ಬೆಂಗಳೂರು: ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಅಕ್ರಮ ಹಣ ವರ್ಗವಣೆಯ ಆರೋಪಕ್ಕೆ ಗುರಿಯಾಗಿರುವ ಸಚಿವ ಬಿ.ನಾಗೇಂದ್ರ ಅವರಿಗೆ ರಾಜೀನಾಮೆ ಕೊಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ. ಈ ಹಿನ್ನೆಲೆ ಇಂದು(ಜೂ.೬) ಅವರು ರಾಜೀನಾಮೆ ನೀಡುವ ಸಾಧ್ಯತೆ ಹೆಚ್ಚಿದೆ ಎನ್ನಲಾಗಿದೆ.
ಸಿಎಂ ಸಿದ್ದರಾಮಯ್ಯ ಅವರು ಬುಧುವಾರ ರಾತ್ರಿ(ಜೂ.೬) ಸಚಿವ ನಾಗೇಂದ್ರರನ್ನು ತಮ್ಮ ನಿವಾಸ ಕಾವೇರಿಗೆ ಕರೆಸಿಕೊಂಡು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಸೂಚನೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ನಿಗಮದ ಅಕ್ರಮದ ತನಿಖೆ ನಡೆಸುತ್ತಿರುವ ಎಸ್‌ಐಟಿ ಅಧಿಕಾರಿಗಳು ಸಚಿವ ನಾಗೇಂದ್ರ ಅವರು ಆಪ್ತ ನೆಕ್ಕಂಕಿ ನಾಗರಾಜ್ ಅವರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದೆ.
ಇತ್ತ ಬಿಜೆಪಿ ನಾಯಕರು ಸಚಿವ ನಾಗೇಂದ್ರ ರಾಜೀನಾಮೆ ಗೆ ಜೂನ್ ೬ರಂದು ಗಡುವು ನೀಡಿದ್ದಾರೆ. ಅದರೊಳಗೆ ರಾಜೀನಾಮೆ ಪಡೆಯದಿದ್ದಲ್ಲಿ ಹೋರಾಟವನ್ನು ತೀವ್ರಗೊಳಿಸುವುದಾಗಿ ಎಚ್ಚರಿಸಿದ್ದಾರೆ.
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್ಸಿ ಸಿ.ಟಿ…
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…