ರಾಜ್ಯ

ಮುಂದಿನ ಚುನಾವಣೆ ಫಲಿತಾಂಶದ ಬಳಿಕ ದಲಿತ ಸಿಎಂ ಚರ್ಚೆ: ಸಚಿವ ಸತೀಶ್‌ ಜಾರಕಿಹೊಳಿ

ಕಲಬುರ್ಗಿ: ಕಳೆದ ಒಂದು ವರ್ಷದಿಂದಲೂ ದಲಿತ ಮುಖ್ಯಮಂತ್ರಿ ಚರ್ಚೆ ಸ್ಥಗಿತಗೊಂಡಿವೆ. ಇನ್ನು ಮುಂದಿನ ಚುನಾವಣೆ ಫಲಿತಾಂಶದ ಬಳಿಕ ಈ ಬಗ್ಗೆ ಗಂಭೀರ ಚರ್ಚೆ ನಡೆಯಲಿದೆ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.

ಈ ಕುರಿತು ಕಲಬುರ್ಗಿಯಲ್ಲಿಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ಸಚಿವ ಸಂಪುಟ ವಿಸ್ತರಣೆ ಅಥವಾ ಪುನರ್ ರಚನೆ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರೇ ಸ್ಪಷ್ಟವಾಗಿ ಹೇಳಿದ್ದಾರೆ. ಅದರ ಬಗ್ಗೆ ಮತ್ತೆ ಮತ್ತೆ ಚರ್ಚೆ ಮಾಡುವ ಅಗತ್ಯವಿಲ್ಲ. ಹೈಕಮಾಂಡ್ ಮತ್ತು ಮುಖ್ಯಮಂತ್ರಿಯವರು ಯಾವುದೇ ನಿರ್ಧಾರ ತೆಗೆದುಕೊಂಡರೂ ಅದಕ್ಕೆ ಎಲ್ಲರೂ ಬದ್ಧರಾಗಿರುತ್ತಾರೆ ಎಂದರು.

ಇನ್ನು ನವೆಂಬರ್ ವೇಳೆಗೆ ಸಿದ್ದರಾಮಯ್ಯನವರು ಬದಲಾವಣೆಯಾಗುತ್ತಾರೆ. ಡಿ.ಕೆ.ಶಿವಕುಮಾರ್ ಅಥವಾ ಮಲ್ಲಿಕಾರ್ಜುನ ಖರ್ಗೆಯವರು ಮುಖ್ಯಮಂತ್ರಿಯಾಗುತ್ತಾರೆ ಎಂಬ ವಿಧಾನಪರಿಷತ್ ಸದಸ್ಯ ಎಚ್.ವಿಶ್ವನಾಥ್ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ವಿಶ್ವನಾಥ್ ಬೇರೆ ಪಕ್ಷದಲ್ಲಿದ್ದಾರೆ. ಅವರು ಹೇಳುವುದಕ್ಕೆಲ್ಲಾ ನಾವು ಪ್ರತಿಕ್ರಿಯಿಸಲು ಸಾಧ್ಯ ಇಲ್ಲ. ಕಾಂಗ್ರೆಸ್ ಪಕ್ಷದ ಶಾಸಕರು ಈ ರೀತಿ ಮಾತನಾಡಿದರೆ ನಾವು ಪ್ರತಿಕ್ರಿಯಿಸಬಹುದು ಎಂದು ಹೇಳಿದರು.‌

ಆಂದೋಲನ ಡೆಸ್ಕ್

Recent Posts

ಹನೂರು| ಗೋಪಿನಾಥಂ ಸಫಾರಿಯಲ್ಲಿ ಪ್ರವಾಸಿಗರಿಗೆ ದರ್ಶನ ಕೊಟ್ಟ ಹುಲಿರಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹಲವು ದಿನಗಳ ನಂತರ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಗೋಪಿನಾಥಂ ಸಫಾರಿಯಲ್ಲಿ…

1 hour ago

ಇರಾನ್ ಮೇಲೆ ನಿರಂತರವಾಗಿ ದಾಳಿ ಮಾಡುತ್ತಿರುವ ಇಸ್ರೇಲ್

ಟೆಹರಾನ್‌: ಇಸ್ರೇಲ್ ನಡೆಸುತ್ತಿರುವ ಕ್ಷಿಪಣಿ ದಾಳಿಗೆ ಇರಾನ್ ರಾಜಧಾನಿ ಟೆಹ್ರಾನ್ ನಲ್ಲಿ ಛಿದ್ರಗೊಂಡ ಆಕಾಶದೆತ್ತರದ ಕಟ್ಟಡಗಳು..! ಟೆಹರಾನ್‌ನಲ್ಲಿನ ಬೃಹತ್ ಕಟ್ಟಡಗಳು…

2 hours ago

ಅಮೆರಿಕಾದ ತದ್ವಿರುದ್ಧ ನಿಲುವಿಗೆ ಸಿಎಂ ಸಿದ್ದರಾಮಯ್ಯ ಖಂಡನೆ

ಶಿವಮೊಗ್ಗ: ರಾಜ್ಯ ಸರ್ಕಾರ ವಿದೇಶಾಂಗ ಸಚಿವಾಲಯದೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದು, ಅರಬ್ ರಾಷ್ಟ್ರಗಳಲ್ಲಿ ಸಿಲುಕಿರುವ ಕನ್ನಡಿಗರಿಗೆ ತೊಂದರೆಯಾಗದಂತೆ ಕರೆತರಲು ಪ್ರಯತ್ನ ಮಾಡಲಾಗುತ್ತಿದೆ…

3 hours ago

ಖಮೇನಿ ಹತ್ಯೆ ಖಂಡಿಸಿ ಭಾರತದಲ್ಲೂ ಪ್ರತಿಭಟನೆ

ಜಮ್ಮು-ಕಾಶ್ಮೀರ: ಇಸ್ರೇಲ್‌ ಮತ್ತು ಅಮೇರಿಕಾ ಇರಾನ್‌ ಮೇಲೆ ನಡೆಸಿದ ದಾಳಿಯಲ್ಲಿ ರಾಷ್ಟ್ರದ ಪರಮೋಚ್ಛ ನಾಯಕ ಆಯತೊಲ್ಲಾ ಅಲಿ ಖಮೇನಿ ಸಾವನ್ನಪ್ಪಿದ್ದಾರೆ.…

3 hours ago

ಇರಾನ್-ಇಸ್ರೇಲ್-ಅಮೆರಿಕ ಯುದ್ಧ ನಡುವೆಯೇ ಭಾರತದಲ್ಲಿ ಅಚ್ಚರಿ ಬೆಳವಣಿಗೆ: ಏನದು ಗೊತ್ತಾ.?

ನವದೆಹಲಿ: ಇರಾನ್-ಇಸ್ರೇಲ್-ಅಮೆರಿಕ ಯುದ್ಧ ನಡುವೆಯೇ ಭಾರತದಲ್ಲಿ ಅಚ್ಚರಿ ಬೆಳವಣಿಗೆಯಲ್ಲಿ ಗ್ಯಾಸ್ ಸಿಲಿಂಡರ್ ದರ ಇಳಿಕೆ ಕಂಡುಬಂದಿದೆ. ತೈಲ ಕಂಪನಿಗಳು ವಾಣಿಜ್ಯ…

3 hours ago

ಕೆಮಿಕಲ್‌ ಫ್ಯಾಕ್ಟರಿಯಲ್ಲಿ ಸ್ಫೋಟ: ಮಹಿಳೆಯರು ಸೇರಿ 15 ಕಾರ್ಮಿಕರು ದುರ್ಮರಣ

ನಾಗ್ಪುರ: ಕೆಮಿಕಲ್‌ ಫ್ಯಾಕ್ಟರಿಯಲ್ಲಿ ಸಂಭವಿಸಿದ ಭೀಕರ ಸ್ಫೋಟದಿಂದಾಗಿ ಮಹಿಳೆಯರು ಸೇರಿದಂತೆ 15 ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ನಾಗ್ಪರ ಜಿಲ್ಲೆಯಲ್ಲಿ…

3 hours ago