ್ವಾಗತ

ಇದೇ ಸಂದರ್ಭದಲ್ಲಿ ಶ್ರೀರಾಮುಲು ಅವರ ಬಗ್ಗೆ ಮಾತನಾಡಿದ ಅವರು, ನಮ್ಮ ಪಕ್ಷದ ಸಿದ್ಧಾಂತವನ್ನು ಶ್ರೀರಾಮುಲು ಅವರು ಒಪ್ಪಿ ಕಾಂಗ್ರೆಸ್‌ಗೆ ಬಂದರೆ ಸ್ವಾಗತಿಸುತ್ತೇನೆ. ಅವರು ನಮ್ಮ ಪಕ್ಷಕ್ಕೆ ಬರುತ್ತಾರೆ ಎಂಬುದು ವದಂತಿ ಅಷ್ಟೇ. ಅವರು ಪಕ್ಷಕ್ಕೆ ಬರುವ ವಿಚಾರವಾಗಿ ನನಗೆ ಯಾವುದೇ ವಿರೋಧವಿಲ್ಲ. ಒಂದು ವೇಳೆ ನಾನು ವಿರೋಧ ವ್ಯಕ್ತಪಡಿಸಿದರೆ, ನನ್ನ ವಿರುದ್ಧ ಹೈಕಮಾಂಡ್‌ ನೋಟಿಸ್‌ ನೀಡುತ್ತದೆ. ಆಗ ನಾನು ಹೈಕಮಾಂಡ್‌ಗೆ ಉತ್ತರ ನೀಡಬೇಕಾಗುತ್ತದೆ ಎಂದು ತಿಳಿಸಿದರು.

ಇನ್ನೂ ಡಿ.ಕೆ.ಶಿವಕುಮಾರ್‌ ಅವರು ಶ್ರೀರಾಮುಲು ಅವರನ್ನು ಸಂಪರ್ಕ ಮಾಡಿರುವುದು ನನಗೆ ತಿಳಿದಿಲ್ಲ. ಹೀಗಾಗಿ ಶ್ರೀರಾಮುಲು ಅವರನ್ನು ಕಾಂಗ್ರೆಸ್‌ಗೆ ಕರೆ ತರುವ ಬಗ್ಗೆ ಯಾವುದೇ ಮಾಹಿತಿ ಇಲ್ಲ ಎಂದು ಹೇಳಿದರು.

ಅರ್ಚನ ಎಸ್‌ ಎಸ್

Recent Posts

ಮದ್ದೂರು ಬಳಿಯ ವಳೆಗೆರೆಹಳ್ಳಿಯಲ್ಲಿ ಮಳೆರಾಯನಿಗಾಗಿ ಪೂಜೆ

ಮದ್ದೂರು: ಹುಯ್ಯೋ ಹುಯ್ಯೋ ಮಳೆರಾಯ ತೆಂಗಿನ ತೋಟಕೆ ನೀರಿಲ್ಲ, ಬಾರೋ ಬಾರೋ ಮಳೆರಾಯ ಬಾಳೆಯ ತೋಟಕೆ ನೀರಿಲ್ಲ, ಬಾರಪ್ಪ ಮಳೆರಾಯ…

2 hours ago

ಸಮರ್ಥವಾಗಿ ಕಾರ್ಯನಿರ್ವಹಿಸದ ಸಚಿವರನ್ನು ಬದಲಾಯಿಸಿ: ಶಾಸಕ ರವಿಕುಮಾರ್‌ ಗಣಿಗ

ಮಂಡ್ಯ: ಹಲವು ಶಾಸಕರು ಸಚಿವರಾಗುವ ಆಸೆ ಹೊಂದಿದ್ದು, ಮೂರು-ನಾಲ್ಕು ಬಾರಿ ಗೆದ್ದಿರುವ ಹಿರಿಯ ಶಾಸಕರು ಸಹ ಮಂತ್ರಿಗಿರಿಗಾಗಿ ದೆಹಲಿಗೆ ತೆರಳುತ್ತಿದ್ದಾರೆ.…

2 hours ago

ಕೊಡಗಿನಲ್ಲಿ ಭೀಕರ ರಸ್ತೆ ಅಪಘಾತ: ಚಿತ್ರನಟ ಹರೀಶ್ ಸ್ಥಳದಲ್ಲೇ ಸಾವು

ಮಡಿಕೇರಿ: ತಡರಾತ್ರಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಚಲನಚಿತ್ರ ಹಾಗೂ ಕಿರುತೆರೆ ಸಹ ಕಲಾವಿದ ಹರೀಶ್‌ ಧಾರುಣವಾಗಿ ಸಾವನ್ನಪ್ಪಿದ್ದಾರೆ. ಜಿಲ್ಲೆಯ…

2 hours ago

ಹಾಸನ: ಮಗಳ ಸಾವಿನಲ್ಲೂ ಸಾರ್ಥಕತೆ ಮೆರೆದ ಪೋಷಕರು

ಹಾಸನ: ಅಪಘಾತದಿಂದ ಮೆದುಳು ನಿಷ್ಕ್ರಿಯವಾಗಿದ್ದ ಮಗಳ ಅಂಗಾಂಗ ದಾನ ಮಾಡಿ ಪೋಷಕರು ಸಾವಿನಲ್ಲೂ ಸಾರ್ಥಕತೆ ಮೆರೆದಿರುವ ಘಟನೆ ಹಾಸನ ಜಿಲ್ಲೆಯಲ್ಲಿ…

2 hours ago

ಶಿವಮೊಗ್ಗ: ಪಶುವೈದ್ಯೆ ಕೊಂದಿದ್ದ ನೀರಾನೆಗೆ ಬಹು ಅಂಗಾಂಗ ವೈಫಲ್ಯ

ಶಿವಮೊಗ್ಗ: ತ್ಯಾವರಕೊಪ್ಪದ ಮೃಗಾಲಯದಲ್ಲಿ ಪಶುವೈದ್ಯೆ ಸಮೀಕ್ಷಾ ಅವರ ಮೇಲೆ ದಾಳಿ ಮಾಡಿ ಕೊಂದಿದ್ದ ನೀರಾನೆ ಹಂಸಿನಿಯ ಮರಿ ಗರ್ಭದಲ್ಲೇ ಸಾವನ್ನಪ್ಪಿದೆ.…

2 hours ago

ಪಾಕ್‌ ಜನತೆಗೆ ಮತ್ತೊಂದು ಶಾಕ್:‌ ವಿದ್ಯುತ್‌ ದರ ದುಪ್ಪಟ್ಟು ಹೆಚ್ಚಳ

ಇಸ್ಲಾಮಾಬಾದ್:‌ ಇಂಧನ ಬೆಲೆ ಏರಿಕೆ ನಂತರ ಪಾಕಿಸ್ತಾನ ಈಗ ವಿದ್ಯುತ್‌ ದರವನ್ನು ದುಪ್ಪಟ್ಟು ಹೆಚ್ಚಿಸಿದೆ. ಮಾಸಿಕ ಇಂಧನ ವೆಚ್ಚ ಹೊಂದಾಣಿಕೆಯ…

2 hours ago