ಬೆಂಗಳೂರು: ಕರ್ನಾಟಕದ ಅಸಲಿ ಮುಖ್ಯಮಂತ್ರಿ ನೋಡಲು ಸ್ಕ್ಯಾನ್ ಮಾಡಿ ಎಂದು ಸ್ಕ್ಯಾನರ್ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.
ಕರ್ನಾಟಕವು ಕನ್ನಡಿಗ ಸಿಎಂಗೆ ಮತ ಹಾಕಿದೆ. ಆದರೆ ಹರಿಯಾಣದ ಸೂಪರ್ ಸಿಎಂ ನಮನ್ನು ಆಳುತ್ತಿದ್ದಾರೆ. ಅವರು ಈಗ ಮಂತ್ರಿಗಳೊಂದಿಗೆ ಮಾತ್ರವಲ್ಲ, ಸರ್ಕಾರದ ಅಧಿಕಾರಿಗಳೊಂದಿಗೆ ಸಭೆಗಳನ್ನೂ ನಡೆಸುತ್ತಿದ್ದಾರೆ ಎಂದು ಅವರು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರ ಹೆಸರು ಪ್ರಸ್ತಾಪಿಸದೇ ಅವರು ಆರೋಪಿಸಿದ್ದಾರೆ.
ಕನ್ನಡಿಗ ಹೆಮೆಯ ಸ್ವಯಂಘೋಷಿತ ಚಾಂಪಿಯನ್ ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜ್ಯದ ಆಡಳಿತವನ್ನು ಸದ್ದಿಲ್ಲದೆ ಹೊರಗುತ್ತಿಗೆ ನೀಡಿದ್ದಾರೆ ಎಂದು ಆರೋಪಿಸಿರುವ ಅವರು, ನಮ್ಮ ಹೆಮ್ಮೆ ಎಲ್ಲಿದೆ? ಎಂದು ಪ್ರಶ್ನಿಸಿದ್ದಾರೆ.






