ಬೆಂಗಳೂರು: ರಾಜ್ಯದ 42 ಶಾಲೆಗಳಲ್ಲಿ ಎಲ್‌ಕೆಜಿ ಹಾಗೂ 51 ಶಾಲೆಗಳಲ್ಲಿ ಆಂಗ್ಲ ಮಾಧ್ಯಮದ ಹೆಚ್ಚುವರಿ ವಿಭಾಗ ಆರಂಭಿಸಲು ಶಾಲಾ ಶಿಕ್ಷಣ ಇಲಾಖೆ ಅನುಮೋದನೆ ನೀಡಿದೆ.
ಪ್ರಸಕ್ತ ಶೈಕ್ಷಣಿಕ ವರ್ಷದ ಆರಂಭದಲ್ಲಿ ಕರ್ನಾಟಕದ ಏಳು ಜಿಲ್ಲೆಗಳಲ್ಲಿ ಒಂದು ಸಾವಿರಕ್ಕೂ ಹೆಚ್ಚು ಪೂರ್ವ ಪ್ರಾಥಮಿಕ ಶಾಲೆಗಳನ್ನು ಆರಂಭಿಸಲಾಗಿತ್ತು.
ಈಗ ಮತ್ತೆ 42 ಶಾಲೆಗಳಿಗೆ ಇಲಾಖೆಯ ಆಯುಕ್ತ ಕೆ.ವಿ.ತ್ರಿಲೋಕ್ ಚಂದ್ರ ಅನುಮತಿ ನೀಡಿದ್ದಾರೆ.
ಸರ್ಕಾರಿ ಶಾಲೆಗಳ ಬಲವರ್ಧನೆಗೆ ಕೆಲ ವರ್ಷಗಳ ಹಿಂದಯೇ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಆರಂಭಿಸಲಾಗಿತ್ತು. ಹಾಗೆಯೇ ಒಂದನೇ ತರಗತಿಯಿಂದಲೇ ಆಂಗ್ಲ ಮಾಧ್ಯಮ ಶಾಲೆಗಳನ್ನು ಆರಂಭಿಸಲು ಅನುಮತಿ ನೀಡಿತ್ತು. ಪ್ರಸ್ತುತ ಇರುವ 286 ಪಬ್ಲಿಕ್ ಶಾಲೆಗಳಲ್ಲಿ ಹೆಚ್ಚು ವಿದ್ಯಾರ್ಥಿಗಳು ದಾಖಲಾಗಿರುವ 51 ಶಾಲೆಗಳಲ್ಲಿ ಹೆಚ್ಚುವರಿ ಆಂಗ್ಲ ಮಾಧ್ಯಮ ವಿಭಾಗ ಆರಂಭಿಸಲಾಗುತ್ತಿದೆ.
ಹೊಸದಾಗಿ ಆಂಗ್ಲ ಮಾಧ್ಯಮ ಶಾಲೆ ಆರಂಭಿಸಲು, ಒಂದನೇ ತರಗತಿಯಿಂದಲೇ ಕನ್ನಡ ಮಾಧ್ಯಮದ ಜೊತೆ ಆಂಗ್ಲ ಮಾಧ್ಯಮಕ್ಕೂ ಅವಕಾಶ ನೀಡಲು ಹಾಗೂ ಹೆಚ್ಚುವರಿ ವಿಭಾಗದ ಮಂಜೂರು ಮಾಡಲು ಪ್ರಸ್ತಾವ ಸಲ್ಲಿಸುವಂತೆ ಶಾಲಾ ಶಿಕ್ಷಣ ಇಲಾಖೆ ಈಚೆಗೆ ಸೂಚನೆ ನೀಡಿತ್ತು.
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…
ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಮಂಡ್ಯ ನಗರದಲ್ಲಿನ ವಿದ್ಯುತ್ ದೀಪಾಲಂಕಾರಕ್ಕೆ ಕೃಷಿ ಸಚಿವರು ಹಾಗೂ…
ಕೇರಳ ಮೂಲದ ಮಾಸ್ಟರ್ ಮೈಂಡ್ ಸೇರಿದಂತೆ 12 ಆರೋಪಿಗಳ ಬಂಧನ; ಮತ್ತೊಂದು ಮೋಸದ ಜಾಲ ಬಯಲಿಗೆಳೆದ ಕೊಡಗು ಜಿಲ್ಲಾ ಪೊಲೀಸರು…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಜನವರಿ…