Mysore
27
overcast clouds

Social Media

ಭಾನುವಾರ, 20 ಏಪ್ರಿಲ 2025
Light
Dark

ಪರಿಶಿಷ್ಟ ನಿಗಮದ ಅಕ್ರಮ: ಸಚಿವ ನಾಗೇಂದ್ರ ರಾಜೀನಾಮೆ?

ಬೆಂಗಳೂರು: ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಅಕ್ರಮ ಹಣ ವರ್ಗವಣೆಯ ಆರೋಪಕ್ಕೆ ಗುರಿಯಾಗಿರುವ ಸಚಿವ ಬಿ.ನಾಗೇಂದ್ರ ಅವರಿಗೆ ರಾಜೀನಾಮೆ ಕೊಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ. ಈ ಹಿನ್ನೆಲೆ ಇಂದು(ಜೂ.೬) ಅವರು ರಾಜೀನಾಮೆ ನೀಡುವ ಸಾಧ್ಯತೆ ಹೆಚ್ಚಿದೆ ಎನ್ನಲಾಗಿದೆ.

ಸಿಎಂ ಸಿದ್ದರಾಮಯ್ಯ ಅವರು ಬುಧುವಾರ ರಾತ್ರಿ(ಜೂ.೬) ಸಚಿವ ನಾಗೇಂದ್ರರನ್ನು ತಮ್ಮ ನಿವಾಸ ಕಾವೇರಿಗೆ ಕರೆಸಿಕೊಂಡು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಸೂಚನೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ನಿಗಮದ ಅಕ್ರಮದ ತನಿಖೆ ನಡೆಸುತ್ತಿರುವ ಎಸ್‌ಐಟಿ ಅಧಿಕಾರಿಗಳು ಸಚಿವ ನಾಗೇಂದ್ರ ಅವರು ಆಪ್ತ ನೆಕ್ಕಂಕಿ ನಾಗರಾಜ್‌ ಅವರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದೆ.

ಇತ್ತ ಬಿಜೆಪಿ ನಾಯಕರು ಸಚಿವ ನಾಗೇಂದ್ರ ರಾಜೀನಾಮೆ ಗೆ ಜೂನ್‌ ೬ರಂದು ಗಡುವು ನೀಡಿದ್ದಾರೆ. ಅದರೊಳಗೆ ರಾಜೀನಾಮೆ ಪಡೆಯದಿದ್ದಲ್ಲಿ ಹೋರಾಟವನ್ನು ತೀವ್ರಗೊಳಿಸುವುದಾಗಿ ಎಚ್ಚರಿಸಿದ್ದಾರೆ.

Tags: