ರಾಜ್ಯ

ಎಸ್‌ಸಿ ಸಮುದಾಯದ ಅಧಿಕಾರಿಗಳಿಗೆ ಬಡ್ತಿ ನಿರಾಕರಣೆ : ಉಗ್ರ ಹೋರಾಟದ ಎಚ್ಚರಿಕೆ

ಬೆಂಗಳೂರು : ಪರಿಶಿಷ್ಟ ಸಮುದಾಯ ಎದುರಿಸುತ್ತಿರುವ ಜ್ವಲಂತ ಸಮಸ್ಯೆಗಳಿಗೆ ಪರಿಹಾರ ಕಂಡು ಹಿಡಿಯುವ ಸಲುವಾಗಿ ವಿಧಾನಪರಿಷತ್ ಮಾಜಿ ಸದಸ್ಯ ಡಿ.ಎಸ್. ವೀರಯ್ಯ ನೇತೃತ್ವದಲ್ಲಿ ಶಾಸಕರ ಭವನದ ಸಭಾಂಗಣದಲ್ಲಿ ವಿವಿಧ ದಲಿತ ಪರ ಸಂಘಟನೆಗಳು ಮತ್ತು ಎಸ್.ಸಿ. ಎಸ್.ಟಿ ನೌಕರರ ಸಂಘಟನೆಗಳ ಮುಖಂಡರ ಸಭೆ ನಡೆಯಿತು.

ಪಿಟಿಸಿಎಲ್ ಕಾಯ್ದೆ ಸಮರ್ಪಕ ಅನುಷ್ಠಾನ, ಪರಿಶಿಷ್ಟರಿಗೆ ಬಡ್ತಿಯಲ್ಲಿ ಮೀಸಲಾತಿ ಕಲ್ಪಿಸುವಲ್ಲಿ ಆಗುತ್ತಿರುವ ತಾರತಮ್ಯ, ಒಳಮೀಸಲಾತಿ ಸೇರಿದಂತೆ ಹಲವು ಜಲ್ವಂತ ಸಮಸ್ಯೆಗಳ ಬಗ್ಗೆ ಗಹನವಾಗಿ ಚರ್ಚೆ ನಡೆಸಿದರು.

ಡಿ.ಎಸ್. ವೀರಯ್ಯ ಮಾತನಾಡಿ, ರಾಜ್ಯ ಸರ್ಕಾರದಲ್ಲಿ ಪರಿಶಿಷ್ಟ ಸಮುದಾಯದ ಅಧಿಕಾರಿಗಳಿಗೆ ಬಡ್ತಿ ಅವಕಾಶಗಳನ್ನು ನಿರಾಕರಿಸಲಾಗುತ್ತಿದೆ. ದಲಿತರ ಹಕ್ಕುಗಳನ್ನು ದಮನ ಮಾಡಲಾಗುತ್ತಿದೆ. ಇದು ಗಂಭೀರ ಸಮಸ್ಯೆಯಾಗಿದ್ದು, ಕೂಡಲೇ ಸಮಸ್ಯೆಗೆ ಪರಿಹಾರ ಕಂಡು ಹಿಡಿಯದಿದ್ದರೆ ಉಗ್ರ ಹೋರಾಟ ಮಾಡುತ್ತೇವೆ ಎಂದು ಹೇಳಿದರು.

ಪರಿಶಿಷ್ಟ ಸಮುದಾಯದ ಅಧಿಕಾರಿಗಳಿಗೆ ನ್ಯಾಯ ಸಿಗುತ್ತಿಲ್ಲ ಎಂದು ಏಐಸಿಸಿ ಅಧ್ಯಕ್ಷ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದು, ಇದು ಸಮಸ್ಯೆಯ ಗಂಭೀರತೆಯನ್ನು ಸೂಚಿಸುತ್ತದೆ. ಇದನ್ನು ವಿಳಂಬ ಮಾಡದೆ ಪರಿಹರಿಸಬೇಕು ಎಂದು ಆಗ್ರಹಿಸಿದರು.

ರಾಜ್ಯ ಸರ್ಕಾರಿ ಎಸ್ಸಿ/ಎಸ್ಟಿ ನೌಕರರ ಸಂಘದ ಅಧ್ಯಕ್ಷ ಡಿ. ಚಂದ್ರಶೇಖರಯ್ಯ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು ಬಡ್ತಿ ಅನ್ಯಾಯ ಸರಿಪಡಿಸುವಂತೆ ಒತ್ತಾಯಿಸಿದ್ದಾರೆ. ಆದರೆ ಮುಖ್ಯಮಂತ್ರಿ ಅವರು ಈ ಕುರಿತು ಗಮನಹರಿಸಿಲ್ಲ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯಲ್ಲಿ 80 ಎಸ್ ಸಿ/ಎಸ್ ಟಿ ನೌಕರರಿಗೆ ಪ್ರಾಂಶುಪಾಲರ ಹುದ್ದೆಗೆ ಬಡ್ತಿ ನಿರಾಕರಿಸಲಾಗಿದೆ. ಈ ಸಮಸ್ಯೆಗೆ ಪರಿಹಾರ ದೊರಕಿಸಿಕೊಡಬೇಕು ಎಂದರು.

ಮಾಜಿ ಸಚಿವೆ, ಸಾಹಿತಿ ಬಿ.ಟಿ. ಲಲಿತಾ ನಾಯಕ್‌ ಮಾತನಾಡಿ, ಮನುಷ್ಯ ಉನ್ನತ ಮಟ್ಟಕ್ಕೆ ಹೋಗುತ್ತಿರುವ ಸಂದರ್ಭದಲ್ಲಿ ಸಮಾನತೆ ಬಗ್ಗೆ ಚಿಂತನೆ ನಡೆಯಬೇಕು. ಸಮ ಸಮಾಜ ನಿರ್ಮಾಣಕ್ಕೆ ಎಲ್ಲರೂ ಗಮನಹರಿಸಬೇಕು. ಪ್ರತಿಯೊಬ್ಬ ವ್ಯಕ್ತಿ ಉನ್ನತಮಟ್ಟಕ್ಕೆ ಏರಲು ಅಂಬೇಡ್ಕರ್‌ ಅವರ ಚಿಂತನೆಗಳನ್ನು ಓದಿ ಮನನ ಮಾಡಿಕೊಳ್ಳಬೇಕು. ದೇವಾಸ್ಥಾನಗಳ ಜಾಗದಲ್ಲಿ ಗ್ರಂಥಾಲಯಗಳಿರಬೇಕು. ಬಾಬಾ ಸಾಹೇಬರ ಬೆಳಕನ್ನು ಪ್ರತಿಯೊಬ್ಬರೂ ಕಾಣಬೇಕು ಎಂದರು.

ಆಂದೋಲನ ಡೆಸ್ಕ್

Recent Posts

ವಿಜಯಾ ದಬ್ಬೆ ಸಾಹಿತ್ಯ ಪ್ರಶಸ್ತಿ: ಲೇಖಕಿಯರಿಂದ ಕಥಾಸಂಕಲನ ಆಹ್ವಾನ

ಮೈಸೂರು: ಮೈಸೂರಿನ ಸಮತಾ ಅಧ್ಯಯನ ಕೇಂದ್ರ(ರಿ)ವು ಸಂಸ್ಥಾಪಕ ಅಧ್ಯಕ್ಷೆ, ಖ್ಯಾತ ಸ್ತ್ರೀವಾದಿ ವಿಮರ್ಶಕಿ ಹಾಗೂ ಲೇಖಕಿ ಡಾ.ವಿಜಯಾ ದಬ್ಬೆ ಅವರ ಹೆಸರಿನಲ್ಲಿ 2022…

9 mins ago

ಗುಂಡ್ಲುಪೇಟೆ: ಬೊಮ್ಮಲಾಪುರದಲ್ಲಿ ವಾಸದ ಮನೆಗೆ ನುಗ್ಗಿದ ಕಡವೆ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬೊಮ್ಮಲಾಪುರ ಗ್ರಾಮದ ದೊರೆ ಎಂಬುವವರ ವಾಸದ ಮನೆಗೆ ನುಗ್ಗಿದ ಕಡವೆಯನ್ನು…

23 mins ago

ಶಿಕ್ಷಣದಿಂದ ಮಾತ್ರ ಮುಖ್ಯವಾಹಿನಿಗೆ ಬರಲು ಸಾಧ್ಯ: ಡಾ.ಕುಮಾರ

ಮಂಡ್ಯ: ಸಾಮಾಜಿಕವಾಗಿ, ಆರ್ಥಿಕವಾಗಿ, ಶೈಕ್ಷಣಿಕವಾಗಿ ಸಮಾಜದ ಮುಖ್ಯ ವಾಹಿನಿಗೆ ಬರಬೇಕು. ಸಮುದಾಯಗಳು ಮುಖ್ಯ ವಾಹಿನಿಗೆ ಬರಲು ಶಿಕ್ಷಣದಿಂದ ಮಾತ್ರ ಸಾಧ್ಯ…

40 mins ago

ಮಂಡ್ಯ| ಬೂದನೂರು ಉತ್ಸವಕ್ಕೆ ಭರದ ಸಿದ್ಧತೆ: ಈ ಬಾರಿ ಹೆಲಿ ಟೂರಿಸಂ ಆಕರ್ಷಣೆ

ಮಂಡ್ಯ: ತಾಲ್ಲೂಕಿನ ಹೊಸ ಬೂದನೂರಿನಲ್ಲಿ ನೆಲೆಯಾಗಿರುವ ಕಾಶಿ ವಿಶ್ವನಾಥ ಹಾಗೂ ಅನಂತಪದ್ಮನಾಭಸ್ವಾಮಿ ಉತ್ಸವಕ್ಕೆ ದಿನಗಣನೆ ಆರಂಭವಾಗಿದೆ. ಈ ಬಾರಿ ಉತ್ಸವಕ್ಕೆ…

55 mins ago

ಈ ವರ್ಷ ಬಿಸಿಲ ಝಳವೂ ಹೆಚ್ಚಳ: ಹವಾಮಾನ ಇಲಾಖೆ ಸೂಚನೆ

ಬೆಂಗಳೂರು: ಈ ವರ್ಷ ಚಳಿ ಪ್ರಮಾಣ ಹೆಚ್ಚಾಗಿದ್ದರಿಂದ ಬಿಸಿಲ ಝಳವೂ ಹೆಚ್ಚಾಗಿರಲಿದ್ದು, ಮುಂದಿನ ಬೇಸಿಗೆಯಲ್ಲಿ ವಿಪರೀತ ಬಿಸಿಲು ಹವಾಮಾನ ಇರಲಿದೆ…

1 hour ago

ರಾಜ್ಯದಲ್ಲಿರುವ ಅಷ್ಟೂ ಗ್ರಾಮ ಪಂಚಾಯಿತಿಗಳಿಗೆ ಮಹಾತ್ಮಗಾಂಧಿ ಹೆಸರು: ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು: ರಾಜ್ಯದಲ್ಲಿರುವ ಅಷ್ಟೂ ಗ್ರಾಮ ಪಂಚಾಯಿತಿಗಳಿಗೆ ಮಹಾತ್ಮಗಾಂಧಿ ಹೆಸರು ಇಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಫ್ರೀಡಂಪಾರ್ಕ್ ನಲ್ಲಿ…

1 hour ago