SBI manager
ರಾತ್ರೋರಾತ್ರಿ SBI ಮ್ಯಾನೇಜರ್ ವರ್ಗಾವಣೆ
ಬೆಂಗಳೂರು : ಯಾವುದೇ ಕಾರಣಕ್ಕೂ ನಾನು ಕನ್ನಡ ಮಾತನಾಡಲ್ಲ ಎಂದು ಉದ್ದಟತನ ಪ್ರದರ್ಶಿಸಿ ಕನ್ನಡಿಗರ ಆಕ್ರೋಶಕ್ಕೆ ಗುರಿಯಾಗಿದ್ದ ಬೆಂಗಳೂರಿನ ಅನೇಕಲ್ ತಾಲೂಕಿನ ಚಂದಾಪುರದ ಸೂರ್ಯನಗದರಲ್ಲಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕ್ ನ ಮಹಿಳಾ ಮ್ಯಾನೇಜರ್ ( ವ್ಯವಸ್ಥಾಪಕಿ ) ಅವರನ್ನು ರಾತ್ರೋರಾತ್ರಿ ವರ್ಗಾವಣೆ ಮಾಡಲಾಗಿದೆ.
ಕೇಂದ್ರ ಹಣಕಾಸು ಸಚಿವೆ ನಿರ್ಮಾಲ ಸೀತರಾಮನ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರ ಬರೆದು, ಕನ್ನಡ ಭಾಷೆ ಹಾಗೂ ಕನ್ನಡಿಗರ ಬಗ್ಗೆ ಲಘುವಾಗಿ ಮಾತನಾಡಿ ಉದ್ದಟತನ ತೋರಿರುವ ವ್ಯವಸ್ಥಾಪಕಿ ಅವರ ಮೇಲೆ ಶಿಸ್ತು ಕ್ರಮ ತೆಗೆದುಕೊಳ್ಳುವಂತೆ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ ಅವರನ್ನು ಬ್ಯಾಂಕ್ ನಿಂದ ಎತ್ತಂಗಡಿ ಮಾಡಲಾಗಿದೆ. ಬ್ಯಾಂಕ್ ಮ್ಯಾನೇಜರ್ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ಎಚ್ಚೆತ್ತುಕೊಂಡ ಎಸ್‍ಬಿಐ ಮಹಿಳಾ ಮ್ಯಾನೇಜರ್ನನ್ನು ರಾತ್ರೋರಾತ್ರಿ ವರ್ಗಾವಣೆ ಮಾಡಿದೆ. ಮಹಿಳಾ ಮ್ಯಾನೇಜರ್ನನ್ನು ಹೊರ ರಾಜ್ಯಕ್ಕೆ ವರ್ಗಾವಣೆಗೊಳಿಸುವಂತೆ ಆದೇಶ ನೀಡಲಾಗಿದೆ.
ಗ್ರಾಹಕರೊಬ್ಬರು ಕೆಲಸದ ನಿಮಿತ್ತ ಬೆಂಗಳೂರು ಹೊರವಲಯದ ಚಂದಾಪುರ ಎಸ್‍ಬಿಐ ಬ್ಯಾಂಕ್‍ಗೆ ಹೋದಾಗ ಕನ್ನಡ ಮಾತನಾಡುವಂತೆ ಮಹಿಳಾ ಬ್ಯಾಂಕ್ ಮ್ಯಾನೇಜರ್ ಬಳಿ ಕೇಳಿದ್ದರು. ಆದರೆ ಕನ್ನಡ ಮಾತನಾಡಲು ಒಪ್ಪದ ಮಹಿಳಾ ಮ್ಯಾನೇಜರ್ ಗ್ರಾಹಕನಿಗೆ ಹಿಂದಿಯಲ್ಲಿ ಮಾತನಾಡುವಂತೆ ಅವಾಜ್ ಹಾಕಿದ್ದು, ಇದು ಭಾರತ.. ಬರೀ ಕರ್ನಾಟಕ ಮಾತ್ರ ಅಲ್ಲ. ನಾನು ಯಾವತ್ತೂ ಕನ್ನಡವನ್ನೇ ಮಾತಾಡಲ್ಲ. ಏನೇ ಆದರೂ ಅಂತ ಹೇಳುವ ಮೂಲಕ ಕನ್ನಡಿಗರನ್ನು ಕೆರಳಿಸಿದ್ದರು.
ಏನಿದು ಘಟನೆ?
ಹಣ ವರ್ಗಾವಣೆಗಾಗಿ ಮಹೇಶ್ ಎಂಬುವವರು ಬೆಳಗ್ಗೆ 10.27ಕ್ಕೆ ಬ್ಯಾಂಕಿಗೆ ಹೋಗಿದ್ದರು. ಯಾವ ಕೌಂಟರ್‍ಗಳಲ್ಲೂ ಸಿಬ್ಬಂದಿ ಕಾಣಿಸಲಿಲ್ಲ. ಅಲ್ಲಿದ್ದ ಒಬ್ಬರನ್ನು ಪ್ರಶ್ನಿಸಿದಾಗ ನಾವು ಬರುವವರೆಗೆ ಕಾಯಿರಿ ಎಂದರು. ಈ ವರ್ತನೆಯಿಂದ ಬೇಸರವಾಗಿ, ಕೆಲಸದ ಅವಧಿಯಲ್ಲಿ ಸಿಬ್ಬಂದಿ ಏಕೆ ಕೌಂಟರ್‍ನಲ್ಲಿಲ್ಲ? ಇದನ್ನು ವ್ಯವಸ್ಥಾಪಕರ ಬಳಿ ಪ್ರಶ್ನಿಸುತ್ತೇನೆ ಎಂದು ಅವರ ಕೊಠಡಿ ಬಳಿ ಹೋದರು.
ಸಮಯ 10.30 ಆದರೂ, ಸಿಬ್ಬಂದಿ ಇಲ್ಲ’ ಎಂದು ಸೌಮ್ಯವಾಗಿಯೇ ವ್ಯವಸ್ಥಾಪಕರಲ್ಲಿ ಕೇಳಿಕೊಂಡರಂತೆ. ಅದಕ್ಕೆ ಮ್ಯಾನೇಜರ್ ನನಗೆ ಕನ್ನಡ ಗೊತ್ತಿಲ್ಲ. ಹಿಂದಿಯಲ್ಲಿ ಮಾತನಾಡು’ ಎಂದು ಅತ್ಯಂತ ದರ್ಪದಿಂದ ಅವರು ಮಾತನಾಡಿದರಂತೆ. ಈ ನಾಡಿನ ಭಾಷೆ ಕನ್ನಡ, ಕನ್ನಡದಲ್ಲಿ ಸೇವೆ ಒದಗಿಸಬೇಕಾಗಿರುವುದು ಬ್ಯಾಂಕ್ ಕರ್ತವ್ಯ. ಈ ಬಗ್ಗೆ ಆದೇಶ ಮತ್ತು ನಿಯಮವಿದೆ ಎಂದು ಹೇಳಿದೆ. ಆಗ ಮತ್ತಷ್ಟು ಕೆರಳಿದ ಅವರು ದುರ್ವತನೆ ತೋರಲು ಆರಂಭಿಸಿದಾಗ ಫೇಸ್ ಬುಕ್‍ನಲ್ಲಿ ಲೈವ್ ಆರಂಭಿಸಿದ್ದಾಗಿ ಹೇಳಿದರು.
ಗ್ರಾಹಕರೊಬ್ಬರು ಕನ್ನಡದಲ್ಲಿ ಮಾತನಾಡಲು ಕೇಳಿಕೊಂಡಾಗ, ಮ್ಯಾನೇಜರ್ ‘ನನಗೆ ಹಿಂದಿ ಮಾತ್ರ ಗೊತ್ತು, ಕನ್ನಡದಲ್ಲಿ ಮಾತನಾಡುವುದಿಲ್ಲ’ ಎಂದು ದರ್ಪ ತೋರಿಸಿದ ವಿಡಿಯೊ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆದಾಗ ಸಾರ್ವಜನಿಕರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಬ್ಯಾಂಕ್ ಗಳಲ್ಲಿ ಆಯಾ ರಾಜ್ಯಗಳಲ್ಲಿ ಸ್ಥಳೀಯ ಭಾಷೆಯಲ್ಲಿ ಉದ್ಯೋಗಿಗಳು ಸೇವೆ ನೀಡುವುದನ್ನು ಕಡ್ಡಾಯಗೊಳಿಸಬೇಕೆಂಬ ಒತ್ತಾಯ ಕೇಳಿಬಂದಿದೆ.
ಕನ್ನಡ ಮಾತನಾಡಲ್ಲ, ಇದು ಇಂಡಿಯಾ. ನಾನು ಹಿಂದಿಯನ್ನೇ ಮಾತನಾಡುವುದು ಎಂದು ಉಡಾಫೆಯಾಗಿ ಮಾತನಾಡಿರುವ ವಿಡಿಯೋ ವೈರಲ್ ಆಗಿತ್ತು. ಇದಕ್ಕೆ ಕರವೇ ಕೂಡ ಕೆಂಡಾಮಂಡಲವಾಗಿತ್ತು. ಬ್ಯಾಂಕ್ ಸಿಬ್ಬಂದಿ ನಡೆ ವಿರೋಧಿಸಿ ಕರ್ನಾಟಕ ರಕ್ಷಣಾ ವೇದಿಕೆ ಬೃಹತ್ ಪ್ರತಿಭಟನೆ ನಡೆಸಿತ್ತು. ಬೆಂಗಳೂರು ಹೊರವಲಯ ಆನೇಕಲ್ ತಾಲ್ಲೂಕಿನ ಚಂದಾಪುರ ಸೆಂಟ್ ಮಾಕ್ರ್ಸ್ ರಸ್ತೆಯ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಪ್ರಧಾನ ಕಚೇರಿ ಎದುರು ಪ್ರತಿಭಟನೆ ನಡೆಸಿದ್ದರು. ಕನ್ನಡ ಭಾಷೆಗೆ ಬ್ಯಾಂಕ್ ಮ್ಯಾನೇಜರ್ ಅಪಮಾನ ಮಾಡಿದ್ದಕ್ಕೆ ಚಂದಾಪುರ ಬ್ಯಾಂಕ್ ಶಾಖೆ ಮುಂಭಾಗ ಪ್ರತಿಭಟನೆ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದರು.
ಕನ್ನಡಪರ ಹೋರಾಟಗಾರರು ಬ್ಯಾಂಕ್ ದಾಖಲೆ ಪತ್ರಗಳನ್ನು ಹರಿದು ಹಾಕಿ ಆಕ್ರೋಶ ಹೊರಹಾಕಿ, ಕನ್ನಡ ಭಾಷೆಗೆ ಅಪಮಾನ ಮಾಡಿದ ಬ್ಯಾಂಕ್ ಮ್ಯಾನೇಜರ್ ಕೂಡಲೇ ಸ್ಥಳಕ್ಕೆ ಬಂದು ಕ್ಷಮೆಯಾಚಿಸಬೇಕು ಎಂದು ಕರವೇ ಹೋರಾಟಗಾರರು ಪಟ್ಟು ಹಿಡಿದಿದ್ದರು.
ಕ್ಷಮೆ ಕೇಳಿದ ಮ್ಯಾನೇಜರ್
ಘಟನೆ ವಿವಾದವಾಗುತ್ತಿದ್ದಂತೆ ಬ್ಯಾಂಕ್ ನ ಸಿಬ್ಬಂದಿಯ ಬಳಿ ಕನ್ನಡದಲ್ಲಿ ಹೇಳಿಸಿಕೊಂಡು ಮ್ಯಾನೇಜರ್ ಕ್ಷಮೆ ಕೇಳುತ್ತಿರುವ ವಿಡಿಯೊ ವೈರಲ್ ಆಗಿದ್ದು, ಇದು ಕ್ಷಮೆ ಕೇಳುವಾ ರೀತಿಯಾ ಎಂಬ ಅಭಿಪ್ರಾಯ ಕೇಳಿಬಂದಿದೆ.
ಸಿ ಎಂ ಖಂಡನೆ ;
ಆನೇಕಲ್ ತಾಲೂಕಿನ ಸೂರ್ಯನಗರದಲ್ಲಿರುವ ಎಸ್‍ಬಿಐ ಶಾಖೆಯ ವ್ಯವಸ್ಥಾಪಕರು ಕನ್ನಡ ಮತ್ತು ಇಂಗ್ಲಿಷ್‍ನಲ್ಲಿ ಮಾತನಾಡಲು ನಿರಾಕರಿಸಿ ನಾಗರಿಕರನ್ನು ಕಡೆಗಣಿಸಿರುವ ವರ್ತನೆ ತೀವ್ರ ಖಂಡನೀಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಸಮಾಧಾನ ವ್ಯಕ್ತಪಡಿಸಿದ್ದರು. ಅಧಿಕಾರಿಯನ್ನು ವರ್ಗಾವಣೆ ಮಾಡುವಲಿ ಎಸ್ ಬಿಐ ನ ತ್ವ್ವರಿತ ಕ್ರಮವನ್ನು ನಾವು ಪ್ರಶಂಸಿಸುತ್ತೇವೆ. ವಿಷಯವನ್ನು ಈಗ ಮುಚ್ಚಲಾಗಿದೆ ಎಂದು ಪರಿಗಣಿಸಬಹುದು.
ಆದರೆ, ಇಂತಹ ಘಟನೆಗಳು ಮರುಕಳಿಸಬಾರದು. ಎಲ್ಲಾ ಬ್ಯಾಂಕ್ ಉದ್ಯೋಗಿಗಳು ಗ್ರಾಹಕರನ್ನು ಘನತೆಯಿಂದ ನಡೆಸಿಕೊಳ್ಳಬೇಕು ಮತ್ತು ಸ್ಥಳೀಯ ಭಾಷೆಯಲ್ಲಿ ಮಾತನಾಡಲು ಎಲ್ಲ ಪ್ರಯತ್ನಗಳನ್ನು ಮಾಡಬೇಕು ಎಂದು ಸಲಹೆ ನೀಡಿದ್ದರು.
ಭಾರತದಾದ್ಯಂತ ಎಲ್ಲಾ ಬ್ಯಾಂಕ್ ಸಿಬ್ಬಂದಿಗೆ ಸಾಂಸ್ಕೃತಿಕ ಮತ್ತು ಭಾಷಾ ಸಂವೇದನೆ ತರಬೇತಿಯನ್ನು ಕಡ್ಡಾಯಗೊಳಿಸಲು ಕೇಂದ್ರ ಹಣಕಾಸು ಸಚಿವರಾದ ನಿರ್ಮಾಲಾ ಸೀತರಾಮನ್ ಮತ್ತು ಹಣಕಾಸು ಸೇವೆಗಳ ವಿಭಾಗವನ್ನು ನಾನು ಒತ್ತಾಯಿಸುತ್ತೇನೆ. ಸ್ಥಳೀಯ ಭಾಷೆಯನ್ನು ಗೌರವಿಸುವುದು ಜನರನ್ನು ಗೌರವಿಸಬೇಕು ಎಂದು ಒತ್ತಾಯಿಸಿದ್ದರು.
ಬೆಳಗಾವಿ: ರಾಜಧಾನಿ ಬೆಂಗಳೂರನ್ನು ಹೊರತುಪಡಿಸಿದರೆ ಅತಿವೇಗವಾಗಿ ಬೆಳೆಯುತ್ತಿರುವ ಮೈಸೂರಿನಲ್ಲಿ ಸುಮಾರು 300 ಎಕರೆ ಜಮೀನಿನಲ್ಲಿ ಲೇಔಟ್ ನಿರ್ಮಾಣ ಮಾಡಿ ಸಾರ್ವಜನಿಕರಿಗೆ…
ಬೆಂಗಳೂರು: ಮಹಿಳಾ ನೌಕರರಿಗೆ ಋತುಚಕ್ರದ ಸಮಯದಲ್ಲಿ ರಾಜ್ಯ ಸರ್ಕಾರ ನೀಡಿದ್ದ ರಜೆ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿತ್ತು. ಆದರೆ ಈ…
ಬೆಳಗಾವಿ: 532 ಎಕರೆ ಅರಣ್ಯ, ಸರ್ಕಾರಿ ಭೂಮಿ ಕಬಳಿಸಲು ನಕಲಿ ದಾಖಲೆ ಸಲ್ಲಿಸಿ ನ್ಯಾಯಾಲಯದಿಂದ ಆದೇಶ ಪಡೆದಿರುವ ವ್ಯಕ್ತಿಯ ಹಿಂದಿರುವವರ…
ರಾಕಿಂಗ್ ಸ್ಟಾರ್ ಯಶ್ ತಮ್ಮ ಬಹುನಿರೀಕ್ಷಿತ ಚಿತ್ರ ಟಾಕ್ಸಿಕ್‌ನ ಹೊಸ ಪೋಸ್ಟರ್ ಅನ್ನು ಬಿಡುಗಡೆ ಮಾಡುವ ಮೂಲಕ ಚಿತ್ರದ ಬಗ್ಗೆ…
ಮೈಸೂರು: ಡ್ರಗ್ಸ್ ಮುಕ್ತ ಕರ್ನಾಟಕ ಅಭಿಯಾನ ಜನಜಾಗೃತಿ ಆಂದೋಲನದ ರಥಯಾತ್ರೆಗೆ ಮೈಸೂರಿನಲ್ಲಿ ಇಂದು ಚಾಲನೆ ದೊರೆಯಿತು. ಮೈಸೂರು ನಗರದ ಜೆ.ಕೆ…
ಬೆಂಗಳೂರು: ರಾಜ್ಯದಲ್ಲಿ ಟಿಪ್ಪು ಜಯಂತಿ ಆಚರಣೆ ವಿಚಾರ ಮತ್ತೊಮ್ಮೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಕಾಂಗ್ರೆಸ್ ಶಾಸಕ ಕಾಶಪ್ಪನವರ್…