ರಾಜ್ಯ

ಫೆ.28ರಿಂದ ದ್ವಿತೀಯ ಪಿಯುಸಿ, ಮಾರ್ಚ್.‌18ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ: ಮಧು ಬಂಗಾರಪ್ಪ

ಬೆಂಗಳೂರು: ಪ್ರಸಕ್ತ 2026-27 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆ- 1 ಮಾರ್ಚ್ 18 ರಿಂದ ಏಪ್ರಿಲ್ 2 ರವರೆಗೆ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆ-1 ಫೆ.28 ರಿಂದ ಮಾರ್ಚ್.17ರವರೆಗೆ ನಡೆಯಲಿವೆ.
ದ್ವಿತೀಯ ಪಿಯುಸಿ ಪರೀಕ್ಷೆಗಳು ಪ್ರತಿದಿನ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆವರೆಗೆ ನಡೆದರೆ, ಎಸ್‍ಎಸ್‍ಎಲ್‍ಸಿ ಪರೀಕ್ಷೆ ಬೆಳಗ್ಗೆ 10 ರಿಂದ ಮಧ್ಯಾಹ್ನ 1:15 ಗಂಟೆ ವರೆಗೆ ನಡೆಯಲಿದೆ ಎಂದು ಶಾಲಾ ಶಿಕ್ಷಣ ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದರು.

ಪರೀಕ್ಷೆಗಳನ್ನು ವಿದ್ಯಾರ್ಥಿ ಸ್ನೇಹಿಯಾಗಿ ನಡೆಸಲು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಹಾಗೂ ಪೂರ್ವ ಸಿದ್ದತೆಯನ್ನು ಕೈಗೊಳ್ಳಲಾಗಿದೆ. ಫೆಬ್ರವರಿ 28ರಿಂದ ಮಾ.17ರವರೆಗೂ ಬೆಳಗ್ಗೆ 10ರಿಂದ ಮಧ್ಯಾಹ್ನ 1 ಗಂಟೆವರೆಗೆ ದ್ವಿತೀಯ ಪಿಯುಸಿ ಪರೀಕ್ಷೆಗಳು ನಡೆಯುತ್ತವೆ. ಮಾ.18ರಿಂದ ಏ.2ರವರೆಗೆ ಬೆಳಗ್ಗೆ 10ರಿಂದ ಮಧ್ಯಾಹ್ನ 1.15ರವರೆಗೆ ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ನಡೆಯುತ್ತವೆ. ದ್ವಿತೀಯ ಪಿಯುಸಿ ಪರೀಕ್ಷೆ-1ಕ್ಕೆ 7,10,363 ವಿದ್ಯಾರ್ಥಿಗಳು ನೊಂದಾಯಿಸಿಕೊಂಡಿದ್ದಾರೆ. ಅವರಲ್ಲಿ 6,46,801 ಹೊಸಬರು, 50,540 ಪುನರಾವರ್ತಿತ, 13,022 ಖಾಸಗಿ ಅಭ್ಯರ್ಥಿಗಳಿದ್ದಾರೆ ಎಂದು ಹೇಳಿದರು.

ವಿಜ್ಞಾನ ವಿಷಯದಲ್ಲಿ 2,92,645, ವಾಣಿಜ್ಯ ವಿಷಯದಲ್ಲಿ 2,11,174, ಕಲಾ ವಿಭಾಗದಲ್ಲಿ 1,42,982 ವಿದ್ಯಾರ್ಥಿಗಳು ನೊಂದಾಯಿತರಾಗಿದ್ದಾರೆ. ಪರೀಕ್ಷೆಗಾಗಿ 5174 ಕಾಲೇಜುಗಳು ನೊಂದಾಯಿಸಿಕೊಂಡಿವೆ. 1217 ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಏ.7ರಂದು ಪರೀಕ್ಷಾ ಫಲಿತಾಂಶ ಪ್ರಕಟಿಸುವ ಸಾಧ್ಯತೆ ಇದೆ. ವಿಫಲಗೊಂಡ ವಿದ್ಯಾರ್ಥಿಗಳಿಗಾಗಿ ಏ.25ರಿಂದ ಮೇ 9ರ ನಡುವೆ ಪರೀಕ್ಷೆ-2ನ್ನು ನಡೆಸಲು ದಿನಾಂಕ ನಿಗದಿಪಡಿಸಿದ್ದು, ಮೇ 22ರಂದು ಫಲಿತಾಂಶ ಪ್ರಕಟಿಸಲಾಗುವುದು ಎಂದರು.

ಎಸ್ಸೆಸ್ಸೆಲ್ಸಿ ಪರೀಕ್ಷೆಗೆ 9,02,889 ವಿದ್ಯಾರ್ಥಿಗಳು ನೊಂದಾಯಿಸಿಕೊಂಡಿದ್ದಾರೆ. ಅವರಲ್ಲಿ 8,12,855 ವಿದ್ಯಾರ್ಥಿಗಳು ಹೊಸಬರು, 62,845 ಪುನರಾವರ್ತಿತರು, ಖಾಸಗಿ ಅಭ್ಯರ್ಥಿಗಳು 27,189 ಮಂದಿ ಇದ್ದಾರೆ.

ಪರೀಕ್ಷೆಗಾಗಿ 15,941 ಶಾಲೆಗಳು ನೊಂದಾಯಿಸಿಕೊಂಡಿವೆ. 2,871 ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಏ.24ರಂದು ಫಲಿತಾಂಶ ಪ್ರಕಟಿಸುವ ಸಾಧ್ಯತೆಗಳಿವೆ.

ವಿಫಲಗೊಂಡ ವಿದ್ಯಾರ್ಥಿಗಳಿಗಾಗಿ ಮೇ 18ರಿಂದ ಮೇ 25ರ 2ನೇ ಪರೀಕ್ಷೆ ನಡೆಸಲಾಗುವುದು. ಅದರ ಫಲಿತಾಂಶವನ್ನು ಜೂ.1ರಂದು ಪ್ರಕಟಿಸುವ ಸಾಧ್ಯತೆ ಇದೆ. ಈಗಾಗಲೇ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ.

ವಿದ್ಯಾರ್ಥಿಗಳು ಯಾವುದೇ ಭಯ ಆತಂಕವಿಲ್ಲದೆ ಪರೀಕ್ಷೆ ಬರೆಯಬೇಕು. ಪರೀಕ್ಷಾ ಅಕ್ರಮಗಳನ್ನು ತಡೆಯಲು ಎಲ್ಲೆಡೆ ವೆಬ್‍ಕಾಸ್ಟಿಂಗ್ ನಡೆಸಲಾಗುವುದು.

ಕುಡಿಯುವ ನೀರು ಸೇರಿದಂತೆ ಇತರೆ ಸೌಲಭ್ಯಗಳನ್ನು ಏರ್ಪಡಿಸಲು ಕ್ರಮ ಕೈಗೊಳ್ಳಲಾಗಿದೆ. ದೂರದೂರಿನಿಂದ ಬರುವ ವಿದ್ಯಾರ್ಥಿಗಳ ವಿವರವನ್ನ ಮೊದಲೇ ಪಡೆದುಕೊಂಡು ಅವರಿಗೆ ನಿಗದಿತ ಸಮಯಕ್ಕೆ ಸಾರಿಗೆ ವ್ಯವಸ್ಥೆ ಕಲ್ಪಿಸಲು ಜಿಲ್ಲಾಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ. ಪರೀಕ್ಷಾ ಪ್ರವೇಶ ಪತ್ರವನ್ನು ತೋರಿಸಿದರೆ ಉಚಿತ ಪ್ರಯಾಣದ ಸೌಲಭ್ಯವಿದೆ ಎಂದು ಸಚಿವರು ತಿಳಿಸಿದರು.
2024ರಿಂದ ಪರೀಕ್ಷಾ ಕೇಂದ್ರಗಳಲ್ಲಿ ವೆಬ್ ಕಾಸ್ಟಿಂಗ್ ಆರಂಭಿಸಲಾಗಿದ್ದು, ಈ ಬಾರಿಯೂ ಎಲ್ಲಾ ಕೇಂದ್ರಗಳಲ್ಲಿ ವೆಬ್ ಕಾಸ್ಟಿಂಗ್ ಇರುತ್ತದೆ. ಇದರಿಂದ ಪರೀಕ್ಷೆಯ ಪಾರದರ್ಶಕತೆ ಹೆಚ್ಚಾಗುತ್ತದೆ ಎಂದು ಸಚಿವರು ತಿಳಿಸಿದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಓದುಗರ ಪತ್ರ: ನದಿ ಮಾಲಿನ್ಯ ತಡೆಗಟ್ಟಿ

ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ಮೂಲಕ ಹರಿಯುವ ಲಕ್ಷ್ಮಣತೀರ್ಥ ನದಿ ಕಾವೇರಿ ನದಿಯ ಉಪನದಿಯಾಗಿದ್ದು, ಹುಣಸೂರು ಭಾಗದ ಬಹಳ ಮುಖ್ಯವಾದ…

2 hours ago

ಓದುಗರ ಪತ್ರ: ಸಚಿವ ಸೋಮಣ್ಣ ಹೇಳಿಕೆ ಸ್ವಾಗತಾರ್ಹ

ರೈಲ್ವೆ ನೇಮಕಾತಿ ಪರೀಕ್ಷೆಗಳನ್ನು ಕರ್ನಾಟಕದವರು ಇನ್ನು ಮುಂದೆ ಕನ್ನಡದಲ್ಲಿ ಬರೆಯಲು ಕೇಂದ್ರ ಸರ್ಕಾರ ಅವಕಾಶ ಮಾಡಿಕೊಟ್ಟಿದೆ ಹಾಗೂ ರೈಲ್ವೆ ಇಲಾಖೆ…

2 hours ago

ಓದುಗರ ಪತ್ರ: ಅಪಾಯಕಾರಿ ಮರದ ಕೊಂಬೆ ತೆರವುಗೊಳಿಸಿ

ಮೈಸೂರಿನ ಮಾನಸಗಂಗೋತ್ರಿಯಿಂದ ಶ್ರೀ ಜಯಚಾಮರಾಜೇಂದ್ರ ಇಂಜಿನಿಯರಿಂಗ್ ಕಾಲೇಜಿಗೆ (ಎಸ್‌ಜೆಸಿಇ) ಸಂಪರ್ಕ ಕಲ್ಪಿಸುವ ರಸ್ತೆಯ ಎಡ ಬದಿಯಲ್ಲಿ ಇರುವ ಮರವೊಂದರ ಕೊಂಬೆ…

2 hours ago

ಓದುಗರ ಪತ್ರ: ನವ ಭಾರತದ ನಿರ್ಮಾತೃ ಡಾ.ಅಂಬೇಡ್ಕರ್

ಶ್ರೇಷ್ಠ ಸಂವಿಧಾನದ ಮೂಲಕ ಶೋಷಿತ ಸಮುದಾಯಗಳಿಗೆ ಶಿಕ್ಷಣ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲಿ ಮೀಸಲು ಸೌಲಭ್ಯ ಕಲ್ಪಿಸುವ ಮೂಲಕ ಅವರ ಬಾಳಿಗೆ…

2 hours ago

ಆಂತರಿಕ ಕ್ಲೋಭೆಯಿಂದ ಭಾರತ ರಕ್ಷಿಸಿದ ಅಂಬೇಡ್ಕರ್

ಸಿ.ಹರಕುಮಾರ್, ಬರಹಗಾರ ಬಾಬಾ ಸಾಹೇಬ್‌ರ ಧಾರ್ಮಿಕ ನಿಲುವು ಅರಿಯಲು ಬಹುತೇಕರು ವಿಫಲ ಭಾರತದ ಭಾಗ್ಯವಿಧಾತ ಮತ್ತು ಸಂವಿಧಾನ ಕರ್ತೃ ಡಾ.ಬಿ.ಆರ್.ಅಂಬೇಡ್ಕರ್…

2 hours ago

ಕೊಡಗು ಜಿಲ್ಲೆಯಲ್ಲೂ ಹೆಚ್ಚುತ್ತಿರುವ ತಾಪಮಾನ

ನವೀನ್ ಡಿಸೋಜ ಬಳಲಿಕೆಯೊಂದಿಗೆ ಆರೋಗ್ಯ ಹದಗೆಡುವ ಸಾಧ್ಯತೆ; ಅಗತ್ಯ ಮುನ್ನೆಚ್ಚರಿಕೆಗೆ ಆರೋಗ್ಯ ಇಲಾಖೆ ಸಲಹೆ  ಮಡಿಕೇರಿ: ಅಚ್ಚ ಹಸಿರಿನ ಪರಿಸರದೊಂದಿಗೆ…

2 hours ago