ತಿರುವಂತನಪುರಂ: ಯುನೈಟೆಡ್ ಅರಬ್ ಎಮಿರೇಟ್ಸ್ನಿಂದ ಬಂದಿದ್ದ ಕೇರಳ ಮೂಲದ ಎರ್ನಾಕುಲಂನ 26 ವರ್ಷದ ಯುವಕನಿಗೆ ಮಂಕಿಪಾಕ್ಸ್ ಇಂದು ದೃಢಪಟ್ಟಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಮಂಕಿಪಾಕ್ಸ್ ದೃಢಪಟ್ಟಿರುವ ಬಗ್ಗೆ ಕೇರಳದ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ವೈರಾಲಜಿ ಲ್ಯಾಬ್ನಲ್ಲಿ ಪರೀಕ್ಷೆ ನಡೆಸಿದ್ದು, ಪುಣೆಯಲ್ಲಿರುವ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ವೈರಾಲಜಿಯಲ್ಲಿ ಜಿನೋಮಿಕ್ ಸೀಕ್ವೆನ್ಸಿಂಗ್ಗಾಗಿ ಮಾದರಿಗಳನ್ನು ಕಳುಹಿಸಲಾಗಿದೆ.
ಈ ಮಂಕಿಪಾಕ್ಸ್ ಪ್ರಕರಣ ಕೇರಳ ರಾಜ್ಯದಲ್ಲಿ 2ನೇ ವ್ಯಕ್ತಿಗೆ ಕಾಣಿಸಿಕೊಂಡಿದ್ದು, ದೇಶದಲ್ಲಿ ಮೂರನೇ ವ್ಯಕ್ತಿಗೆ ಮಂಕಿಪಾಕ್ಸ್ ಕಾಣಿಸಿಕೊಂಡಿದೆ.
ಈ ಹಿನ್ನೆಲೆಯಲ್ಲಿ ಕೇರಳದಲ್ಲಿ ಆರೋಗ್ಯ ಇಲಾಖೆ ಕಟ್ಟೆಚ್ಚರ ವಹಿಸಲಾಗಿದ್ದು, ಜನತೆ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.
ಬಳ್ಳಾರಿ : ಜನಾರ್ಧನ ರೆಡ್ಡಿ ಮನೆ ಮುಂದೆ ವಾಲ್ಮೀಕಿ ಬ್ಯಾನರ್ ಅಳವಡಿಕೆ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದ್ದು,…
ಚಾಮರಾಜನಗರ : ತಾಲ್ಲೂಕಿನ ನಂಜೇದೇವಪುರ ಬಳಿ ನಾಲ್ಕು ಮರಿಗಳ ಜೊತೆ ತಾಯಿ ಹುಲಿ ಕಾಣಿಸಿಕೊಂಡಿದ್ದ ಹಿನ್ನೆಲೆಯಲ್ಲಿ ಅವುಗಳ ಸೆರೆಗಾಗಿ ಕೂಂಬಿಂಗ್…
ಮೈಸೂರು : ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಮಲ್ಲಿಕಾರ್ಜುನ ಬಾಲದಂಡಿ ಗುರುವಾರ ಅಧಿಕಾರ ಸ್ವೀಕಾರ ಮಾಡಿದರು. ಮಂಡ್ಯ ಜಿಲ್ಲೆಯ ಎಸ್ಪಿ…
ಗುಂಡ್ಲುಪೇಟೆ: ತಾಲ್ಲೂಕಿನ ಅಭಿವೃದ್ಧಿಗೆ ಶ್ರಮಿಸಿ ಏಳು ಬಾರಿ ಶಾಸಕಿ ,ಸಚಿವೆಯಾಗಿ ಮೊದಲ ಮಹಿಳಾ ಸ್ಪೀಕರ್ ಆದಂತಹ ಗಟ್ಟಿಗಿತ್ತಿ ಕೆ.ಎಸ್.ನಾಗರತ್ನಮ್ಮ ಅವರ…
ಗುಂಡ್ಲುಪೇಟೆ: ಪಟ್ಟಣದ ಕೂತನೂರು ಗುಡ್ಡ ಹಾಗೂ ತೆರಕಣಾಂಬಿ ಭಾಗದಿಂದ ಅಧಿಕ ಭಾರಹೊತ್ತು ಸಾಗುವ ಟಿಪ್ಪರ್ ಗಳ ಸಂಚಾರ ನಡೆಸುತಿದ್ದರು ಆರ್…
ಗುಂಡ್ಲುಪೇಟೆ: ಮೋಟರ್ ಆನ್ ಮಾಡುವ ಸಂದರ್ಭದಲ್ಲಿ ವಿದ್ಯುತ್ ಸ್ಪರ್ಶಿಸಿ ಕೂಲಿ ಕಾರ್ಮಿಕ ಮೃತಪಟ್ಟಿರುವ ಘಟನೆ ತಾಲೂಕಿನ ತೆರಕಣಾಂಬಿ ಗ್ರಾಮದ ತೋಟವೊಂದರಲ್ಲಿ…