ಬೆಂಗಳೂರು : ರಾಜ್ಯ ಸರ್ಕಾರ ಪರಿಶಿಷ್ಟ ಜಾತಿಗೆ ಶೇ. 17 ರಷ್ಟು ಮತ್ತು ಪರಿಶಿಷ್ಟ ಪಂಗಡಕ್ಕೆ ಶೇ. 7 ರಷ್ಟು ಮೀಸಲಾತಿ ಹೆಚ್ಚಳ ಮಾಡಿ ಅಧಿಸೂಚನೆ ಹೊರಡಿಸಿದೆ.
ಈ ಸಂಬಂಧ ಸಮಾಜ ಕಲ್ಯಾಣ ಇಲಾಖೆ ಅಧಿಸೂಚನೆ ಹೊರಡಿಸಿದ್ದು, ರಾಜ್ಯ ಸರ್ಕಾರ ಹೊರಡಿಸಿದ್ದ ಸುಗ್ರೀವಾಜ್ಞೆಯಲ್ಲಿರುವ ಎಲ್ಲ ಉಪಬಂಧಗಳನ್ನು ಜಾರಿಗೊಳಿಸಲು ನಿರ್ದೇಶನ ನೀಡಿದೆ.
ರಾಜ್ಯ ಸರ್ಕಾರದ ಎಲ್ಲಾ ವಿಭಾಗಗಳು, ವಿಶ್ವವಿದ್ಯಾಲಯಗಳು, ಶೈಕ್ಷಣಿಕ ಸಂಸ್ಥೆಗಳು, ನಿಗಮಗಳು, ಮಂಡಳಿಗಳು, ಆಯೋಗಗಳು, ಸರ್ಕಾರಿ ಉದ್ಯಮಗಳ ಮುಖ್ಯಸ್ಥರು, ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್ಸಿ) ಕಾರ್ಯದರ್ಶಿ ಮತ್ತು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ಸಿಇಒಗೆ ಈ ಅಧಿಸೂಚನೆಯ ಪ್ರತಿ ನೀಡಲಾಗಿದೆ
ಆದರೆ, ಅನುಷ್ಠಾನಕ್ಕೆ ಹೊರಡಿಸಿರುವ ಅಧಿಸೂಚನೆಯಲ್ಲಿ ಸ್ಪಷ್ಟತೆ ಇಲ್ಲ ಎಂದು ಸಮಾಜ ಕಲ್ಯಾಣ ಇಲಾಖೆಯ ಹೆಸರು ಬಹಿರಂಗ ಪಡಿಸಲು ಇಚ್ಛಸದ ಅಧಿಕಾರಿಯೊಬ್ಬರು ಹೇಳಿದ್ದಾರೆ.
ಅಧಿಸೂಚನೆ ಜಾರಿಗೊಳಿಸುವ ಬಗ್ಗೆ ಗೊಂದಲವಿದ್ದು, ಅದನ್ನು ಮೊದಲು ಸರಿಪಡಿಸಬೇಕಾಗಿದೆ ಎಂದೂ ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಮೀಸಲಾತಿ ಹೆಚ್ಚಳಕ್ಕೆ ಸಂಬಂಧಿಸಿದಂತೆ ಸರ್ಕಾರದ ನಿರ್ದೇಶನಗಳನ್ನು ನವೆಂಬರ್ 1 ರಿಂದ ಜಾರಿಗೆ ತರಬೇಕು ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ. ಆದರೆ, ವರ್ಧಿತ ಮೀಸಲಾತಿಯನ್ನು ಜಾರಿಗೊಳಿಸಿದ ನಂತರ, ರಾಜ್ಯದಲ್ಲಿ ಒಟ್ಟು ಮೀಸಲಾತಿಯು ಶೇ. 56 ಕ್ಕೆ ಏರುತ್ತದೆ ಎಂದು ಹಿರಿಯ ಅಧಿಕಾರಿಗಳು ಹೇಳಿದ್ದಾರೆ.
ರೋಸ್ಟರ್ಗಳ ಮೇಲೆ ಮತ್ತೆ ಕೆಲಸ ಮಾಡಬೇಕಾಗಿದೆ ಮತ್ತು ಕಾನೂನು ನಿಬಂಧನೆಗಳ ಅಡಿಯಲ್ಲಿ, ಮೀಸಲಾತಿ ಹೆಚ್ಚಳದ ಅನುಷ್ಠಾನವು ಸುಲಭವಾಗಿಲ್ಲ ಎಂದು ಅವರು ತಿಳಿಸಿದ್ದಾರೆ.
- ಮುಖಪುಟ
- ಮೈಸೂರು
- ಜಿಲ್ಲೆಗಳು
- ರಾಜ್ಯ
- ದೇಶ- ವಿದೇಶ
- ರಾಜಕೀಯ
- ಅಪರಾಧ
- ಮಹಿಳೆ
- ಕೃಷಿ
- ವಿಜ್ಞಾನ ತಂತ್ರಜ್ಞಾನ
- ಕ್ರೀಡೆ
- ವಾಣಿಜ್ಯ
- ಚಿತ್ರಸಂತೆ
- ವಿಶೇಷ
- ಆಂದೋಲನ ಪುರವಣಿ
- ಎಡಿಟೋರಿಯಲ್
- ಆಂದೋಲನ 50
- ಜಾಹೀರಾತು
- Cricket
Subscribe to Updates
Get the latest creative news from FooBar about art, design and business.