ರಾಜ್ಯ

ಸೆಪ್ಟೆಂಬರ್ ತಿಂಗಳಲ್ಲೇ ಕರ್ನಾಟಕದಲ್ಲಿ ಬಿರು ಬೇಸಿಗೆಯ ವಾತಾವರಣ

ಬೆಂಗಳೂರು: ಮುಂಗಾರು ಮಳೆಯ ಅಬ್ಬರ ಕಾಣಬೇಕಿದ್ದ ಸೆಪ್ಟೆಂಬರ್ ತಿಂಗಳಲ್ಲೇ ಕರ್ನಾಟಕದಲ್ಲಿ ಬಿರು ಬೇಸಿಗೆಯ ವಾತಾವರಣ ನಿರ್ಮಾಣವಾಗಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಕೊರತೆ ಮುಂದುವರಿದಿರುವ ಬೆನ್ನಲ್ಲೇ ತಾಪಮಾನ ಗಣನೀಯವಾಗಿ ಏರಿಕೆಯಾಗಿದ್ದು, ಜನರು ಸೆಪ್ಟೆಂಬರ್‌ನಲ್ಲಿಯೇ ಬೇಸಿಗೆಯ ಬಿಸಿಲಿನ ಅನುಭವ ಎದುರಿಸುವಂತಾಗಿದೆ.

ತಂಪಾದ ವಾತಾವರಣಕ್ಕೆ ಹೆಸರಾಗಿರುವ ಬೆಂಗಳೂರಿನಲ್ಲೂ ಬಿಸಿಲಿನ ತೀವ್ರತೆ ಹೆಚ್ಚಾಗಿದೆ. ನಗರದಲ್ಲಿ ಗರಿಷ್ಠ ತಾಪಮಾನ 32.6ರಿಂದ 33.9 ಡಿಗ್ರಿ ಸೆಲ್ಸಿಯಸ್‌ವರೆಗೆ ದಾಖಲಾಗಿದ್ದು, ಸೆಪ್ಟೆಂಬರ್ ತಿಂಗಳಲ್ಲಿ ಕಳೆದ ಒಂದು ದಶಕದ ಅವಧಿಯಲ್ಲಿ ಕಂಡುಬಂದ ಗರಿಷ್ಠ ತಾಪಮಾನ ಇದಾಗಿದೆ ಎಂದು ವರದಿ ತಿಳಿಸಿದೆ.

ಬೆಳಗ್ಗೆ 10 ಗಂಟೆಯಾಗುತ್ತಿದ್ದಂತೆ ಮಧ್ಯಾಹ್ನದ ಬಿಸಿಲಿನ ಅನುಭವವಾಗುತ್ತಿದ್ದು, ಶುಷ್ಕ ಗಾಳಿಯೂ ಉಷ್ಣತೆಯ ಅನುಭವವನ್ನು ಹೆಚ್ಚಿಸಿದೆ. ಸಾಮಾನ್ಯವಾಗಿ ಈ ಅವಧಿಯಲ್ಲಿ ಬಂಗಾಳಕೊಲ್ಲಿಯಿಂದ ತೇವಾಂಶಭರಿತ ಗಾಳಿ ಬೀಸಬೇಕಾಗಿದ್ದರೂ, ಹಲವು ಭಾಗಗಳಲ್ಲಿ ಅಂತಹ ವಾತಾವರಣ ಕಾಣಿಸುತ್ತಿಲ್ಲ.

ಕಲ್ಯಾಣ ಕರ್ನಾಟಕದ ಕಲಬುರಗಿ, ಯಾದಗಿರಿ, ರಾಯಚೂರು ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ 33ರಿಂದ 35 ಡಿಗ್ರಿ ಸೆಲ್ಸಿಯಸ್‌ವರೆಗೆ ತಲುಪಿದೆ. ಉತ್ತರ ಒಳನಾಡಿನ ಹಲವು ಪ್ರದೇಶಗಳಲ್ಲಿ ಒಣಹವೆ ಮುಂದುವರಿದಿದೆ. ಕರಾವಳಿ ಭಾಗದಲ್ಲೂ ಮಳೆಯ ಕೊರತೆಯಿಂದ ಸೆಕೆ ಹೆಚ್ಚಾಗಿದೆ. ಮಂಗಳೂರು, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆಯ ಬದಲು ಬಿಸಿಲಿನ ವಾತಾವರಣ ಮುಂದುವರಿದಿದೆ.

ರಾಜ್ಯದಲ್ಲಿ ವಾಡಿಕೆಯ ಮುಂಗಾರು ಮಳೆಯ ಕೊರತೆ ತಾಪಮಾನ ಏರಿಕೆಗೆ ಪ್ರಮುಖ ಕಾರಣವಾಗಿದ್ದು, ಮೋಡಗಳ ಕೊರತೆ ಮತ್ತು ಶುಷ್ಕ ಗಾಳಿಯಿಂದ ನೆಲದ ಉಷ್ಣತೆ ಹೆಚ್ಚಾಗಿದೆ. ಮಳೆ ಕೊರತೆಯ ಪರಿಣಾಮವಾಗಿ ಕೆರೆ-ಕಟ್ಟೆಗಳು ಹಾಗೂ ಜಲಮೂಲಗಳ ಮೇಲೂ ಒತ್ತಡ ಹೆಚ್ಚಾಗಿದೆ.

ಮಳೆಯ ಅಭಾವ ಕೃಷಿ ಚಟುವಟಿಕೆಗಳ ಮೇಲೂ ಪರಿಣಾಮ ಬೀರುವ ಆತಂಕ ಎದುರಾಗಿದೆ. ಈಗಾಗಲೇ ಮಳೆಗಾಗಿ ಕಾಯುತ್ತಿರುವ ರೈತರಿಗೆ ಮುಂದಿನ ದಿನಗಳ ಹವಾಮಾನ ನಿರ್ಣಾಯಕವಾಗಲಿದೆ.

ಆಂದೋಲನ ಡೆಸ್ಕ್

Recent Posts

ಅದ್ದೂರಿ ಶ್ರೀರಂಗಪಟ್ಟಣ ದಸರಾ ಬದಲು ಸಾಂಪ್ರದಾಯಿಕ ಆಚರಣೆ: ಸಚಿವ ಎನ್. ಚಲುವರಾಯಸ್ವಾಮಿ

ಮಂಡ್ಯ: ಮೈಸೂರು ದಸರಾಗಿಂತಲೂ ಪುರಾತನವಾದ ಶ್ರೀರಂಗಪಟ್ಟಣ ದಸರಾವನ್ನು ಈ ಬಾರಿ ಬರಗಾಲದ ಹಿನ್ನೆಲೆಯಲ್ಲಿ ಅದ್ದೂರಿತನದ ಬದಲು ಸಾಂಪ್ರದಾಯಿಕವಾಗಿ ಆಚರಿಸಲು ತೀರ್ಮಾನಿಸಲಾಗಿದೆ…

10 mins ago

ಹನೂರು: ಬಿಸಿಯೂಟಕ್ಕೂ ನೀರಿಲ್ಲ – ಖಾಲಿ ಬಿಂದಿಗೆ ಹಿಡಿದು ವಿದ್ಯಾರ್ಥಿಗಳ ಪ್ರತಿಭಟನೆ

ಹನೂರು: ತಾಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಂದನಪಾಳ್ಯ ಗ್ರಾಮದ ಸೆಂಟ್ ಆಂಥೋನಿ ಶಾಲೆಯಲ್ಲಿ ಕಳೆದ ಆರು ತಿಂಗಳಿನಿಂದ ಕುಡಿಯುವ…

36 mins ago

ಮದ್ದೂರಿನಲ್ಲಿ ಬೆಳ್ಳಂಬೆಳಗ್ಗೆ ಜವರಾಯನ ಅಟ್ಟಹಾಸ: ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಸಾವು

ಮಂಡ್ಯ: ಬೈಕ್‌ಗೆ ಹಾಲಿನ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಮಂಡ್ಯ…

4 hours ago

ರಾಜ್ಯದಲ್ಲಿ ಮಳೆ ಕೊರತೆ: ತಾಪಮಾನ ಏರಿಕೆ: ಹವಾಮಾನ ಇಲಾಖೆ ಮಹತ್ವದ ಮುನ್ಸೂಚನೆ

ಬೆಂಗಳೂರು: ರಾಜ್ಯದ ಬಹುತೇಕ ಕಡೆ ಮಳೆ ಕೊರತೆ ಮುಂದುವರಿದಿದ್ದು, ತಾಪಮಾನ ಏರಿಕೆಯಾಗುವ ಸಾಧ್ಯತೆ ಇದೆ. ಈ ಬಾರಿ ಮುಂಗಾರು ಕೊರತೆ…

8 hours ago

ಕೊಡಗು: ಪತ್ನಿಗೆ ಗುಂಡಿಕ್ಕಿ ಕೊಂದು ತಾನೂ ಗುಂಡು ಹಾರಿಸಿಕೊಂಡು ವೃದ್ಧ ಆತ್ಮಹತ್ಯೆ

ಸೋಮವಾರಪೇಟೆ: ತಾಲೂಕಿನ ಮಾದಾಪುರ ಹೋಬಳಿ ವ್ಯಾಪ್ತಿಯ ಕುಂಬಾರಗಡಿಗೆ ಗ್ರಾಮದಲ್ಲಿ ಕೌಟುಂಬಿಕ ಕಲಹ ಶಂಕೆಯಡಿ ವೃದ್ಧ ದಂಪತಿ ಶವವಾಗಿ ಪತ್ತೆಯಾಗಿದ್ದಾರೆ. ಕನ್ನಿಕಂಡ…

9 hours ago

ಬಿಗ್‌ಬಾಸ್ ಮನೆಯಿಂದ ದಿಢೀರ್ ಹೊರಬಂದ ಓಂ ಪ್ರಕಾಶ್ ರಾವ್: ಆಸ್ಪತ್ರೆಗೆ ದಾಖಲು..!!

ಬೆಂಗಳೂರು: ಬಿಗ್‌ಬಾಸ್ ಮನೆಯಲ್ಲಿ ಇದ್ದ ಓಂ ಪ್ರಕಾಶ್ ರಾವ್ ದಿಢೀರ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಹಿಂದೆ ಅಪಘಾತವೊಂದರಲ್ಲಿ ಓಂ ಪ್ರಕಾಶ್…

9 hours ago