SC community officers denied promotion: Warning of violent protest
ಬೆಂಗಳೂರು : ಪರಿಶಿಷ್ಟ ಸಮುದಾಯ ಎದುರಿಸುತ್ತಿರುವ ಜ್ವಲಂತ ಸಮಸ್ಯೆಗಳಿಗೆ ಪರಿಹಾರ ಕಂಡು ಹಿಡಿಯುವ ಸಲುವಾಗಿ ವಿಧಾನಪರಿಷತ್ ಮಾಜಿ ಸದಸ್ಯ ಡಿ.ಎಸ್. ವೀರಯ್ಯ ನೇತೃತ್ವದಲ್ಲಿ ಶಾಸಕರ ಭವನದ ಸಭಾಂಗಣದಲ್ಲಿ ವಿವಿಧ ದಲಿತ ಪರ ಸಂಘಟನೆಗಳು ಮತ್ತು ಎಸ್.ಸಿ. ಎಸ್.ಟಿ ನೌಕರರ ಸಂಘಟನೆಗಳ ಮುಖಂಡರ ಸಭೆ ನಡೆಯಿತು.
ಪಿಟಿಸಿಎಲ್ ಕಾಯ್ದೆ ಸಮರ್ಪಕ ಅನುಷ್ಠಾನ, ಪರಿಶಿಷ್ಟರಿಗೆ ಬಡ್ತಿಯಲ್ಲಿ ಮೀಸಲಾತಿ ಕಲ್ಪಿಸುವಲ್ಲಿ ಆಗುತ್ತಿರುವ ತಾರತಮ್ಯ, ಒಳಮೀಸಲಾತಿ ಸೇರಿದಂತೆ ಹಲವು ಜಲ್ವಂತ ಸಮಸ್ಯೆಗಳ ಬಗ್ಗೆ ಗಹನವಾಗಿ ಚರ್ಚೆ ನಡೆಸಿದರು.
ಡಿ.ಎಸ್. ವೀರಯ್ಯ ಮಾತನಾಡಿ, ರಾಜ್ಯ ಸರ್ಕಾರದಲ್ಲಿ ಪರಿಶಿಷ್ಟ ಸಮುದಾಯದ ಅಧಿಕಾರಿಗಳಿಗೆ ಬಡ್ತಿ ಅವಕಾಶಗಳನ್ನು ನಿರಾಕರಿಸಲಾಗುತ್ತಿದೆ. ದಲಿತರ ಹಕ್ಕುಗಳನ್ನು ದಮನ ಮಾಡಲಾಗುತ್ತಿದೆ. ಇದು ಗಂಭೀರ ಸಮಸ್ಯೆಯಾಗಿದ್ದು, ಕೂಡಲೇ ಸಮಸ್ಯೆಗೆ ಪರಿಹಾರ ಕಂಡು ಹಿಡಿಯದಿದ್ದರೆ ಉಗ್ರ ಹೋರಾಟ ಮಾಡುತ್ತೇವೆ ಎಂದು ಹೇಳಿದರು.
ಪರಿಶಿಷ್ಟ ಸಮುದಾಯದ ಅಧಿಕಾರಿಗಳಿಗೆ ನ್ಯಾಯ ಸಿಗುತ್ತಿಲ್ಲ ಎಂದು ಏಐಸಿಸಿ ಅಧ್ಯಕ್ಷ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದು, ಇದು ಸಮಸ್ಯೆಯ ಗಂಭೀರತೆಯನ್ನು ಸೂಚಿಸುತ್ತದೆ. ಇದನ್ನು ವಿಳಂಬ ಮಾಡದೆ ಪರಿಹರಿಸಬೇಕು ಎಂದು ಆಗ್ರಹಿಸಿದರು.
ರಾಜ್ಯ ಸರ್ಕಾರಿ ಎಸ್ಸಿ/ಎಸ್ಟಿ ನೌಕರರ ಸಂಘದ ಅಧ್ಯಕ್ಷ ಡಿ. ಚಂದ್ರಶೇಖರಯ್ಯ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು ಬಡ್ತಿ ಅನ್ಯಾಯ ಸರಿಪಡಿಸುವಂತೆ ಒತ್ತಾಯಿಸಿದ್ದಾರೆ. ಆದರೆ ಮುಖ್ಯಮಂತ್ರಿ ಅವರು ಈ ಕುರಿತು ಗಮನಹರಿಸಿಲ್ಲ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯಲ್ಲಿ 80 ಎಸ್ ಸಿ/ಎಸ್ ಟಿ ನೌಕರರಿಗೆ ಪ್ರಾಂಶುಪಾಲರ ಹುದ್ದೆಗೆ ಬಡ್ತಿ ನಿರಾಕರಿಸಲಾಗಿದೆ. ಈ ಸಮಸ್ಯೆಗೆ ಪರಿಹಾರ ದೊರಕಿಸಿಕೊಡಬೇಕು ಎಂದರು.
ಮಾಜಿ ಸಚಿವೆ, ಸಾಹಿತಿ ಬಿ.ಟಿ. ಲಲಿತಾ ನಾಯಕ್ ಮಾತನಾಡಿ, ಮನುಷ್ಯ ಉನ್ನತ ಮಟ್ಟಕ್ಕೆ ಹೋಗುತ್ತಿರುವ ಸಂದರ್ಭದಲ್ಲಿ ಸಮಾನತೆ ಬಗ್ಗೆ ಚಿಂತನೆ ನಡೆಯಬೇಕು. ಸಮ ಸಮಾಜ ನಿರ್ಮಾಣಕ್ಕೆ ಎಲ್ಲರೂ ಗಮನಹರಿಸಬೇಕು. ಪ್ರತಿಯೊಬ್ಬ ವ್ಯಕ್ತಿ ಉನ್ನತಮಟ್ಟಕ್ಕೆ ಏರಲು ಅಂಬೇಡ್ಕರ್ ಅವರ ಚಿಂತನೆಗಳನ್ನು ಓದಿ ಮನನ ಮಾಡಿಕೊಳ್ಳಬೇಕು. ದೇವಾಸ್ಥಾನಗಳ ಜಾಗದಲ್ಲಿ ಗ್ರಂಥಾಲಯಗಳಿರಬೇಕು. ಬಾಬಾ ಸಾಹೇಬರ ಬೆಳಕನ್ನು ಪ್ರತಿಯೊಬ್ಬರೂ ಕಾಣಬೇಕು ಎಂದರು.
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…
ಸಿಡಬ್ಲ್ಯುಆರ್‌ಸಿ ಆದೇಶದಂತೆ ಪ್ರತಿದಿನ ೬,೦೦೦ ಕ್ಯೂಸೆಕ್ಸ್‌ನಂತೆ ೧೫ ದಿನಗಳ ಕಾಲ ಕರ್ನಾಟಕ ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸಬೇಕಾಗುತ್ತದೆ. ಜಲಾಶಯದಲ್ಲಿ…
ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಅದೇಕೋ ಏನೋ ಕರ್ನಾಟಕಕ್ಕೂ ಇಲ್ಲಿರುವ ಮಲ್ಟಿಪ್ಲೆಕ್‌ಳಿಗೂ ಆಗಿ ಬರುತ್ತಿಲ್ಲ ಎನಿಸುತ್ತದೆ. ಅದು ಚಿತ್ರೋದ್ಯಮಕ್ಕೆ ಮಾತ್ರವಲ್ಲ,…
ಲಕ್ಷ್ಮೀಕಾಂತ್ ಕೊಮಾರಪ್ಪ ಸುದರ್ಶನ ಸರ್ಕಲ್‌ನಿಂದ ಗಾಂಧಿ ಮೈದಾನದವರೆಗೆ ಪ್ರತಿಭಟನಾ ಮೆರವಣಿಗೆ ಸೋಮವಾರಪೇಟೆ: ಮಲೆನಾಡ ಭಾಗದ ರೈತರ ಬದುಕಿನ ಮೇಲೆ ತೂಗುಗತ್ತಿಯಂತೆ ಪರಿಣಮಿಸಿರುವ…
ರಾಜೇಶ್ ಬೆಂಡರವಾಡಿ ಪ್ರಥಮ ಬಾರಿಗೆ ಇತರೆ ಹಿಂದುಳಿದ ವರ್ಗಕ್ಕೆ ಒಲಿದ ಡಿಸಿಸಿ ಅಧ್ಯಕ್ಷ ಸ್ಥಾನ ಚಾಮರಾಜನಗರ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ…