ರಾಜ್ಯ

ಮುಡಾ ಪ್ರಕರಣದ ದಿಕ್ಕು ತಪ್ಪಿಸಲು ರಾಜ್ಯ ಸರ್ಕಾರದಿಂದ ಸಾವರ್ಕರ್‌ ಟಾರ್ಗೆಟ್‌: ಬಿ.ವೈ.ವಿಜಯೇಂದ್ರ

ಬೆಂಗಳೂರು: ಸಾರ್ವಜನಿಕರಿಂದ ಮುಡಾ ಪ್ರಕರಣವನ್ನು ದಿಕ್ಕು ತಪ್ಪಿಸಲು ಹಿಂದುತ್ವವಾದಿ ವಿನಾಯಕ ದಾಮೋದರ್‌ ಸಾವರ್ಕರ್‌ ಅವರನ್ನು ರಾಜ್ಯ ಸರ್ಕಾರ ಗುರಿಯಾಗಿಸಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತೀರುಗೇಟು ನೀಡಿದ್ದಾರೆ.

ಆರೋಗ್ಯ ಸಚಿವ ದಿನೇಶ್‌ ಗುಂಡುರಾವ್‌ ಅವರು ಅಕ್ಟೋಬರ್‌ 2 ರಂದು ವಿನಾಯಕ ದಾಮೋದರ್‌ ಸಾವರ್ಕರ್‌ರವರು ಗೋಹತ್ಯೆಯನ್ನು ವಿರೋಧಿಸಲಿಲ್ಲ. ಬದಲಾಗಿ ಅವರು ಮಾಂಸವನ್ನು ಸೇವಿಸುತ್ತಿದ್ದರು ಎಂದು ಹೇಳಿದ್ದರು.

ಈ ವಿಚಾರವಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಮ್ಮ ಎಕ್ಸ್‌ ಖಾತೆಯಲ್ಲಿ ಟ್ವೀಟ್‌ ಮಾಡಿ, ಇದು ನಮ್ಮ ರಾಷ್ಟ್ರನಾಯಕರಿಗೆ ಮಾಡಿದ ದ್ರೋಹ! ಕೇವಲ ಅಧಿಕಾರದ ದುರಾಸೆಯಿಂದ ಇಂದಿನ ಕಾಂಗ್ರೆಸ್‌ ಸರ್ಕಾರ ಭಾರತದ ಸ್ವಾತಂತ್ರ್ಯಕ್ಕಾಗಿ ತಮ್ಮ ಜೀವನ ಮುಡಿಪಾಗಿಟ್ಟ ದೇಶಭಕ್ತ ವೀರ್‌ ಸಾವರ್ಕರ್‌ ಅವರನ್ನು ಗುರಿಯಾಗಿಸಿರುವುದು ನಾಚಿಕೆಗೇಡಿನ ಸಂಗತಿಯಾಗಿದೆ ಎಂದು ವಾಗ್ದಾಳಿ ಮಾಡಿದ್ದಾರೆ.

ರಾಜ್ಯ ಸರ್ಕಾರ ಕೇವಲ ಮುಡಾ ಪ್ರಕರಣದಿಂದ ಸಾರ್ವಜನಿಕರ ಗಮನವನ್ನು ಬೇರೆಡೆಗೆ ಸೆಳೆಯಲು ಸಾವರ್ಕರ್‌ ಅವರನ್ನು ಟಾರ್ಗೆಟ್‌ ಮಾಡಲಾಗಿದೆ. ಇದೊಂದು ಹೇಳಿಕೆ ಜನರ ದಾರಿ ತಪ್ಪಿಸುವ ತಂತ್ರವಾಗಿದೆ. ಇದನ್ನು ನಾನು ಒಪ್ಪಿಕೊಳ್ಳುವುದಿಲ್ಲ. ಸರ್ಕಾರದ ಭ್ರಷ್ಟಾನಾಯಕರನ್ನು ಹೊಣೆಗಾರರನ್ನಾಗಿ ಮಾಡುವವರೆಗೂ ಬಿಜೆಪಿ ಹೋರಾಟ ಮುಂದುವರೆಸಲಿದೆ ಎಂದು ತಿಳಿಸಿದ್ದಾರೆ.

 

ಆಂದೋಲನ ಡೆಸ್ಕ್

Recent Posts

ಭಾನುವಾರವಾದರೂ ತಪ್ಪಿಸುವಂತಿಲ್ಲ: ನವೆಂಬರ್‌.1ರಂದು ಶಾಲೆಗಳಲ್ಲಿ ರಾಜ್ಯೋತ್ಸವ ಕಡ್ಡಾಯ

ಬೆಂಗಳೂರು: ನವೆಂಬರ್‌ 1ರಂದು ಭಾನುವಾರ ಬಂದರೂ ರಾಜ್ಯದ ಎಲ್ಲಾ ಶಾಲೆಗಳಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಕಡ್ಡಾಯ ಎಂದು ರಾಜ್ಯ ಸರ್ಕಾರ…

9 mins ago

ಗುಂಡ್ಲುಪೇಟೆ: ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ

ಗುಂಡ್ಲುಪೇಟೆ: ತಾಲ್ಲೂಕಿನ ವಡಯ್ಯನಪುರ ಹಾಗೂ ಬೊಮ್ಮಲಾಪುರ ಗ್ರಾಮಗಳಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಕೊನೆಗೂ ಬೋನಿಗೆ ಬಿದ್ದಿದೆ. ಬೊಮ್ಮಲಾಪುರ…

31 mins ago

ದನ ಮೇಯಿಸಲು ಹೋದ ವ್ಯಕ್ತಿ ಮೇಲೆ ಚಿರತೆ ದಾಳಿ

ಹನೂರು: ತಾಲ್ಲೂಕಿನ ಗುಂಡಾಪುರ ಗ್ರಾಮದ ಸಮೀಪದ ಅರಣ್ಯ ಪ್ರದೇಶದಲ್ಲಿ ದನ-ಕುರಿ ಮೇಯಿಸಲು ಹೋಗಿದ್ದ ವ್ಯಕ್ತಿ ಮೇಲೆ ಚಿರತೆ ದಾಳಿ ನಡೆಸಿರುವ…

1 hour ago

ಮೈಸೂರು: ಬಾಲಕಿ ಮೇಲಿನ ಅತ್ಯಾಚಾರ–ಕೊಲೆ ಪ್ರಕರಣ: ಕಾಮುಕನಿಗೆ ಗಲ್ಲು ಶಿಕ್ಷೆ

ಮೈಸೂರು: ಮೈಸೂರಿನಲ್ಲಿ ಕಳೆದ ವರ್ಷದ ದಸರಾ ವೇಳೆ ನಡೆದಿದ್ದ ಬಾಲಕಿ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ನ್ಯಾಯಾಲಯ ತೀರ್ಪು…

2 hours ago

ಸಯ್ಯಾಜಿರಾವ್ ರಸ್ತೆಯಲ್ಲಿ ಕುಸಿದು ಬಿದ್ದ ಬೃಹತ್ ವಿದ್ಯುತ್ ದೀಪಾಲಂಕಾರದ ಕಂಬ ; ಕಾರು, ಆಟೋ ಜಖಂ

ಮೈಸೂರು: ದಸರಾ ದೀಪಾಲಂಕಾರದ ನಡುವೆ ಅವಘಡವೊಂದು ಸಂಭವಿಸಿದೆ. ನಗರದ ಸಯ್ಯಾಜಿರಾವ್ ರಸ್ತೆಯಲ್ಲಿ ಬೃಹತ್ ವಿದ್ಯುತ್ ದೀಪಾಲಂಕಾರದ ಕಂಬ ಕುಸಿದು ಬಿದ್ದಿದ್ದು,…

2 hours ago

ಓದುಗರ ಪತ್ರ: ನಿಷ್ಪಕ್ಷಪಾತ ತನಿಖೆ ನಡೆಯಲಿ

ಇತ್ತೀಚಿನ ದಿನಗಳಲ್ಲಿ ಹೆಚ್ಚು ಸದ್ದುಮಾಡುತ್ತಿರುವ ಸ್ಟ್ರಿಂಗ್ ಆಪರೇಷನ್ ಸುದ್ದಿ, ಅದರ ಸುತ್ತ ನಡೆಯುವ ಆರೋಪ-ಪ್ರತ್ಯಾರೋಪಗಳು ಹಾಗೂ ಸಿಡಿ/ಪೆನ್ ಡ್ರೈವ್‌ಗಳ ವಿಚಾರ…

5 hours ago