ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ -1 ಫಲಿತಾಂಶದ ದಿನಾಂಕ ಪ್ರಕಟಣೆ ಗೊಂದಲಕ್ಕೆ ತೆರೆ ಬಿದ್ದಿದ್ದು, ಕರ್ನಾಟಕ ಪರೀಕ್ಷಾ ಮಂಡಳಿಯು ಇದೇ 9 (ಗುರುವಾರ) ರಂದು ಫಲಿತಾಂಶವನ್ನು ಪ್ರಕಟಿಸುವ ಸಾಧ್ಯತೆ ಇದೆ.
ಏಪ್ರಿಲ್ 9 ರಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಲು ತೀರ್ಮಾನಿಸಲಾಗಿದ್ದು, ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಸುದ್ದಿಗೋಷ್ಠಿ ನಡೆಸಿದ ಫಲಿತಾಂಶ ಪ್ರಕಟಿಸಲಿದ್ದಾರೆ. ಅಧಿಕೃತ ವೆಬ್‍ಸೈಟ್‍ನಲ್ಲೂ ವಿದ್ಯಾರ್ಥಿ ಫಲಿತಾಂಶವನ್ನು ನೋಡಬಹುದಾಗಿದೆ.
ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಗುರುವಾರ ಮತದಾನ ನಡೆಯಲಿದೆ. ಇದರಿಂದಾಗಿ ರಾಜ್ಯದಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ ಯಾವುದೇ ಪ್ರಮುಖ ಘೋಷಣೆಗಳನ್ನು ಮಾಡುವ ಮುನ್ನ ಚುನಾವಣಾ ಆಯೋಗದ ಅನುಮತಿ ಪಡೆಯುವುದು ಕಡ್ಡಾಯವಾಗಿದೆ. ಫಲಿತಾಂಶ ಬಿಡುಗಡೆ ಮಾಡಲು ಶಿಕ್ಷಣ ಇಲಾಖೆಯು ಚುನಾವಣಾ ಆಯೋಗದ ಅನುಮತಿಗಾಗಿ ಕಾಯುತ್ತಿದೆ.ಯಾವುದೇ ಕ್ಷಣದಲ್ಲಿ ಅನುಮತಿ ದೊರೆಯುವ ಸಂಭವಿದೆ.
ಸಾಮಾನ್ಯವಾಗಿ ಫಲಿತಾಂಶವನ್ನು ಶಿಕ್ಷಣ ಸಚಿವರ ಉಪಸ್ಥಿತಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಪ್ರಕಟಿಸಲಾಗುತ್ತದೆ. ಆದರೆ, ನೀತಿ ಸಂಹಿತೆ ಇರುವುದರಿಂದ ಸಚಿವರು ಅಧಿಕೃತವಾಗಿ ಫಲಿತಾಂಶ ಪ್ರಕಟಿಸಲು ಚುನಾವಣಾ ಆಯೋಗದಿಂದ ಅನುಮತಿ ಪಡೆಯಬೇಕಾಗುತ್ತದೆ. ಹಾಗಾಗಿ ಆಯೋಗದಿಂದ ಅಧಿಕೃತ ಒಪ್ಪಿಗೆ ಸಿಗುವವರೆಗೂ ಮಂಡಳಿಯು ಯಾವುದೇ ದಿನಾಂಕವನ್ನು ಘೋಷಿಸಿರಲಿಲ್ಲ.
ಫೆ.28 ರಿಂದ ಮಾರ್ಚ್ .17ವರೆಗೂ ದ್ವಿತೀಯ ಪಿಯುಸಿ ಪರೀಕ್ಷೆ ನಡೆದಿತ್ತು. ಪರೀಕ್ಷೆಯಲ್ಲಿ ಒಟ್ಟು 7,10,363 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದರು. 1217 ಪರೀಕ್ಷಾ ಕೇಂದ್ರದಲ್ಲಿ ದ್ವಿತೀಯ ಪಿಯು ಪರೀಕ್ಷೆ ನಡೆದಿತ್ತು. ಈ ವರ್ಷ 7.10 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಕಲಾ, ವಾಣಿಜ್ಯ ಮತ್ತು ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ತಮ್ಮ ಮುಂದಿನ ಭವಿಷ್ಯದ ಹಾದಿಯನ್ನು ನಿರ್ಧರಿಸಲು ಈ ಫಲಿತಾಂಶ ಬಹಳ ಮುಖ್ಯವಾಗಿದೆ.
ಫಲಿತಾಂಶ ಚೆಕ್ ಮಾಡುವುದು ಹೇಗೆ? ‘Karnataka 2nd PUC Result 2026’ ಲಿಂಕ್ ಮೇಲೆ ಕ್ಲಿಕ್ ಮಾಡಿ ನಿಮ್ಮ ರಿಜಿಸ್ಟ್ರೇಶನ್ ನಂಬರ್ ಮತ್ತು ಜನ್ಮ ದಿನಾಂಕವನ್ನು ನಮೂದಿಸಿ ‘Submit’ ಬಟನ್ ಒತ್ತಿದ ತಕ್ಷಣ ನಿಮ್ಮ ಅಂಕಪಟ್ಟಿ ಪರದೆ ಓಪನ್ ಆಗಲಿದೆ.
ನಾಗಮಂಗಲ : ಎರಡು ವರ್ಷಗಳ ಹಿಂದೆ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದು ಪಟ್ಟಣ ಕೋಮು…
ಬೆಂಗಳೂರು : ತಾಂತ್ರಿಕ ದೋಷ ಹಾಗೂ ಸರ್ವರ್ ಮಂದಗತಿಯ ಕಾರಣದಿಂದ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಿಸಲು ಬಿಪಿಎಲ್, ಎಪಿಎಲ್ ಪಡಿತರದಾರರಿಗೆ…
ಬಾಲಸುಬ್ರಹ್ಮಣ್ಯ ಕಂಜರ್ಪಣೆ ನಮ್ಮೂರಿನಲ್ಲಿ ಒಬ್ರು ಬಹಳ ಒಳ್ಳೆಯ ಮನುಷ್ಯ ಇದ್ರು. ಅವರು ಕುಡೀತಿರ್ಲಿಲ್ಲ. ಅವರಿಗೆ ಒಂದಿಬ್ಬರು ಗೆಳೆಯರು ಸೇರಿ ಕುಡಿಯೋದನ್ನು…
ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮುಂಬರುವ ಕೆಲವೇ ದಿನಗಳಲ್ಲಿ ನಡೆಯುವ ನಾಡ ಹಬ್ಬ ದಸರಾ ಮಹೋತ್ಸವದ ಅಂಗವಾಗಿ ಪ್ರವಾಸಿಗರನ್ನು ಆಕರ್ಷಿಸುವ ಸಲುವಾಗಿ,…
ಕಾರ್ಮಿಕರು ಅಥವಾ ವಿಶಾಲಾರ್ಥದಲ್ಲಿ ದುಡಿಯುವ ವರ್ಗಗಳು ತಮ್ಮ ಜೀವನಾವಶ್ಯ-ವೃತ್ತಿಕೇಂದ್ರಿತ ಅವಶ್ಯಕತೆಗಳನ್ನು ಈಡೇರಿಸಿಕೊಳ್ಳಲು ಉದ್ಯೋಗದಾತರ ವಿರುದ್ಧ ಮುಷ್ಕರ ಹೂಡುವುದು ಚಾರಿತ್ರಿಕವಾಗಿ ನಡೆದುಬಂದಿರುವಂತಹ…
ಅತ್ಯುತ್ತಮ ನಟನೆಗೆ ರಾಷ್ಟ್ರಪ್ರಶಸ್ತಿ ಪಡೆಯುವ ಚಿತ್ರಗಳಿದ್ದರೂ, ಆಯಾ ವರ್ಷದಲ್ಲಿನ ಸ್ಪರ್ಧೆಯ ಕಾರಣವೋ ಇನ್ನೇನೋ, ಅನಂತನಾಗ್ ಅವರಿಗೆ ಈ ತನಕ ಆ…