ಬೆಂಗಳೂರು: ರಾಜ್ಯಾದ್ಯಂತ ನಾಳೆಯಿಂದ ದ್ವೀತಿಯ ಪಿಯುಸಿ ಪರೀಕ್ಷೆ ಪ್ರಾರಂಭವಾಗಲಿದ್ದು, ಮೊದಲ ಬಾರಿಗೆ ಪರೀಕ್ಷೆಯೂ ವೆಬ್ ಕ್ಯಾಸ್ಟಿಂಗ್ ಕಣ್ಗಾವಲಿನಲ್ಲಿ ನಡೆಯಲಿದೆ.
ಮಾರ್ಚ್.1 ರಿಂದ ಮಾರ್ಚ್.20 ರವರೆಗೆ ನಡೆಯುವ ಪರೀಕ್ಷೆಗೆ ಶಿಕ್ಷಣ ಇಲಾಖೆ ಈಗಾಗಲೇ ಸಕಲ ಸಿದ್ಧತೆ ಮಾಡಿಕೊಂಡಿದ್ದು, ಇದೇ ಮೊದಲ ಬಾರಿಗೆ ವೆಬ್ ಕ್ಯಾಸ್ಟಿಂಗ್ ಕಣ್ಗಾವಲು ವ್ಯವಸ್ಥೆ ಮಾಡಿದೆ. ಈ ವ್ಯವಸ್ಥೆಯನ್ನು ಕಳೆದ ವರ್ಷ ಜಾರಿ ಮಾಡಲಾಗಿದ್ದು, ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಗೂ ವ್ಯವಸ್ಥೆ ಮಾಡುವ ಮೂಲಕ ಪರೀಕ್ಷಾ ಚಟುವಟಿಕೆಗಳ ಮೇಲೆ ನಿಗಾ ಇಟ್ಟಿದೆ. ಪರೀಕ್ಷಾ ಅಕ್ರಮ ತಡೆಯುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಇಲಾಖೆ ತಿಳಿಸಿದೆ.
ಪರೀಕ್ಷಾ ಸಿದ್ಧತೆ ಏನು?
ರಾಜ್ಯದಲ್ಲಿ ಒಟ್ಟು 7,13,862 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ. ಅವರಲ್ಲಿ 3,35,468 ವಿದ್ಯಾರ್ಥಿಗಳು ಮತ್ತು 3,35,389 ವಿದ್ಯಾರ್ಥಿನಿಯರು ಇದ್ದರೆ, ತೃತೀಯ ಲಿಂಗಿಗಳಿದ್ದಾರೆ. ಒಟ್ಟು 1,171 ಪರೀಕ್ಷಾ ಕೇಂದ್ರಗಳ ವ್ಯವಸ್ಥೆ ಮಾಡಲಾಗಿದೆ. ಇದರೊಂದಿಗೆ 2,342 ಸ್ಥಾನಿಕ ಜಾಗೃತದಳ, 76 ಉತ್ತರ ಪತ್ರಿಕೆ ಮೌಲ್ಯಮಾಪನ ಕೇಂದ್ರಗಳು ಹಾಗೂ 31,000 ಮೌಲ್ಯಮಾಪಕರನ್ನ ಕರ್ತವ್ಯಕ್ಕೆ ನಿಯೋಜಿಸಲಾಗಿದೆ ಎಂದು ಅಧಿಕಾರಿ ಮೂಲಗಳು ತಿಳಿಸಿವೆ.
ದ್ವಿತೀಯ ಪಿಯುಸಿ ಪರೀಕ್ಷೆಯ ನಿಯಮಗಳೇನು?
1. ಪರೀಕ್ಷಾ ದಿನಗಳಂದೂ ಪರೀಕ್ಷಾ ಕೇಂದ್ರದಿಂದ 200 ಮೀಟರ್ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.
2. ಪರೀಕ್ಷೆ ನಡೆಯುವ ಎಲ್ಲಾ ಕೇಂದ್ರಗಳಲ್ಲೂ ಸಿಸಿ ಕ್ಯಾಮರಾ ಮತ್ತು ವೆಬ್ ಕ್ಯಾಸ್ಟಿಂಗ್ ವ್ಯವಸ್ಥೆ ಇರಲಿದೆ.
3. ಪರೀಕ್ಷಾ ಕೇಂದ್ರದ ಸುತ್ತ-ಮುತ್ತ ಜೆರಾಕ್ಸ್, ಸೈಬರ್ ಸೆಂಬರ್ ಹಾಗೂ ಕಂಪ್ಯೂಟರ್ ಸೆಂಟರ್‌ಗಳನ್ನು ಮುಚ್ಚಲಾಗುತ್ತದೆ.
4. ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಪೊಲೀಸ್ ಭದ್ರತೆಯನ್ನು ಅಳವಡಿಸಲಾಗಿದೆ.
5. ಪ್ರಶ್ನೆ ಪತ್ರಿಕೆ ಲೀಕ್ ಮಾಡುವ ಮತ್ತು ಅಕ್ರಮ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಲು ಕ್ರಮ ವಹಿಸಲಾಗಿದೆ.
6. ಪರೀಕ್ಷಾ ಕೇಂದ್ರಕ್ಕೆ ವಿದ್ಯಾರ್ಥಿಗಳು ಸ್ಮಾರ್ಟ್ ವಾಚ್ ಹಾಗೂ ಎಲೆಕ್ಟ್ರಾನಿಕ್ ಉಪಕರಣಗಳು ನಿಷೇಧಿಸಲಾಗಿದೆ.
7. ಪ್ರಶ್ನೆ ಪತ್ರಿಕೆ ರವಾನೆ ಮಾಡೋದರಿಂದ ಹಿಡಿದು ಪರೀಕ್ಷಾ ಕೇಂದ್ರಕ್ಕೆ ತಲುಪವರೆಗೂ ಕ್ಯಾಮೆರಾ ರೆಕಾರ್ಡ್ ವ್ಯವಸ್ಥೆಯನ್ನು ಅಳವಡಿಸಲಾಗಿದೆ.
ಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಹಾಗೂ ಯಂಗ್ ಇಂಡಿಯಾ ಸಂಸ್ಥೆಗಳಿಗೆ ದೇಣಿಗೆ ನೀಡಿದ್ದಕ್ಕೆ ಇಡಿ ಸಮನ್ಸ್ ನೀಡಿದೆ. ಆ ಮೂಲಕ ನಮಗೆ…
ಚಿಕ್ಕಮಗಳೂರು: ಜಿಲ್ಲೆಯ ಕಡೂರು ತಾಲ್ಲೂಕಿನ ಸಖರಾಯಪಟ್ಟಣದಲ್ಲಿ ಕಾಂಗ್ರೆಸ್ ಕಾರ್ಯಕರ್ತನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಕೆ.ಜೆ.ಜಾರ್ಜ್ ಪ್ರತಿಕ್ರಿಯೆ ನೀಡಿದ್ದಾರೆ. ಕೊಲೆಯಾದ…
ಚಿಕ್ಕಮಗಳೂರು: ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದು ಕಾಂಗ್ರೆಸ್ ಕಾರ್ಯಕರ್ತ ಮೃತಪಟ್ಟ ಘಟನೆ ಕಡೂರು ತಾಲ್ಲೂಕಿನ ಸಖರಾಪಟ್ಟಣದ ಸಮೀಪದ ಕಲ್ಮುರುಡೇಶ್ವರ…
ಬೆಂಗಳೂರು: ಬಿಜೆಪಿ ಜೊತೆ ಸೇರಿಕೊಂಡ ಮೇಲೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಕೂಡ ಮನುವಾದಿ ಆಗಿಬಿಟ್ಟಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದರು.…
ಬೆಂಗಳೂರು: ಅಂಬೇಡ್ಕರ್ ಅವರೊಬ್ಬ ಮಹಾನ್ ವ್ಯಕ್ತಿ ಹಾಗೂ ದೇಶ ಕಂಡ ಒಬ್ಬ ಅಪರೂಪದ ನಾಯಕ. ದಲಿತರಿಗೆ ಮಾತ್ರವಲ್ಲದೆ ಎಲ್ಲಾ ಶೋಷಿತರಿಗೆ…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ2 ಆರೋಪಿ ದರ್ಶನ್‌ಗೆ ಬೆನ್ನುನೋವು ಮಾಯವಾಯ್ತಾ ಎಂಬ ಕುತೂಹಲ ಮನೆ ಮಾಡಿದೆ. ದರ್ಶನ್…