ಬೆಂಗಳೂರು: ರಾಜ್ಯದಲ್ಲಿ ಪರಿಶಿಷ್ಟ ಜಾತಿಯಲ್ಲಿ ಒಳಮೀಸಲಾತಿ ಜಾರಿಯ ಹಿನ್ನೆಲೆಯಲ್ಲಿ ಸಮೀಕ್ಷೆ ನಡೆಸಿದ್ದ ನಿವೃತ್ತ ನ್ಯಾ.ನಾಗಮೋಹನದಾಸ್ ಆಯೋಗವು ಇಂದು ಸರ್ಕಾರಕ್ಕೆ ವರದಿ ಸಲ್ಲಿಕೆ ಮಾಡಿದೆ.
ಒಳಮೀಸಲಾತಿ ಜಾರಿಗೆ ಸುಪ್ರೀಂಕೋರ್ಟ್ ಆದೇಶ ಮಾಡಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಎಸ್‌ಸಿ ಸಮುದಾಯದ ಆಂತರಿಕ ಸಮೀಕ್ಷೆ ನಡೆಸಲು ಸೂಚನೆ ನೀಡಿತ್ತು.
ಈ ನಿಟ್ಟಿನಲ್ಲಿ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ನೇತೃತ್ವದ ಆಯೋಗ ಸಮೀಕ್ಷೆ ನಡೆಸಿದ್ದು, ಇಂದು ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಅಂತಿಮ ವರದಿ ಸಲ್ಲಿಕೆ ಮಾಡಿದೆ.
ಇನ್ನು ಜುಲೈ.30ರಂದೇ ವರದಿ ಸಿದ್ಧವಾಗಿತ್ತು. ಸಿಎಂ ಸಿದ್ದರಾಮಯ್ಯ ಸಮಯಾವಕಾಶ ಕೇಳಿದ್ದರೂ ಕಾರ್ಯ ಒತ್ತಡ ಕಾರಣಕ್ಕೆ ಅವರು ಲಭ್ಯರಾಗಲಿಲ್ಲ. ಹೀಗಾಗಿ ಇಂದು ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಅವರು ವರದಿ ಸಲ್ಲಿಕೆ ಮಾಡಿದ್ದಾರೆ.





