ಬೆಂಗಳೂರು: ಸೆಪ್ಟೆಂಬರ್.22ರಿಂದ ಆರಂಭವಾಗಲಿರುವ ಜಾತಿ ಸಮೀಕ್ಷೆಗೆ ರಾಜ್ಯ ಸರ್ಕಾರ ಶಿಕ್ಷಕರನ್ನು ನೇಮಿಸಿರುವ ಹಿನ್ನೆಲೆಯಲ್ಲಿ ಈ ಬಾರಿ ಶಾಲಾ ಶಿಕ್ಷಕರು ದಸರಾ ರಜೆಯಿಂದ ವಂಚಿತರಾಗಲಿದ್ದಾರೆ.
ದಸರಾ ರಜೆ ಹೋಗಲಿ ಸಮೀಕ್ಷೆಯಲ್ಲಿ ಭಾಗಿಯಾಗುತ್ತಿರುವ ಶಿಕ್ಷಕರಿಗೆ ಗೌರವಧನವನ್ನು ನೀಡುವುದಿಲ್ಲ. ಇದರ ಜೊತೆಗೆ ಗಳಿಕೆ ರಜೆಯೂ ಇಲ್ಲ. ಈ ಹಿನ್ನೆಲೆಯಲ್ಲಿ ಸರ್ಕಾರದ ಈ ನಡೆಗೆ ಶಿಕ್ಷಕ ವೃಂದವು ಅಸಮಾಧಾನ ವ್ಯಕ್ತಪಡಿಸಿದೆ.
ಸಮೀಕ್ಷೆಯಲ್ಲಿ ಭಾಗಿಯಾಗಲಿರುವ 1.70 ಭಾಷಾ ಶಿಕ್ಷಕರಿಗೆ ಸೆ.19ರವರೆಗೂ ತರಬೇತಿ ನೀಡಲಾಗುವುದು. ರಜಾ ದಿನಗಳಲ್ಲಿ ಕೆಲಸ ಮಾಡಿದರೆ ಗಳಿಕಾ ರಜೆ ಸೌಲಭ್ಯ ನೀಡಬೇಕೆಂಬ ನಿಯಮವಿದೆ. ಹೀಗಿದ್ದರೂ ಸಮೀಕ್ಷೆಯಲ್ಲಿ ಭಾಗಿಯಾಗುವ ಶಿಕ್ಷಕರಿಗೆ ಗಳಿಕೆ ರಜೆ ನೀಡದಿರಲು ತೀರ್ಮಾನಿಸಲಾಗಿದೆ.
ರಾಜ್ಯದಲ್ಲಿ 46,757 ಸರ್ಕಾರಿ ಶಾಲೆಗಳಿದ್ದು, 1.77 ಲಕ್ಷ ಶಿಕ್ಷಕರು ಕಾರ್ಯ ನಿರ್ವಹಿಸುತ್ತಿದ್ದಾರೆ. 2025-26 ರಲ್ಲಿ 123 ರಜೆಗಳಿದ್ದು, 242 ಶಾಲಾ ಕರ್ತವ್ಯ ದಿನಗಳಿವೆ. ಹೀಗಿದ್ದರೂ ಸರ್ಕಾರ ನಮ್ಮ ಮೇಲೆ ಯಾಕೆ ಈ ರೀತಿ ಕೋಪ ತೀರಿಸಿಕೊಳ್ಳುತ್ತಿದೆ ಎನ್ನುವುದು ಅರ್ಥವಾಗುತ್ತಿಲ್ಲ ಎನ್ನುತ್ತಿದ್ದಾರೆ ಶಿಕ್ಷಕರು. ಈಗಲೂ ಕಾಲ ಮಿಂಚಿಲ್ಲ ಶಿಕ್ಷಕರ ಮೇಲೆ ಆಗುತ್ತಿರುವ ಅನ್ಯಾಯವನ್ನು ಸರಿಪಡಿಸಬೇಕು ಎಂದು ಶಿಕ್ಷಕ ಸಮುದಾಯ ಆಗ್ರಹಿಸಿದೆ.
ಮಂಡ್ಯ: ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಧಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.…
ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ.…
ಕೊಳ್ಳೇಗಾಲ: ಮೇಯಲು ಬಿಟ್ಟಿದ್ದ ಮೇಕೆಗಳು ಯೂರಿಯಾ ಗೊಬ್ಬರ ತಿಂದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಹಳೆ…
ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ.…
ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್‌ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…
ಬೆಂಗಳೂರು: ನಟ ಕಿಚ್ಚ ಸುದೀಪ್ ಅಭಿನಯದ ಮಾರ್ಕ್ ಸಿನಿಮಾ ಟ್ರೈಲರ್ ಅದ್ಧೂರಿಯಾಗಿ ಬಿಡುಗಡೆ ಮಾಡಲಾಗಿದೆ. ವಿಜಯ್ ಕಾರ್ತಿಕೇಯ-ಸುದೀಪ್ ಕಾಂಬಿನೇಷನ್‌ನಲ್ಲಿ ಮೂಡಿಬಂದಿರುವ…