Mysore
28
broken clouds

Social Media

ಸೋಮವಾರ, 13 ಏಪ್ರಿಲ 2026
Light
Dark

ಕೇರಳದಲ್ಲಿ ಎರಡನೇ ಮಂಕಿಪಾಕ್ಸ್‌ ಪ್ರಕರಣ ಪತ್ತೆ

ತಿರುವಂತನಪುರಂ: ಯುನೈಟೆಡ್‌ ಅರಬ್‌ ಎಮಿರೇಟ್ಸ್‌ನಿಂದ ಬಂದಿದ್ದ ಕೇರಳ ಮೂಲದ ಎರ್ನಾಕುಲಂನ 26 ವರ್ಷದ ಯುವಕನಿಗೆ ಮಂಕಿಪಾಕ್ಸ್‌ ಇಂದು ದೃಢಪಟ್ಟಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಮಂಕಿಪಾಕ್ಸ್‌ ದೃಢಪಟ್ಟಿರುವ ಬಗ್ಗೆ ಕೇರಳದ ನ್ಯಾಷನಲ್‌ ಇನ್ಸ್‌ಟಿಟ್ಯೂಟ್‌ ಆಫ್‌ ವೈರಾಲಜಿ ಲ್ಯಾಬ್‌ನಲ್ಲಿ ಪರೀಕ್ಷೆ ನಡೆಸಿದ್ದು, ಪುಣೆಯಲ್ಲಿರುವ ನ್ಯಾಷನಲ್‌ ಇನ್ಸ್‌ಟಿಟ್ಯೂಟ್‌ ಆಫ್‌ ವೈರಾಲಜಿಯಲ್ಲಿ ಜಿನೋಮಿಕ್‌ ಸೀಕ್ವೆನ್ಸಿಂಗ್‌ಗಾಗಿ ಮಾದರಿಗಳನ್ನು ಕಳುಹಿಸಲಾಗಿದೆ.

ಈ ಮಂಕಿಪಾಕ್ಸ್‌ ಪ್ರಕರಣ ಕೇರಳ ರಾಜ್ಯದಲ್ಲಿ 2ನೇ ವ್ಯಕ್ತಿಗೆ ಕಾಣಿಸಿಕೊಂಡಿದ್ದು, ದೇಶದಲ್ಲಿ ಮೂರನೇ ವ್ಯಕ್ತಿಗೆ ಮಂಕಿಪಾಕ್ಸ್‌ ಕಾಣಿಸಿಕೊಂಡಿದೆ.

ಈ ಹಿನ್ನೆಲೆಯಲ್ಲಿ ಕೇರಳದಲ್ಲಿ ಆರೋಗ್ಯ ಇಲಾಖೆ ಕಟ್ಟೆಚ್ಚರ ವಹಿಸಲಾಗಿದ್ದು, ಜನತೆ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.

 

Tags:
error: Content is protected !!