ಬಿಜೆಪಿ, ಕಾಂಗ್ರೆಸ್‌ ಸರ್ಕಾರಗಳ ಅವಧಿಯಲ್ಲಿ ಪಠ್ಯಕ್ಕೆ ಆಗಿರುವ ಅಪಚಾರವನ್ನು ನಾನೂ ಕೂಡ ಅಧ್ಯಯನ ಮಾಡುತ್ತಿದ್ದೇನೆ : ಹೆಚ್.ಡಿ.ಕುಮಾರಸ್ವಾಮಿ

ಬೆಂಗಳೂರು : ಪಠ್ಯಪುಸ್ತಕ ಬಿಕ್ಕಟ್ಟಿನ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ತಮ್ಮ ಪ್ರತಿಕ್ರಿಯೆಯನ್ನು ವ್ಯಕ್ತಪಡಿಸಿದ್ದು, ಪಠ್ಯಪುಸ್ತಕದ ಬಿಕ್ಕಟ್ಟಿ ವಿಚಾರದ ಕುರಿತು ಬಿಜೆಪಿ ಮತ್ತು ಕಾಂಗ್ರೆಸ್‌ ಸರಾಕರಗಳು ತಮ್ಮ ಅಧಿಕಾರದ ಅವಧಿಯಲ್ಲಿ ಪಠ್ಯಕ್ಕೆ ಏನೆಲ್ಲಾ ಅಪಚಾರ ಮಾಡಿದೆ ಎಂಬುದನ್ನು ನಾನು ಅಧ್ಯಯನ ಮಾಡುತ್ತಿದ್ದೇನೆ ಎಂದು ಹೇಳಿದ್ದಾರೆ.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಜೆಪಿ ಸರ್ಕಾರ ಮಾಡಿರುವ ಪಠ್ಯಪರಿಷ್ಕರಣೆ ಯ ಬಗ್ಗೆ ಆಪಾದನೆ ಮಾಡುತ್ತಿದ್ದಾರೆ, ಈ ಹಿಂದೆ ಸಿದ್ದರಾಮಯ್ಯ ಸರ್ಕಾರವೂ ಕೂಡ ತಪ್ಪು ಮಾಡಿದೆ ಎಂದು ಹೇಳಿದರು.

ಮುಂದುವರಿದು ಕುವೆಂಪು ಅವರಿಗೆ ಅಪಮಾನ ಮಾಡಿದ್ದಾರೆಂದು ಕುವೆಂಪು ವೇದಿಕೆ ಅವರು ಹೆಚ್.ಡಿ.ದೇವೇಗೌಡರಿಗೆ ಅಹ್ವಾನ ಕೊಟ್ಟಿದ್ದರು. ಹಾಗಾಗಿ, ದೇವೇಗೌಡರು ಹೋರಾಟಕ್ಕೆ ಹೋಗಿದ್ದರು. ಎರಡೂ ಸರಕಾರಗಳ ಅವಧಿಯಲ್ಲಿ ಪಠ್ಯಕ್ಕೆ ಏನೆಲ್ಲಾ ಅಪಚಾರ ಆಗಿದೆ ಎಂಬುದನ್ನು ನಾನು ಕೂಡ ಅಧ್ಯಯನ ಮಾಡುತ್ತಿದ್ದೇನೆ  ಎಂದು  ಹೇಳಿದರು.